ರಾಜ್ಯದೆಲ್ಲೆಡೆ ಏರ್ಪೋರ್ಟ್‌ ಮಾದರಿ ರೈಲು ನಿಲ್ದಾಣಗಳ ಅಭಿವೃದ್ಧಿ: ರೈಲ್ವೆ ಸಚಿವ ವಿ. ಸೋಮಣ್ಣ

Sathish Kumar KH   | Kannada Prabha
Published : Nov 02, 2026, 06:13 AM IST
Bengaluru Bullet Train green flag

ಸಾರಾಂಶ

ಬೆಂಗಳೂರಿನಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಉದ್ಘಾಟನೆ ವೇಳೆ ಮಾತನಾಡಿದ ಸಚಿವ ವಿ.ಸೋಮಣ್ಣ, ರಾಜ್ಯದ ಎಲ್ಲಾ ತಾಲೂಕು ಮತ್ತು ಹೋಬಳಿ ಕೇಂದ್ರಗಳ ರೈಲ್ವೆ ನಿಲ್ದಾಣಗಳನ್ನು ವಿಮಾನ ನಿಲ್ದಾಣದ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದರು. ಕಳೆದ ಎರಡು ವರ್ಷಗಳಲ್ಲಿ 52 ಸಾವಿರ ಕೋಟಿ ರೂ.ಗಳ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ರಾಜ್ಯದ ಎಲ್ಲಾ ತಾಲೂಕು, ಹೋಬಳಿ ಕೇಂದ್ರಗಳಲ್ಲಿ ವಿಮಾನ ನಿಲ್ದಾಣ ಮಾದರಿಯಲ್ಲಿ ರೈಲ್ವೆ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ನಗರದ ಬೈಯಪ್ಪನಹಳ್ಳಿ ರೈಲ್ವೆ ನಿಲ್ದಾಣದಲ್ಲಿ ಭಾನುವಾರ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ವಿಮಾನ ನಿಲ್ದಾಣದ ಮಾದರಿಯಲ್ಲಿ ಅಭಿವೃದ್ಧಿ ಪಡಿಸಿ ಆ ಮೂಲಕ ಆಧುನಿಕ ಭಾರತ ನಿರ್ಮಾಣ ಮಾಡಲು ರೈಲ್ವೆ ಇಲಾಖೆ ಕೈಜೋಡಿಸಿದೆ ಎಂದು ಹೇಳಿದರು.

ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಉದ್ಘಾಟನಾ ಸಮಾರಂಭದ ಈ ಕ್ಷಣ ಐತಿಹಾಸಿಕ ಕ್ಷಣ, ಬೆಂಗಳೂರಿನಿಂದ ಮಹಾರಾಷ್ಟ್ರದ ಮುಂಬೈಗೆ ವಂದೇಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರ ಉದ್ಘಾಟಿಸಿರುವುದು ಹೆಮ್ಮೆಯ ಸಂಗತಿ, ಈ ಕ್ಷಣಕ್ಕೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾವೆಲ್ಲರೂ ಅಭಿನಂದನೆ ಸಲ್ಲಿಸಬೇಕು ಎಂದರು.

15 ವರ್ಷಗಳಲ್ಲಿ ಹೊಸ ಇತಿಹಾಸ

ರಾಜ್ಯದ ರೈಲ್ವೆ ಇತಿಹಾಸದಲ್ಲಿ ಕಳೆದ 15 ವರ್ಷಗಳಲ್ಲಿ ಹೊಸ ಇತಿಹಾಸ ಸೃಷ್ಟಿಸಲಾಗಿದೆ. ರೈಲ್ವೆ ಸಚಿವನಾದ ನಂತರ 30, 40 ವರ್ಷಗಳಿಂದ ಸ್ಥಗಿತಗೊಂಡಿದ್ದ ಕೆಲಸಗಳನ್ನು ಪೂರ್ಣಗೊಳಿಸಲು ಮೋದಿ ಸಹಕರಿಸಿದ್ದಾರೆ. ಕಳೆದ 2 ವರ್ಷಗಳ ಅವಧಿಯಲ್ಲಿ 52 ಸಾವಿರ ಕೋಟಿ ರುಪಾಯಿಗಳ ಯೋಜನೆ ಜಾರಿಗೆ ತಂದಿದ್ದು ಕೆಲವನ್ನು ಪೂರ್ಣಗೊಳಿಸಿದ್ದೇವೆ, ಇನ್ನೂ ಕೆಲವು ಮುಗಿಯುವ ಹಂತದಲ್ಲಿವೆ ಎಂದು ಮಾಹಿತಿ ನೀಡಿದರು.

ರಾಜ್ಯದಾದ್ಯಂತ 800ಕ್ಕೂ ಹೆಚ್ಚು ಕೆಳಸೇತುವೆ ಹಾಗೂ ಮೇಲ್ಸೇತುವೆಗಳನ್ನು ನಿರ್ಮಾಣ ಮಾಡಿದ್ದೇವೆ. 50 ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ಮಾಡದಂತಹ ಕೆಲಸಗಳಿಗಿಂತ 15 ವರ್ಷಗಳಲ್ಲಿ ಅವರಿಗಿಂತ 300 ಪಟ್ಟು ಹೆಚ್ಚು ಕೆಲಸ ಮಾಡಿ ಮುಗಿಸಿದ್ದೇವೆ ಎಂದರು.

PREV
Read more Articles on
click me!

Recommended Stories

ರಿಯಲ್ ಎಸ್ಟೇಟ್‌ನಲ್ಲಿ ಮೆಗಾ ಡೀಲ್, ದಕ್ಷಿಣ ಭಾರತದಲ್ಲಿ ಬೆಂಗಳೂರಿನ ಕಂಪನಿಯಿಂದ ₹1,500 ಕೋಟಿ ವೆಚ್ಚದ ಬೃಹತ್ ವಸತಿ ಯೋಜನೆ!
‘ಮಹಿಳೆಯರಿಗೆ ಇಂಥದ್ದೇ ಬೇಕು!’: ಬೆಂಗಳೂರು-ಮುಂಬೈ ವಂದೇ ಭಾರತ್‌ ಸ್ಲೀಪರ್ ಸೌಲಭ್ಯಕ್ಕೆ ಮಹಿಳಾ ಪ್ರಯಾಣಿಕರ ಮೆಚ್ಚುಗೆ