ಮಳೆಯಿಂದ ಸದ್ಯಕ್ಕಿಲ್ಲ ರಿಲೀಫ್.. ಈ 2 ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ!

Published : Jul 07, 2026, 09:00 AM IST
Karnataka Rain

ಸಾರಾಂಶ

ಹವಾಮಾನ ಇಲಾಖೆಯು ಕರ್ನಾಟಕದಾದ್ಯಂತ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಬೆಂಗಳೂರಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಕರಾವಳಿಯ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ರಾಜ್ಯದ ಇತರೆ ಹಲವು ಜಿಲ್ಲೆಗಳಿಗೂ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಜಾರಿಯಲ್ಲಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರಿಯಲಿದೆ. ಹವಾಮಾನ ಇಲಾಖೆಯ ಇತ್ತೀಚಿನ ಮುನ್ಸೂಚನೆಯಂತೆ ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ನಗರಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಜಿಲ್ಲಾವಾರು ಎಚ್ಚರಿಕೆಗಳನ್ನು ನೀಡಿದೆ.

ಎರಡು ಜಿಲ್ಲೆಗಳಿಗೆ ರೆಡ್ ಅಲರ್ಟ್

ಕರಾವಳಿ ಭಾಗದಲ್ಲಿ ಮಳೆಯ ರೌದ್ರಾವತಾರ ಮುಂದುವರಿಯಲಿದ್ದು, ಪ್ರಮುಖವಾಗಿ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಇಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಭಾಗದಲ್ಲಿ ಅತಿ ಹೆಚ್ಚು ಮಳೆಯಾಗುವ ಸಂಭವವಿದೆ ಎಂದು ಎಚ್ಚರಿಕೆ ನೀಡಿದೆ.

18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು ಸೇರಿದಂತೆ ಒಟ್ಟು 18 ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೆಳಗಾವಿ, ಧಾರವಾಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ವಿಜಯಪುರ, ಕಲ್ಬುರ್ಗಿ ಸೇರಿದಂತೆ ಒಟ್ಟು 18 ಜಿಲ್ಲೆಗಳು.

11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಮಳೆಯ ಪ್ರಮಾಣ ಸಾಧಾರಣದಿಂದ ಭಾರೀ ಇರಲಿರುವ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೀದರ್, ಯಾದಗಿರಿ, ಕೊಪ್ಪಳ, ಮಂಡ್ಯ, ತುಮಕೂರು, ಹಾವೇರಿ, ವಿಜಯನಗರ ಸೇರಿದಂತೆ 11 ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಇರಲಿದೆ.

ಗಾಳಿಯ ವೇಗ ಮತ್ತು ಮೀನುಗಾರರಿಗೆ ಎಚ್ಚರಿಕೆ

ಮಳೆಯ ಜೊತೆಗೆ ಗಾಳಿಯ ವೇಗವೂ ಹೆಚ್ಚಿರಲಿದೆ. ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರಲಿದ್ದು, ಸುರಕ್ಷತೆಯ ದೃಷ್ಟಿಯಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಇರುವುದರಿಂದ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಸಾಧ್ಯತೆ ಇದೆ. ವಾಹನ ಸವಾರರು ಮತ್ತು ಸಾರ್ವಜನಿಕರು ಅನಗತ್ಯ ಪ್ರಯಾಣವನ್ನು ತಪ್ಪಿಸಿ, ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

PREV
Read more Articles on
click me!

Recommended Stories

ಸ್ಲಂಗೆ ಬಿಎಲ್‌ಒಗಳು ಹೋಗದ ಕಾರಣ SIRಗೆ ಕಾಂಗ್ರೆಸ್ ನೆರವು: ಬಿಕೆ ಹರಿಪ್ರಸಾದ್ ಸಮರ್ಥನೆ
ಬಂಗಾರದ ವಂಚನೆ ಆರೋಪಿ ಐಶ್ವರ್ಯ ಗೌಡಗೆ ಹೈಕೋರ್ಟ್‌ ಬಿಗ್ ರಿಲೀಫ್: 5 ಕೇಸುಗಳ ಖುಲಾಸೆಗೆ ಇಲ್ಲಿವೆ ಕಾರಣ!