
ಬೆಂಗಳೂರು (ಆ.15): ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಸಾರ್ವಜನಿಕರಿಗೆ ಹಾಗೂ ಪಡಿತರ ಚೀಟಿದಾರರಿಗೆ ಸಂಬಂಧಿಸಿದಂತೆ ಮಹತ್ವದ ಪ್ರಕಟಣೆಗಳನ್ನು ಹೊರಡಿಸಿದೆ. ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಜೊತೆಗೆ ಎರಡು ತಿಂಗಳ ಪಡಿತರ ವಿತರಣೆ ಮತ್ತು ಇ-ಕೆವೈಸಿ ನಿಯಮಗಳ ಕುರಿತು ಮಾಹಿತಿ ನೀಡಲಾಗಿದೆ.
ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣ ಆದೇಶದನ್ವಯ, ಬೆಂಗಳೂರು ದಕ್ಷಿಣ ತಾಲ್ಲೂಕಿನ ಈ ಕೆಳಕಂಡ ಪ್ರದೇಶಗಳಲ್ಲಿ ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಹ ಸಹಕಾರ ಸಂಘ/ಸಂಸ್ಥೆಗಳು ಹಾಗೂ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ:
ಆದ್ಯತಾ ಕುಟುಂಬ (PHH/BPL):
ಸೆಂಟ್ರಲ್ ಪಡಿತರ ಚೀಟಿಯ ಪ್ರತಿ ಸದಸ್ಯನಿಗೆ 10 ಕೆ.ಜಿ (4 ಕೆ.ಜಿ ಅಕ್ಕಿ + 6 ಕೆ.ಜಿ ರಾಗಿ).
ರಾಜ್ಯ (State) ಪಡಿತರ ಚೀಟಿಯ ಪ್ರತಿ ಸದಸ್ಯನಿಗೆ 10 ಕೆ.ಜಿ ಅಕ್ಕಿ ಉಚಿತವಾಗಿ ದೊರೆಯಲಿದೆ.
ಎರಡು ಬಾರಿ ಬಯೋಮೆಟ್ರಿಕ್ ಕಡ್ಡಾಯ: ಎರಡು ತಿಂಗಳ ಪಡಿತರವನ್ನು ಒಟ್ಟಿಗೆ ನೀಡುತ್ತಿರುವುದರಿಂದ, ಫಲಾನುಭವಿಗಳು ಎರಡು ತಿಂಗಳಿಗೆ ಪ್ರತ್ಯೇಕವಾಗಿ ಬಯೋಮೆಟ್ರಿಕ್ ನೀಡುವುದು ಕಡ್ಡಾಯವಾಗಿದೆ.
ಇ-ಕೆವೈಸಿ (e-KYC) ನವೀಕರಣ: ಪಡಿತರ ಚೀಟಿಗೆ ಇ-ಕೆವೈಸಿ ಮಾಡಿಸಿ 5 ವರ್ಷ ಪೂರೈಸಿರುವ ಎಲ್ಲಾ ಫಲಾನುಭವಿಗಳು ಕೂಡಲೇ ತಮ್ಮ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.
ದೂರು ನೀಡಲು ಸಹಾಯವಾಣಿ: ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಕಡಿಮೆ ನೀಡಿದರೆ ಅಥವಾ ಹಣಕ್ಕಾಗಿ ಬೇಡಿಕೆ ಇಟ್ಟರೆ ಸಾರ್ವಜನಿಕರು ತಕ್ಷಣವೇ ರಾಜ್ಯ ಸಹಾಯವಾಣಿ ಸಂಖ್ಯೆ 1967 ಅಥವಾ ಉಪನಿರ್ದೇಶಕರ ಕಚೇರಿಗೆ ದೂರು ನೀಡಬಹುದು ಎಂದು ಇಲಾಖೆ ತಿಳಿಸಿದೆ.