
ಮಧುಗಿರಿ(ತುಮಕೂರು): ಬಿಹಾರದಲ್ಲಿ ಪ್ರಜಾಪ್ರಭುತ್ವದ ನಿಯಮಗಳನ್ನು ಗಾಳಿಗೆ ತೂರಿ ಚುನಾವಣೆ ನಡೆಸುವ ಮೂಲಕ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕಿಡಿಕಾರಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರದಲ್ಲಿ ನಡೆದಿರುವುದು ಚುನಾವಣೆಯೇ ಅಲ್ಲ, ಅಲ್ಲಿ ಮತ ಖರೀದಿ ಮಾಡಲಾಗಿದೆ. ಚುನಾವಣೆಗೆ ಮುಂಚೆ ತಲಾ ₹10000 ನೀಡಿ ಓಟು ಪಡೆದಿದ್ದಾರೆ. ಅಕ್ರಮವಾಗಿದೆ ಎಂಬ ನೆಪ ಹೇಳಿ ಲಕ್ಷಾಂತರ ಮತಾದರರನ್ನು ಹೊರ ಹಾಕಲಾಯಿತು. ಕೊನೆಗೆ ಎಷ್ಟೋ ಲಕ್ಷ ಜನರನ್ನು ಸೇರಿಸಲಾಯಿತು. ಚುನಾವಣಾ ಆಯೋಗ ಯಾರ ಕೈಯಲ್ಲಿದೆ ಎಂದು ಪ್ರಶ್ನಿಸಿದರು. ಈ ದೇಶದಲ್ಲಿ ಪ್ರಜಾಪ್ರಭುತ್ವವೇ ಇಲ್ಲ. ಸಿಬಿಐ, ಇ.ಡಿ., ಐ.ಟಿ. ಹೆಸರು ಹೇಳಿ ಹೆದರಿಸಲಾಗುತ್ತಿದೆ ಎಂದರು.
ಚುನಾವಣೆ ಆಯೋಗ ಕೇಂದ್ರ ಸರ್ಕಾರದ ಕೈಗೊಂಬೆಯಾಗಿದೆ. ಇವಿಎಂ ಹ್ಯಾಕ್ ಬಗ್ಗೆ ಸುರ್ಪೀಂ ಕೋರ್ಟ್ ನೀಡಿದ ತೀರ್ಪಿನ ಕುರಿತು ಮಾತನಾಡಿದ ಅವರು, ಕೆಲವು ವಿಚಾರಗಳನ್ನು ನಾವು ಧೈರ್ಯವಾಗಿ ಹೇಳುವ ಹಾಗಿಲ್ಲ ಎಂದರು