Cauvery River Incident: ಫೋಟೋ ತೆಗೆಸಿಕೊಳ್ಳಲು ಹೋಗಿ ಕಾವೇರಿ ನದಿಗೆ ಬಿದ್ದು ಕೊಚ್ಚಿ ಹೋದ ವ್ಯಕ್ತಿ

Kannadaprabha News   | Kannada Prabha
Published : Jul 08, 2025, 07:02 AM ISTUpdated : Jul 08, 2025, 10:16 AM IST
Mandya news

ಸಾರಾಂಶ

ಶ್ರೀರಂಗಪಟ್ಟಣದ ಬಳಿ ಫೋಟೋ ತೆಗೆಯಲು ಹೋದಾಗ ವ್ಯಕ್ತಿಯೊಬ್ಬರು ಕಾವೇರಿ ನದಿಗೆ ಬಿದ್ದು ಕೊಚ್ಚಿ ಹೋಗಿದ್ದಾರೆ. ಮೈಸೂರಿನ ಆಟೋ ಚಾಲಕ ಮಹೇಶ್ ಎಂದು ಗುರುತಿಸಲಾಗಿದ್ದು, ಶೋಧ ಕಾರ್ಯ ಮುಂದುವರೆದಿದೆ. ಮಳವಳ್ಳಿಯಲ್ಲಿ ಜೂಜಾಟದ ಮೇಲೆ ದಾಳಿ ನಡೆಸಿ ಏಳು ಮಂದಿಯನ್ನು ಬಂಧಿಸಲಾಗಿದೆ.

ಶ್ರೀರಂಗಪಟ್ಟಣ (ಜು.8): ವ್ಯಕ್ತಿಯೋರ್ವ ಫೋಟೋ ತೆಗೆಸಿಕೊಳ್ಳಲು ಹೋಗಿ ಕಾವೇರಿ ನದಿಗೆ ಬಿದ್ದು ಕೊಚ್ಚಿ ಹೋದ ಘಟನೆ ತಾಲೂಕಿನ ಬೆಳಗೊಳ ಗ್ರಾಮದ ಹೊರವಲಯದ ಸರ್ವಧರ್ಮ ಆಶ್ರಮದ ಬಳಿ ಘಟನೆ.

ಮೈಸೂರಿನ ಆಟೋ ಚಾಲಕ ಮಹೇಶ್ (36) ನದಿಯಲ್ಲಿ ಕೊಚ್ಚಿ ಹೋದ ವ್ಯಕ್ತಿ ಎಂದು ತಿಳಿದು ಬಂದಿದೆ.

ತಾಲೂಕಿನ ಸರ್ವಧರ್ಮ ಆಶ್ರಮದ ಬಳಿ ಭಾನುವಾರ ಸಂಜೆ ಸ್ನೇಹಿತರೊಂದಿಗೆ ಪಿಕ್ನಿಕ್ ಬಂದಿದ್ದ ವೇಳೆ ಘಟನೆ ಸಂಭವಿಸಿದ್ದು, ಆಶ್ರಮದ ಬಳಿಯ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಮೇಲೆ ನಿಂತು ಫೋಟೋ ತೆಗೆಸಿಕೊಳ್ಳಲು ಹೋಗಿದ್ದಾನೆ. ಈ ವೇಳೆ ಆಯತಪ್ಪಿ ಕಾವೇರಿ ನದಿ ಬಿದ್ದು ನದಿಯಲ್ಲಿ ನೀರು ಹೆಚ್ಚಿದ್ದ ಕಾರಣ ಕೊಚ್ಚಿ ಹೋಗಿದ್ದಾನೆ.

ಸದ್ಯ ನದಿಯಲ್ಲಿ ಕೊಚ್ಚಿ ಹೋದ ಮಹೇಶ್‌ಗಾಗಿ ಅಗ್ನಿಶಾಮಕ ದಳದಿಂದ ಶೋಧ ಕಾರ್ಯ ನಡೆದಿದೆ. ಈ ಸಂಬಂಧ ಕೆಆರ್‌ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೂಜು ಅಡ್ಡೆ ಮೇಲೆ ದಾಳಿ: 7 ಮಂದಿ ಬಂಧನ

ಮಳವಳ್ಳಿ: ತಾಲೂಕಿನ ನೆಲಮಾಕನಹಳ್ಳಿ, ನೆಲ್ಲೂರು ಗ್ರಾಮಗಳ ಹೊರವಲಯದ ಹಳ್ಳದ ಸಮೀಪ ಜೂಜು ಅಡ್ಡೆಯ ಮೇಲೆ ಗ್ರಾಮಾಂತರ ಪೊಲೀಸರು ದಾಳಿ ಮಾಡಿ ಏಳು ಮಂದಿಯನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಗ್ರಾಮಾಂತರ ಪಿಎಸ್ಐ ಶ್ರವಣ ದಾಸರಡ್ಡಿ ನೇತೃತ್ವದಲ್ಲಿ ಹೊರವಲಯದ ಸಾರ್ವಜನಿಕ ಸ್ಥಳದಲ್ಲಿ ಜೂಜು ಆಡುತ್ತಿದ್ದ ಗುಂಪಿನಲ್ಲಿ ಮೇಲೆ ದಾಳಿ ನಡೆಸಿದ ಪೊಲೀಸರು 7 ಮಂದಿಯನ್ನು ಬಂಧಿಸಿ ಪಣಕ್ಕಿಟ್ಟಿದ್ದ 13500 ರು. ವಶ ಪಡಿಸಿಕೊಂಡಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Read more Articles on
click me!

Recommended Stories

ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!