
ಬೆಂಗಳೂರು: ನಮ್ಮ ಮೆಟ್ರೋದ ಪ್ರಮುಖ ಮೂರು ನಿಲ್ದಾಣಗಳ ಹೆಸರು ಬದಲಾಗಲಿದೆ. ಈ ಬಗ್ಗೆ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯಕ್ಕೆ ರಾಜ್ಯದ ನಾಯಕರು ಮನವಿ ಸಲ್ಲಿಸಿದ್ದಾರೆ.
ಈ ಬಗ್ಗೆ ಖುದ್ದು ಮಾಹಿತಿ ನೀಡಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಗುಲಾಬಿ ಮಾರ್ಗ (ಪಿಂಕ್ ಲೈನ್)ದಲ್ಲಿ ಬರುವ ಮೂರು ನಿಲ್ದಾಣಗಳ ಹೆಸರು ಬದಲಾವಣೆ ಮಾಡಲು ಮನವಿ ಮಾಡಲಾಗಿದೆ. ತಾವರೆಕೆರೆ ಮೆಟ್ರೋ ನಿಲ್ದಾಣಕ್ಕೆ- ಸುದ್ದುಗುಂಟೆಪಾಳ್ಯ ಮೆಟ್ರೋ ನಿಲ್ದಾಣ ಎಂದು, ಜೆಪಿ ನಗರ 4ನೇ ಹಂತದ ಮೆಟ್ರೋ ನಿಲ್ದಾಣಕ್ಕೆ- ಎನ್.ಎಸ್ ಪಾಳ್ಯ ಮೆಟ್ರೋ ನಿಲ್ದಾಣ ಎಂದು ಹಾಗೂ IIMB ಮೆಟ್ರೋ ನಿಲ್ದಾಣಕ್ಕೆ ಬಿಳೇಕಹಳ್ಳಿ – IIMB ಮೆಟ್ರೋ ನಿಲ್ದಾಣ ಎಂದು ನಾಮಕರಣ ಮಾಡುವಂತೆ, ನಾನು, ಜಿಬಿಎ ಸಚಿವರಾದ ಕೃಷ್ಣಭೈರೇ ಗೌಡ, ಸಂಸದರಾದ ತೇಜಸ್ವಿ ಸೂರ್ಯ ಶಾಸಕರಾದ ಸತೀಶ್ ರೆಡ್ಡಿ, ಉದಯ್ ಗರುಡಾಚಾರ್, ಎಂ. ಕೃಷ್ಣಪ್ಪ ಅವರನ್ನು ಒಳಗೊಂಡ ನಮ್ಮ ಸಮಿತಿ ವತಿಯಿಂದ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ (BMRCL) ಮೂಲಕ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯಕ್ಕೆ ಅಧಿಕೃತವಾಗಿ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ. ಕೇಂದ್ರ ಸಚಿವಾಲಯದಿಂದ ಅಗತ್ಯ ಅನುಮೋದನೆ ದೊರೆತು ಈ ಹೆಸರುಗಳು ಶೀಘ್ರ ಅನುಷ್ಠಾನಗೊಳ್ಳುತ್ತದೆ ಎಂಬ ನಂಬಿಕೆ ನನಗಿದೆ ಎಂದು ಸಾರಿಗೆ ಸಚಿವರು ತಿಳಿಸಿದ್ದಾರೆ.
ರಾಮಲಿಂಗಾ ರೆಡ್ಡಿ ಅವರು ಟ್ವಿಟರ್‍ನಲ್ಲಿ ಮಾಹಿತಿ ನೀಡುತ್ತಿದ್ದಂತೆಯೇ ಶಂಕರ್ ನಾಗ್ ಅಭಿಮಾನಿಗಳು ಪ್ರಶ್ನೆ ಮಾಡಿದ್ದಾರೆ. ಸರ್ ದಯಮಾಡಿ ಶಂಕರ್ ನಾಗ್ ಹೆಸರನ್ನು ಯಾವುದಾದರೂ ಮೆಟ್ರೋ ನಿಲ್ದಾಣಕ್ಕೆ ಇಡುವಂತೆ ಮನವಿ ಮಾಡಿದ್ದಾರೆ. ಮೆಟ್ರೋ ನಿಲ್ದಾಣಕ್ಕೆ ಶಂಕರ್ ನಾಗ್ ಹೆಸರನ್ನು ಇಡುವಂತೆ ಅಭಿಮಾನಿಗಳು ಮೊದಲಿನಿಂದಲೂ ಕೇಳಿಕೊಳ್ಳುತ್ತಿದ್ದಾರೆ. ಇದೀಗ ನಾಯಕರಿಗೆ ಮತ್ತೆ ಶಂಕರ್ ನಾಗ್ ಹೆಸರು ಇಡುವಂತೆ ಒತ್ತಾಯಿಸಿದ್ದಾರೆ.
ಇನ್ನು ತಾವರಕೆರೆ ಮೆಟ್ರೋ ನಿಲ್ದಾಣದ ಹೆಸರು ಬದಲಾವಣೆಗೆ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ತಾವರಕೆರೆ ಶುದ್ಧ ಕನ್ನಡದ ಹೆಸರು. ಅದನ್ನು ಯಾಕೆ ಬದಲಾಯಿಸುತ್ತಿದ್ದೀರಿ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.
ಗುಲಾಬಿ ಮಾರ್ಗದ (Pink Line)
🚇 ತಾವರೆಕೆರೆ ಮೆಟ್ರೋ ನಿಲ್ದಾಣಕ್ಕೆ- ಸುದ್ದುಗುಂಟೆಪಾಳ್ಯ ಮೆಟ್ರೋ ನಿಲ್ದಾಣ
🚇 ಜೆಪಿ ನಗರ 4ನೇ ಹಂತದ ಮೆಟ್ರೋ ನಿಲ್ದಾಣಕ್ಕೆ- ಎನ್.ಎಸ್ ಪಾಳ್ಯ ಮೆಟ್ರೋ ನಿಲ್ದಾಣ
🚇 IIMB ಮೆಟ್ರೋ ನಿಲ್ದಾಣಕ್ಕೆ ಬಿಳೇಕಹಳ್ಳಿ – IIMB ಮೆಟ್ರೋ ನಿಲ್ದಾಣ
ಎಂದು ನಾಮಕರಣ ಮಾಡುವಂತೆ ನಾನು, ಜಿಬಿಎ ಸಚಿವರಾದ ಶ್ರೀ ಕೃಷ್ಣಭೈರೇ ಗೌಡ, ಸಂಸದರಾದ ಶ್ರೀ ತೇಜಸ್ವಿ ಸೂರ್ಯ ಶಾಸಕರಾದ ಶ್ರೀ ಸತೀಶ್ ರೆಡ್ಡಿ, ಶ್ರೀ ಉದಯ್ ಗರುಡಾಚಾರ್, ಶ್ರೀ ಎಂ. ಕೃಷ್ಣಪ್ಪ ಅವರನ್ನು ಒಳಗೊಂಡ ನಮ್ಮ ಸಮಿತಿ ವತಿಯಿಂದ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ (BMRCL) ಮೂಲಕ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯಕ್ಕೆ ಅಧಿಕೃತವಾಗಿ ಮನವಿ ಸಲ್ಲಿಸಲಾಗಿದೆ.
ಕೇಂದ್ರ ಸಚಿವಾಲಯದಿಂದ ಅಗತ್ಯ ಅನುಮೋದನೆ ದೊರೆತು ಈ ಹೆಸರುಗಳು ಶೀಘ್ರ ಅನುಷ್ಠಾನಗೊಳ್ಳುತ್ತದೆ ಎಂಬ ನಂಬಿಕೆ ನನಗಿದೆ.
#RamalingaReddy #NammaMetro #SGPalya #NSPalya #Bilekahalli #IIMB
— Ramalinga Reddy (@RLR_BTM) November 9, 2026
ಇನ್ನು, ನಮ್ಮ ಮೆಟ್ರೋದ ಗುಲಾಬಿ ಮಾರ್ಗದ (Pink Line) ಮೊದಲ ಹಂತದ ಉದ್ಘಾಟನೆಯು ನವೆಂಬರ್ 13, 2026 ರಂದು ನಡೆಯಲಿದೆ. ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗೆ (7.5 ಕಿ.ಮೀ ಉದ್ದದ ಮೊದಲ ಹಂತ) ಮೆಟ್ರೋ ಉದ್ಘಾಟನೆ ಆಗಲಿದೆ. ಮೊದಲ ಹಂತದಲ್ಲಿ 6 ಮೆಟ್ರೋ ನಿಲ್ದಾಣಗಳು ಕಾರ್ಯಾರಂಭ ಮಾಡಲಿವೆ. ಈ ಮಾರ್ಗದ ಉದ್ಘಾಟನೆಯೊಂದಿಗೆ ಬೆಂಗಳೂರು ಮೆಟ್ರೋ ಜಾಲವು 100 ಕಿಲೋಮೀಟರ್ ಗಡಿ ದಾಟಲಿದೆ.