ನಮ್ಮ ಮೆಟ್ರೋ ವಿಜಯನಗರ ನಿಲ್ದಾಣದಲ್ಲಿ ಹಳಿಗೆ ಹಾರಿದ ವ್ಯಕ್ತಿ: ನೇರಳೆ ಮಾರ್ಗದ ರೈಲು ಸಂಚಾರ ವ್ಯತ್ಯಯ!

Published : Nov 10, 2026, 02:03 PM IST
Bengaluru Namma Metro

ಸಾರಾಂಶ

ಬೆಂಗಳೂರಿನ ವಿಜಯನಗರ ಮೆಟ್ರೋ ನಿಲ್ದಾಣದಲ್ಲಿ ರೈಲು ಬರುತ್ತಿದ್ದಂತೆ ವ್ಯಕ್ತಿಯೊಬ್ಬರು ಹಳಿಗೆ ಜಿಗಿದಿದ್ದಾರೆ. ಆದರೆ, ಮೆಟ್ರೋ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಭಾರಿ ದುರಂತ ತಪ್ಪಿದ್ದು, ಆತನ ಪ್ರಾಣ ಉಳಿಸಲಾಗಿದೆ. ಇದರಿಂದಾಗಿ ನೇರಳೆ ಮಾರ್ಗದಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಬೆಂಗಳೂರು (ನ.10): ಬೆಂಗಳೂರಿನ ನಮ್ಮ ಮೆಟ್ರೋ (Namma Metro) ನೇರಳೆ ಮಾರ್ಗದ (Purple Line) ವಿಜಯನಗರ ಮೆಟ್ರೋ ನಿಲ್ದಾಣದಲ್ಲಿ ಧೃತಿಗೆಡಿಸುವ ಘಟನೆಯೊಂದು ನಡೆದಿದೆ. ಮಧ್ಯಾಹ್ನ ಸುಮಾರು 1:41ರ ವೇಳೆಗೆ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆಯೇ ವ್ಯಕ್ತಿಯೊಬ್ಬರು ದಿಢೀರನೆ ಹಳಿಗೆ ಜಿಗಿದಿದ್ದಾರೆ.

ಮೆಟ್ರೋ ಸಿಬ್ಬಂದಿಯ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಭಾರಿ ದುರಂತವೊಂದು ತಪ್ಪಿದ್ದು, ವ್ಯಕ್ತಿಯ ಜೀವ ರಕ್ಷಣೆ ಮಾಡಲಾಗಿದೆ.

ಸಿಬ್ಬಂದಿಯ ತರಿತ ಚಾಕಚಕ್ಯತೆ – ವ್ಯಕ್ತಿಯ ರಕ್ಷಣೆ

ವಿಜಯನಗರ ನಿಲ್ದಾಣಕ್ಕೆ ಮೆಟ್ರೋ ರೈಲು ಆಗಮಿಸುತ್ತಿದ್ದಂತೆಯೇ ಪ್ಲಾಟ್‌ಫಾರ್ಮ್‌ನಲ್ಲಿದ್ದ ವ್ಯಕ್ತಿ ಹಳಿಗೆ ಹಾರಿದ್ದಾರೆ. ಇದನ್ನು ತಕ್ಷಣವೇ ಗಮನಿಸಿದ ಮೆಟ್ರೋ ಭದ್ರತಾ ಸಿಬ್ಬಂದಿ ಹಾಗೂ ತಾಂತ್ರಿಕ ತಂಡ, ಸಮಯಪ್ರಜ್ಞೆ ಮೆರೆದು ತಕ್ಷಣವೇ ಹಳಿಯ ವಿದ್ಯುತ್ ಸಂಪರ್ಕವನ್ನು (Third Rail Power Supply) ಸ್ಥಗಿತಗೊಳಿಸಿದ್ದಾರೆ. ಬಳಿಕ ಹಳಿಗೆ ಇಳಿದು ವ್ಯಕ್ತಿಯನ್ನು ಸುರಕ್ಷಿತವಾಗಿ ಮೇಲಕ್ಕೆತ್ತಿ ರಕ್ಷಿಸಿದ್ದಾರೆ.

ನೇರಳೆ ಮಾರ್ಗದಲ್ಲಿ ರೈಲು ಸಂಚಾರ ವಿಳಂಬ

ಈ ಘಟನೆಯಿಂದಾಗಿ ನಮ್ಮ ಮೆಟ್ರೋದ ನೇರಳೆ ಮಾರ್ಗದಲ್ಲಿ (ಚಲ್ಲಘಟ್ಟದಿಂದ ವೈಟ್‌ಫೀಲ್ಡ್ ನಡುವೆ) ರೈಲು ಸಂಚಾರದಲ್ಲಿ ತಾತ್ಕಾಲಿಕವಾಗಿ ವ್ಯತ್ಯಯ ಉಂಟಾಗಿದೆ. ಸುರಕ್ಷತಾ ಪರಿಶೀಲನೆ ಹಾಗೂ ತಾಂತ್ರಿಕ ಪ್ರಕ್ರಿಯೆಗಳು ಪೂರ್ಣಗೊಳ್ಳುವವರೆಗೆ ನೇರಳೆ ಮಾರ್ಗದ ರೈಲುಗಳ ಸಂಚಾರ ವಿಳಂಬವಾಗಲಿದೆ ಎಂದು ಬಿಎಂಆರ್‌ಸಿಎಲ್ (BMRCL) ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಯಾಣಿಕರಿಗೆ ಉಂಟಾಗಿರುವ ಅನಾನುಕೂಲಕ್ಕೆ ಮೆಟ್ರೋ ಆಡಳಿತ ಮಂಡಳಿ ವಿಷಾದ ವ್ಯಕ್ತಪಡಿಸಿದ್ದು, ಪರಿಸ್ಥಿತಿ ಸಂಪೂರ್ಣವಾಗಿ ತಿಳಿಗೊಂಡ ನಂತರ ರೈಲು ಸಂಚಾರವನ್ನು ಯಥಾಸ್ಥಿತಿಗೆ ತರಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

PREV
Read more Articles on
click me!

Recommended Stories

ಆಕ್ಷನ್‌ಗೆ ರಿಯಾಕ್ಷನ್: ಛಲವಾದಿ ನಿವಾಸಕ್ಕೆ ಚಾಕು ಪಾರ್ಸೆಲ್, ಪರೋಕ್ಷವಾಗಿ ಸಮರ್ಥಿಸಿಕೊಂಡ್ರ ಪ್ರಿಯಾಂಕ್ ಖರ್ಗೆ? ಹೇಳಿದ್ದೇನು?
Bengaluru: 7ನೇ ಗಂಡನ ಮೇಲೆ ಮಹಿಳೆ ಹಾಕಿದ್ದ ಕೇಸ್ ರದ್ದು, ಹೈಕೋರ್ಟ್‌ನಿಂದ ಮಹತ್ವದ ಆದೇಶ