'ಅಮ್ಮ ನನ್ನನ್ನು ಕ್ಷಮಿಸು..' ಪ್ರೀತಿಸಿ ಮದುವೆಯಾಗಿ ನಾಲ್ಕೇ ತಿಂಗಳಿಗೆ ದುರಂತ ಅಂತ್ಯಕಂಡ ಶಿಕ್ಷಕಿ..!

Published : Jul 13, 2026, 09:09 AM ISTUpdated : Jul 13, 2026, 09:10 AM IST
teacher died in bengaluru

ಸಾರಾಂಶ

ಬೆಂಗಳೂರಿನಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಪ್ರೀತಿಸಿ ಮದುವೆ ಆಗಿದ್ದ ನವವಿವಾಹಿತ ಶಿಕ್ಷಕಿಯೊಬ್ಬರು ಹಠಾತ್ ನಿಧನರಾಗಿದ್ದಾರೆ. ಸಾವಿಗೂ ಮುನ್ನ ಬರೆದಿರುವ ನೋಟ್ ಇದೀಗ ಸಂಚಲನ ಮೂಡಿಸಿದೆ.

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಮನಕಲಕುವ ಘಟನೆ ನಡೆದಿದೆ. ಪ್ರೀತಿಸಿ ಮದುವೆಯಾದ ನಾಲ್ಕೇ ತಿಂಗಳಿಗೆ ನವವಿವಾಹಿತೆಯೊಬ್ಬರು ನೇಣು ಬಿಗಿದುಕೊಂಡು ಆತ್ಮ*ತ್ಯೆ ಮಾಡಿಕೊಂಡಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಟ್ಟೆಯಲ್ಲಿ ನಡೆದಿದೆ. ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಶ್ವೇತಾ (25) ಮೃತ ದುರ್ದೈವಿ. ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ದುರಂತ ಅಂತ್ಯ ಕಂಡಿದ್ದಾಳೆ.

ಪ್ರೀತಿಸಿ ವಿವಾಹವಾಗಿದ್ದ ಶ್ವೇತಾ

ಮೃತ ಶ್ವೇತಾ ಹಾಗೂ ಮೂರ್ತಿ ಕಳೆದ ನಾಲ್ಕು ತಿಂಗಳ ಹಿಂದೆಯಷ್ಟೇ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಮದುವೆಯಾದ ಕೆಲವೇ ದಿನಗಳಲ್ಲಿ ದಂಪತಿ ನಡುವೆ ಕಲಹ ಆರಂಭವಾಗಿತ್ತು ಎನ್ನಲಾಗಿದೆ. ಗಂಡ-ಹೆಂಡತಿ ನಡುವಿನ ಜಗಳವೇ ಈ ಆತ್ಮ*ಗೆ ಪ್ರಮುಖ ಕಾರಣ ಎಂದು ಶಂಕಿಸಲಾಗಿದೆ.

‘ಅಮ್ಮ ನನ್ನ ಕ್ಷಮಿಸಿಬಿಡು.. ಅವರನ್ನು ಸುಮ್ಮನೆ ಬಿಡಬೇಡಿ’

ಆತ್ಮಹತ್ಯೆಗೂ ಮುನ್ನ ಶ್ವೇತಾ ಮನಕಲಕುವ ನೋಟ್ ಬರೆದಿಟ್ಟಿದ್ದಾರೆ. ತನ್ನ ಸಾವಿಗೆ ಪತಿ ಮೂರ್ತಿ ಮತ್ತು ಆತನ ಅಕ್ಕನೇ ಕಾರಣ ಎಂದು ನೇರವಾಗಿ ಆರೋಪಿಸಿದ್ದಾರೆ. ನನ್ನ ಸಾವಿಗೆ ನನ್ನ ಗಂಡ ಮತ್ತು ಗಂಡನ ಅಕ್ಕ ಕಾರಣ. ಅವರಿಂದ ನನಗೆ ತುಂಬಾ ಹಿಂಸೆ ಆಗುತ್ತಿದೆ. ಬದುಕೋಕೆ ಆಸೆಯೇ ಇಲ್ಲದಂತೆ ಮಾಡಿದ್ದಾರೆ. ನಾನು ಸತ್ತ ಮೇಲೆ ಅವರನ್ನು ಮಾತ್ರ ಸುಮ್ಮನೆ ಬಿಡಬೇಡಿ ಅಮ್ಮ. ನನ್ನಿಂದ ತಪ್ಪಾಯಿತು, ನನ್ನನ್ನು ಕ್ಷಮಿಸಿಬಿಡು ಎಂದು ತಾಯಿಯನ್ನು ಉದ್ದೇಶಿಸಿ ಶ್ವೇತಾ ಪತ್ರದಲ್ಲಿ ಬರೆದಿದ್ದಾರೆ.

ಸ್ಥಳಕ್ಕೆ ಪೊಲೀಸರ ಭೇಟಿ, ಪತಿ ವಶಕ್ಕೆ

ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವೇತಾ ಬರೆದಿಟ್ಟಿರುವ ನೋಟ್ ವಶಕ್ಕೆ ಪಡೆದಿರುವ ಪೊಲೀಸರು, ಪತಿ ಮೂರ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಗಳ ಸಾ*ವಿನಿಂದ ತಾಯಿ ಪುಷ್ಪಾ ಅವರ ಅಕ್ರಂದನ ಮುಗಿಲು ಮುಟ್ಟಿದೆ. ಲವ್ ಮ್ಯಾರೇಜ್ ಮಾಡಿಕೊಂಡ ಮಗಳು ಹೀಗೆ ಅನಾಥವಾಗಿ ಹೋಗುತ್ತಾಳೆ ಎಂದು ಊಹಿಸಿರಲಿಲ್ಲ ಎಂದು ಕುಟುಂಬಸ್ಥರು ಕಣ್ಣೀರಿಡುತ್ತಿದ್ದಾರೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

PREV
Read more Articles on
click me!

Recommended Stories

Karnataka Cabinet expansion: ವಿದೇಶದಿಂದ ರಾಹುಲ್ ಗಾಂಧಿ ವಾಪಸ್; ಸಂಪುಟ ವಿಸ್ತರಣೆ ಚರ್ಚೆಗೆ ಡಿಕೆ, ಬಿಕೆ, ಸಿದ್ದು ನಾಳೆ ದಿಲ್ಲಿಗೆ?
ದಾನದ ಫೋಟೋ ಫೇಸ್‌ಬುಕ್‌ನಲ್ಲಿ ಶೇರ್‌ ಮಾಡಿದ್ದೇ ಅಕ್ರಮ ಆಸ್ತಿ ಕೇಸಲ್ಲಿ ಜಮೀರ್‌ಗೆ ಕುತ್ತು!