ಬೆಂಗಳೂರು ನಿವಾಸಿಗಳಿಗೆ ಗುಡ್ ನ್ಯೂಸ್, 30*40 ನಿವೇಶನಗಳಿಗೆ ಓಸಿ ವಿನಾಯಿತಿ

Published : Oct 14, 2025, 10:20 PM IST
Greater Bengaluru Authority

ಸಾರಾಂಶ

ಬೆಂಗಳೂರು ನಿವಾಸಿಗಳಿಗೆ ಗುಡ್ ನ್ಯೂಸ್, 30*40 ನಿವೇಶನಗಳಿಗೆ ಓಸಿ ವಿನಾಯಿತಿ ನೀಡಲಾಗಿದೆ. ಈ ಕುರಿತು ನಗರಾಭಿವೃದ್ಧಿ ಇಲಾಕೆ ಅಧಿಕೃತ ಆದೇಶ ಹೊರಡಿಸಿದೆ. ಏನಿದು ನಿವೇಷನಗಳ ಒಸಿ? ಹೊಸ ಆದೇಶದಲ್ಲಿ ಏನಿದೆ?

ಬೆಂಗಳೂರು (ಅ.14) ಬೆಂಗಳೂರು ನಿವಾಸಿಗಳಿಗೆ ನಗರಾಭಿವೃದ್ಧಿ ಇಲಾಖೆ ಗುಡ್ ನ್ಯೂಸ್ ನೀಡಿದೆ. ಇನ್ನು ಮುಂದೆ 30*40 ನಿವೇಶನಗಳಿಗೆ ಓಸಿ ಅಗತ್ಯವಿಲ್ಲ. ಒಸಿಯಿಂದ ವಿನಾಯಿತಿ ನೀಡಿ ಅದೇಶ ಹೊರಡಿಸಲಾಗಿದೆ. ಥರ್ಟಿ ಫಾರ್ಟಿ ಸೈಟ್ ನಲ್ಲಿ ನೆಲ +2 ಅಂತಸ್ತಿನ ಕಟ್ಟಡಗಳಿಗೆ, ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರ ಪಡೆಯುವುದರಿಂದ ವಿನಾಯಿತಿ ನೀಡಲಾಗಿದೆ. ಇದರಿಂದ ಬೆಂಳೂರಿನ ಲಕ್ಷಾಂತರ ಮಂದಿಗೆ ಈ ಆದೇಶ ನೆರವಾಗಲಿದೆ.

ನಗರಾಭಿವೃದ್ಧಿ ಇಲಾಖೆಯಿಂದ ಅಧಿಕೃತ ಆದೇಶ

ಹಿಂದೆ ಓಸಿ ಇಲ್ಲದ ಕಟ್ಟಡಗಳಿಗೆ ಜಲಮಂಡಳಿ, ಬೆಸ್ಕಾಂ ವಿದ್ಯುತ್ ಸಂಪರ್ಕ ನೀಡುತ್ತಿರಲಿಲ್ಲ. ಆದರೆ ಹೊಸ ಆದೇಶದಿಂದ ಬೆಂಗಳೂರಿನಲ್ಲಿ ನಿರ್ಮಾಣ ಆಗಿರುವ ಹಾಗೂ ನಿರ್ಮಾಣ ಹಂತದಲ್ಲಿರುವ ಲಕ್ಷಾಂತರ ಕಟ್ಟಡಗಳಿಗೆ ಅನುಕೂಲವಾಗಲಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅನ್ವಯ ಆಗುವಂತೆ ಆದೇಶ ಹೊರಡಿಸಲಾಗಿದೆ.

ಆದೇಶದಲ್ಲಿ ಏನಿದೆ?

ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆಯುವುದರಿಂದ ವಿನಾಯಿತಿ ನೀಡುವ ಬಗ್ಗೆ ಆದೇಶ ನೀಡಲಾಗಿದೆ. ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ, 2024ರ ಕಲಂ 241(7)ರ ಅನ್ವಯ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ, 1200 ಚದರ ಅಡಿಗಳ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಿರ್ಮಿಸಲಾಗಿರುವ, ನೆಲ+2 ಅಂತಸ್ತು ಅಥವಾ ಸ್ಕಿಲ್ಡ್ + 3 ಅಂತಸ್ತುಗಳವರೆಗಿನ ವಸತಿ ಕಟ್ಟಡಗಳಿಗೆ, ಸ್ವಾಧೀನಾನುಭವ ಪತ್ರ ಪಡೆಯುವುದರಿಂದ ವಿನಾಯಿತಿ ನೀಡಿ ಆದೇಶಿಸಿದೆ.

ಸಚಿವ ಸಂಪುಟದಲ್ಲಿ ನಿರ್ಧಾರ

ಈ ಮಹತ್ವದ ನಿರ್ಧಾರವನ್ನು ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ.ಅಕ್ಟೋಬರ್ 9 ಸಭೆಯಲ್ಲಿ ಈ ಕುರಿತು ಸುದೀರ್ಘ ಚರ್ಚೆ ನಡೆಸಲಾಗಿದೆ. ಅಧಿಕಾರಿಗಳ ಜೊತೆ ಮಹತ್ವದ ಮಾತುಕತೆ ನಡೆಸಿ ವರದಿ ತಯಾರಿಸಲಾಗಿತ್ತು. ಸಚಿವ ಸಂಪುಟದಲ್ಲಿ ವಿಷಯ ಪ್ರಸ್ತಾಪಿಸಿ ನಿರ್ಣಣಯ ಕೈಗೊಳ್ಳಲಾಗಿತ್ತು. ಇದೀಗ ಆದೇಶವಾಗಿ ಪ್ರಕಟಗೊಂಡಿದೆ.

ಈ ಆದೇಶದಿಂದ ನಿರ್ಮಾಣವಾಗಿರುವ ಹಾಗೂ ನಿರ್ಮಣ ಹಂತದಲ್ಲಿರುವ ಹಲವು ಕಟ್ಟಡ ಮಾಲೀಕರಲ್ಲಿ ಸಮಾಧಾನ ತಂದಿದೆ. ಹೊಸ ನಿಯಮದಿಂದ ಹಲವರು ನಿಟ್ಟುಸಿರು ಬಿಟ್ಟಿದ್ದಾರೆ.

 

PREV
Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
'63% ಭ್ರಷ್ಟಾಚಾರ' ಹೇಳಿಕೆ ವಿವಾದ: 'ನನ್ನ ಹೇಳಿಕೆ ತಿರುಚಲಾಗಿದೆ' ಉಪಲೋಕಾಯುಕ್ತ ನ್ಯಾ. ವೀರಪ್ಪ ಸ್ಪಷ್ಟನೆ