ಗಗನಕ್ಕೇರಿದ ಈರುಳ್ಳಿ, ಬೆಳ್ಳುಳ್ಳಿಗೆ ಬಂಗಾರದ ಬೆಲೆ

By Kannadaprabha NewsFirst Published Nov 7, 2019, 8:17 AM IST
Highlights

ಈರುಳ್ಳಿ, ಬೆಳ್ಳುಳ್ಳಿ ಬೆಳೆ ನೆಲಕಚ್ಚಿ ರೈತರು ಸಂಕಷ್ಟದಲ್ಲಿದ್ದರೂ, ಬೆಲೆ ಕುಸಿತದಿಂದ ರೈತರು ಕಂಗಾಲಾಗಿದ್ದಾರೆ. ಆದರೂ ಬೆಂಗಳೂರಿನಲ್ಲಿ ಈರುಳ್ಳಿ, ಬೆಳ್ಳುಳ್ಳಿ ಬೆಲೆ ಗಗನಮುಖಿಯಾಗಿದೆ. ಇತ್ತೀಚೆಗೆ ಈರುಳ್ಳಿ ಪೂರೈಕೆಯಲ್ಲಿ ವ್ಯತ್ಯಯ ಆಗಿರುವುದರಿಂದ ಬಂಗಾರದ ಬೆಲೆಯಾಗಿದೆ. 

ಬೆಂಗಳೂರು [ನ.07]: ರಾಜ್ಯದಲ್ಲಿ ಭಾರಿ ಮಳೆಗೆ ಈರುಳ್ಳಿ, ಬೆಳ್ಳುಳ್ಳಿ ಬೆಳೆ ನೆಲಕಚ್ಚಿ ರೈತರು ಸಂಕಷ್ಟದಲ್ಲಿದ್ದರೂ, ಬೆಲೆ ಕುಸಿತದಿಂದ ರೈತರು ಕಂಗಾಲಾಗಿದ್ದಾರೆ. ಆದರೂ ಬೆಂಗಳೂರಿನಲ್ಲಿ ಈರುಳ್ಳಿ, ಬೆಳ್ಳುಳ್ಳಿ ಬೆಲೆ ಗಗನಮುಖಿಯಾಗಿದೆ. ಇತ್ತೀಚೆಗೆ ಈರುಳ್ಳಿ ಪೂರೈಕೆಯಲ್ಲಿ ವ್ಯತ್ಯಯ ಆಗಿರುವುದರಿಂದ ಈರುಳ್ಳಿ ಬೆಲೆ ಬೆಂಗಳೂರಿನಲ್ಲಿ ಮತ್ತೆ ಗಗನಕ್ಕೇರಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕೆ.ಜಿ ಈರುಳ್ಳಿ 65 ರು.ಕ್ಕಿಂತಲೂ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ.

ದಕ್ಷಿಣ ಭಾರತದ ರಾಜ್ಯಗಳು, ಗುಜರಾತ್, ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರ ಪ್ರದೇಶಗಳಲ್ಲಿ ಭಾರಿ ಮಳೆಯಿಂದಾಗಿ ಬೆಳೆಗಳು ಹಾನಿಗೊಳಗಾಗಿವೆ. ಕಳೆದ ವರ್ಷವೂ ಅರ್ಧದಷ್ಟು ಮಾತ್ರ ಬೆಳೆ ಬಂದಿತ್ತು. ಈ ಬಾರಿಯೂ ಕೊಯ್ಲಿಗೆ ಬಂದಿದ್ದ ಈರುಳ್ಳಿ, ಬೆಳ್ಳುಳ್ಳಿಯೂ ಮಳೆಗೆ ಕೊಳೆತು ಹೋಗಿದೆ. ಇದರಿಂದ ಈರುಳ್ಳಿ ಹಾಗೂ ಬೆಳ್ಳುಳ್ಳಿ ಬೆಳೆ ಪ್ರಮಾಣ ಕಡಿಮೆಯಾಗಿದ್ದು, ಬೆಲೆ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ
ಇನ್ನಷ್ಟು ಬೆಲೆ ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿದೆ.

ಇದೇ ಪರಿಸ್ಥಿತಿ ಬೆಳ್ಳುಳ್ಳಿಗೂ ಬಂದಿದೆ. ತಿಂಗಳ ಹಿಂದಷ್ಟೇ ಕೆ.ಜಿ.ಗೆ 100 ರಿಂದ 120 ರ ಆಸುಪಾಸಿನಲ್ಲಿದ್ದ ಬೆಳ್ಳುಳ್ಳಿ ಬೆಲೆಯು ನೆರೆ, ಪ್ರವಾಹದಿಂದ ಹಾನಿಯ ಹಿನ್ನೆಲೆ ದುಪ್ಪಟ್ಟಾಗಿದೆ. ಸದ್ಯ ಮಾರುಕಟ್ಟೆಯಲ್ಲಿ ಒಂದು ಕೆ.ಜಿ.200 ರು.ರಿಂದ 220ರು.ವರೆಗೆ ದರ ನಿಗದಿಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಅತ್ಯಂತ ಕಳಪೆ ದರ್ಜೆ ಬೆಳ್ಳುಳ್ಳಿ ಕೆ.ಜಿ.ಗೆ 150- 180 ರು., ಚಿಕ್ಕಗಾತ್ರದ ಬೆಳ್ಳುಳ್ಳಿ ಗಡ್ಡೆಗಳು ಕೆ.ಜಿ. 180-220 ರು. ರವರೆಗೆ ಬಿಕರಿಯಾಗುತ್ತಿವೆ. ಎಪಿಎಂಸಿಯಲ್ಲಿ ಬೆಳ್ಳುಳ್ಳಿ ಒಂದು ಕ್ವಿಂಟಾಲ್‌ಗೆ 6500 ರು.ದಿಂದ 18 ಸಾವಿರ ವರೆಗೆ ದರ ನಿಗದಿಯಾಗಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕೊಳೆತಿದ್ದರಿಂದ ರೈತರಿಗೆ ನಷ್ಟ: ಉತ್ತರ ಕರ್ನಾಟಕ ಹಾಗೂ ಮಹಾರಾಷ್ಟ್ರ ಭಾಗದಲ್ಲಿ ದೇಶಕ್ಕೆ ಅಗತ್ಯವಿರುವ ಶೇ. 50 ರಷ್ಟು ಬೆಳ್ಳುಳ್ಳಿ, ಈರುಳ್ಳಿ ಬೆಳೆಯಲಾಗುತ್ತದೆ. ಆದರೆ, ಮಳೆಗೆ ಈರುಳ್ಳಿ, ಬೆಳ್ಳುಳ್ಳಿ ಜಮೀನಿನಲ್ಲೇ ಕೊಳೆತು ಹೋಗಿದೆ. ಬೆಲೆ ಏರಿಕೆಯಿದ್ದರೂ ಬೆಳೆದ ರೈತರಿಗೆ ಮಾತ್ರ ಲಾಭ ಸಿಗದೆ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ ಎನ್ನುತ್ತಾರೆ ಎಪಿಎಂಸಿ ವರ್ತಕರು.

click me!