ಪರಂ ಆಪ್ತ ಸಾವು: ಐಟಿ ಅಧಿಕಾರಿಗಳಿಗೆ ನೋಟಿಸ್‌

Published : Oct 19, 2019, 07:10 AM IST
ಪರಂ ಆಪ್ತ ಸಾವು: ಐಟಿ ಅಧಿಕಾರಿಗಳಿಗೆ ನೋಟಿಸ್‌

ಸಾರಾಂಶ

ಡಾ.ಜಿ.ಪರಮೇಶ್ವರ್‌ ಆಪ್ತ ಸಹಾಯಕ ರಮೇಶ್‌ ಆತ್ಮಹತ್ಯೆ ಪ್ರಕರಣ ಸಂಬಂಧ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ಜ್ಞಾನಭಾರತಿ ಠಾಣೆ ಪೊಲೀಸರು ನೋಟಿಸ್‌ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರು [ಅ.19]:  ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಆಪ್ತ ಸಹಾಯಕ ರಮೇಶ್‌ ಆತ್ಮಹತ್ಯೆ ಪ್ರಕರಣ ಸಂಬಂಧ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ಜ್ಞಾನಭಾರತಿ ಠಾಣೆ ಪೊಲೀಸರು ನೋಟಿಸ್‌ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಮೃತ ರಮೇಶ್‌ ಅವರು ಆತ್ಮಹತ್ಯೆ ಮುನ್ನ ಬರೆದಿದ್ದಾರೆ ಎನ್ನಲಾದ ಡೆತ್‌ ನೋಟ್‌ನಲ್ಲಿ ಐಟಿ ದಾಳಿ ಬಗ್ಗೆ ಉಲ್ಲೇಖಿಸಿದ್ದರು. ಅಲ್ಲದೆ, ಪ್ರಕರಣ ಕುರಿತು ರಮೇಶ್‌ ಕುಟುಂಬದ ಸದಸ್ಯರು, ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ರಮೇಶ್‌ ಸಾವಿಗೆ ಐಟಿ ಅಧಿಕಾರಿಗಳ ಕಿರುಕುಳ ಕಾರಣ ಎಂದು ಆರೋಪಿಸಿದ್ದರು. ಈ ಆರೋಪ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳ ವಿಚಾರಣೆ ನಡೆಸಲು ಜ್ಞಾನಭಾರತಿ ಠಾಣೆ ಪೊಲೀಸರು ಮುಂದಾಗಿದ್ದು, ಸೋಮವಾರ ಐಟಿ ಅಧಿಕಾರಿಗಳು ಪೊಲೀಸರಿಗೆ ಪ್ರಕರಣದ ಬಗ್ಗೆ ಹೇಳಿಕೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

ವೈದ್ಯಕೀಯ ಸೀಟು ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಶಂಕೆ ಹಿನ್ನೆಲೆಯಲ್ಲಿ ಅ.10ರಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ನಡೆದ ಎರಡು ದಿನಗಳ ಬಳಿಕ ಅವರ ಆಪ್ತ ಸಹಾಯಕ ರಮೇಶ್‌ ಆತ್ಮಹತ್ಯೆಗೆ ಶರಣಾಗಿದ್ದರು.

PREV
click me!

Recommended Stories

ಕಾಮಿಡಿ ಕಿಲಾಡಿಗಳು ಶೋನಲ್ಲಿ ಹಿಂದು ದೇವತೆಗಳ ಬಗ್ಗೆ ಅವಹೇಳನಕ್ಕೆ ‘ಹೈ’ ಕಿಡಿ
ಬೆಂಗಳೂರು ನಗರದಲ್ಲಿ ಶೀಘ್ರವೇ ಪೇ ಆ್ಯಂಡ್‌ ಪಾರ್ಕ್‌ ಜಾರಿ