ಪವಿತ್ರ ಗೌಡ ಸ್ಥಳಾಂತರ, ದರ್ಶನ್‌ಗೂ ಬಿಗಿ ಹಿಡಿದ ಜೈಲು ಅಧಿಕಾರಿಗಳು.. ಇಷ್ಟಕ್ಕೆಲ್ಲ ಕಾರಣ ಪ್ರಜ್ವಲ್‌ ರೇವಣ್ಣ

Published : Aug 15, 2026, 05:54 PM IST
Darshan and Pavitra Gowda

ಸಾರಾಂಶ

ಪ್ರಜ್ವಲ್ ರೇವಣ್ಣ ಅವರ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆಯಾದ ಬೆನ್ನಲ್ಲೇ, ಪರಪ್ಪನ ಅಗ್ರಹಾರ ಜೈಲಿನಲ್ಲಿ ಭದ್ರತೆಯನ್ನು ತೀವ್ರಗೊಳಿಸಿ ಹೈಪ್ರೊಫೈಲ್ ಕೈದಿಗಳ ಮೇಲೆ ಬಿಗಿ ಕಣ್ಗಾವಲು ಇಡಲಾಗಿದೆ. ಹೊಸ ನಿಯಮಗಳ ಭಾಗವಾಗಿ, ನಟ ದರ್ಶನ್ ಅವರ ಬ್ಯಾರಕ್ ಸುತ್ತ ಸಿಸಿಟಿವಿ ಕಣ್ಗಾವಲು ಹೆಚ್ಚಿಸಲಾಗಿದ್ದು, ಸಹ-ಆರೋಪಿ ಪವಿತ್ರಾಗೌಡ ಅವರನ್ನು 16 ಕೈದಿಗಳಿರುವ ದೊಡ್ಡ ಬ್ಯಾರಕ್‌ಗೆ ಸ್ಥಳಾಂತರಿಸಲಾಗಿದೆ.

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿರುವ ಪ್ರಜ್ವಲ್ ರೇವಣ್ಣ ಅವರ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆಯಾದ ಬೆನ್ನಲ್ಲೇ, ಜೈಲಿನಲ್ಲಿ ಭದ್ರತೆಯನ್ನು ತೀವ್ರಗೊಳಿಸಲಾಗಿದೆ. ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಅವರು ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬೆನ್ನಲ್ಲೇ ಜೈಲಾಧಿಕಾರಿಗಳು ಹೈಪ್ರೊಫೈಲ್ ಕೈದಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.

ಕಾರಾಗೃಹ ಡಿಜಿಪಿ ಭೇಟಿ, ಭದ್ರತೆ ಪರಿಶೀಲನೆ

ಪ್ರಜ್ವಲ್ ರೇವಣ್ಣ ಅವರ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆಯಾದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಅವರು ನಿನ್ನೆ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಭೇಟಿಯ ನಂತರ ಜೈಲಿನಲ್ಲಿ ಮತ್ತಷ್ಟು ಬಿಗಿ ವ್ಯವಸ್ಥೆ ಕಲ್ಪಿಸಲಾಗಿದೆ. ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಹಾಗೂ ಪವಿತ್ರಾಗೌಡ ಅವರ ಮೇಲೆಯೂ ಜೈಲಾಧಿಕಾರಿಗಳು ತೀವ್ರ ನಿಗಾ ಇರಿಸಿದ್ದಾರೆ.

ಜೈಲಿನ ಭದ್ರತಾ ಹಿತದೃಷ್ಟಿಯಿಂದ ಪವಿತ್ರಾಗೌಡ ಅವರ ಬ್ಯಾರಕ್ ಅನ್ನು ಅಧಿಕಾರಿಗಳು ಬದಲಾಯಿಸಿದ್ದಾರೆ. ಇಷ್ಟು ದಿನ ಕೇವಲ ಇಬ್ಬರು ಖೈದಿಗಳಿದ್ದ ಬ್ಯಾರಕ್‌ನಲ್ಲಿದ್ದ ಪವಿತ್ರಾಗೌಡ ಅವರನ್ನು ಈಗ ಬೇರೆಡೆಗೆ ಸ್ಥಳಾಂತರಿಸಲಾಗಿದ್ದು, ಬರೋಬ್ಬರಿ 16 ಖೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್ ಮಾಡಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಅವರ ಬ್ಯಾರಕ್ ಬಳಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ದರ್ಶನ್ ಅವರ ಪ್ರತಿಯೊಂದು ಚಟುವಟಿಕೆಯ ಮೇಲೆ ಕಣ್ಣಿಡಲು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಸಿಸಿಟಿವಿ ಕಣ್ಗಾವಲಿನ ಮೂಲಕ ಅಧಿಕಾರಿಗಳು ನಿರಂತರವಾಗಿ ಜೈಲಿನ ಚಟುವಟಿಕೆಗಳನ್ನು ಗಮನಿಸುತ್ತಿದ್ದಾರೆ.

ಇದೇ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರುವ (Approver) ಪ್ರದೂಷ್ ಇರುವ ಬ್ಯಾರಕ್‌ಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಪ್ರದೂಷ್‌ನನ್ನು ಈಗಾಗಲೇ ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ಇನ್ನು ಮೊಬೈಲ್ ಪತ್ತೆಯಾದ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಅವರನ್ನು ಈಗಾಗಲೇ 22 ಜನರಿದ್ದ ಬ್ಯಾರಕ್‌ಗೆ ಶಿಫ್ಟ್ ಮಾಡಲಾಗಿದ್ದು, ಇದೀಗ ಅವರ ಮೇಲಿನ ಕಣ್ಗಾವಲನ್ನು ಅಧಿಕಾರಿಗಳು ಮತ್ತಷ್ಟು ಬಿಗಿಗೊಳಿಸಿದ್ದಾರೆ.

PREV
Read more Articles on
click me!

Recommended Stories

Bengaluru Metro: ಜಸ್ಟ್ ಒಂದು ವರ್ಷ, 3.8 ಕೋಟಿಗೂ ಅಧಿಕ ಪ್ರಯಾಣಿಕರು; ನಮ್ಮ ಮೆಟ್ರೋ ಮತ್ತೊಂದು ದಾಖಲೆ!
ಬೆಂಗಳೂರು ಜನರ HMT ವಾಚ್ ಕ್ರೇಜ್; ಸ್ವಾತಂತ್ರ್ಯ ದಿನದ ‘ಸ್ಪೆಷಲ್ ಎಡಿಷನ್’ ಕೈಗಡಿಯಾರ ಖರೀದಿಗೆ 2 ಕಿಮೀ ಕ್ಯೂ!