1 ದಿನ ಬೆಂಗಳೂರಿನಾದ್ಯಂತ ಮದ್ಯ ಮಾರಾಟ ಬಂದ್...!

By Web DeskFirst Published Nov 5, 2019, 8:40 PM IST
Highlights

ನವಂಬರ್ 10ರಂದು ಬೆಂಗಳೂರಿನಾದ್ಯಂತ ಮದ್ಯ ಬಂದ್| ಬೆಳಗ್ಗೆ6 ರಿಂದ ಮಧ್ಯರಾತ್ರಿ 12ಗಂಟೆವರೆಗೂ ಮದ್ಯ ಮಾರಾಟ ನಿಷೇಧ| ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ರಿಂದ ಆದೇಶ

ಬೆಂಗಳೂರು, [ನ.05]: ಮುಸ್ಲಿಂ ಬಾಂಧವರ ಪವಿತ್ರ ಹಬ್ಬ ಈದ್ ಮಿಲಾದ್ ಪ್ರಯುಕ್ತ ನವಂಬರ್ 10 ರಂದು  ಬೆಂಗಳೂರಿನಾದ್ಯಂತ ಮದ್ಯ ಬಂದ್ ಮಾಡಿ ಪೊಲೀಸ್ ಆಯುಕ್ತ ಆದೇಶ ಹೊರಡಿಸಿದ್ದಾರೆ.

ಶಾಂತಿ‌ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಮದ್ಯ ಪ್ರಿಯರಿಗೆ ಬಿಗ್ ಶಾಕ್: ಡ್ರಿಂಕ್ಸ್ ನಿಷೇಧದ ಬಗ್ಗೆ BSY ವಿಚಾರ ಬಹಿರಂಗಪಡಿಸಿದ ಬಿಜೆಪಿ MP

ಇದೇ ನವೆಂಬರ್ 10 ರಂದು [ಭಾನುವಾರ] ಬೆಳಗ್ಗೆ 6 ರಿಂದ ಅದೇ ದಿನ ಮಧ್ಯರಾತ್ರಿ 12 ಗಂಟೆವರೆಗೂ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಆದೇಶ ಪ್ರತಿಯಲ್ಲಿ ಉಲ್ಲೇಖಿಸಿದ್ದಾರೆ.

ಬೆಂಗಳೂರು ನಗರದಾದ್ಯಂತ ನ.10ರಂದು ಮುಸ್ಲಿಮರು ಈದ್ ಮಿಲಾದ್ ಹಬ್ಬವನ್ನು ಆಚರಿಸುವ ಪ್ರಯುಕ್ತ, ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ, ನಂತರ ಮೆರವಣಿಗೆ ಸಾಗಲಿದೆ. ಕಾನೂನು ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಬಾರ್, ವೈನ್ ಶಾಪ್, ಪಬ್ ಹಾಗೂ ಎಲ್ಲಾ ರೀತಿಯ ಮದ್ಯ ಮಾರಾಟ ಮಾಡುವ ಅಂಗಡಿಗಳನ್ನು ಮುಚ್ಚಲು ಹಾಗೂ ಮದ್ಯ ಮಾರಾಟವನ್ನು ಮಾಡದಿರಲು ನಿಷೇಧಾಜ್ಞೆ ಹೊರಡಿಸಲಾಗಿದೆ.

click me!