ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಬಿಗ್ ರಿಲೀಫ್, ಜಾಮೀನು ಕೋರಲು ಅವಕಾಶ ನೀಡಿದರೂ ನಿರಾಸೆ

Published : Nov 21, 2026, 10:10 PM IST
Prajwal Revanna Case

ಸಾರಾಂಶ

ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನು ತಿರಸ್ಕರಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ. ಈ ಮೂಲಕ ಬಿಗ್ ರಿಲೀಫ್ ಕೊಟ್ಟಿದೆ. ಆದರೆ ಜಾಮೀನು ಕೋರಲು ಅವಕಾಶ ನೀಡಿದರೂ ಮಾಜಿ ಸಂಸದನಿಗೆ ತೀವ್ರ ನಿರಾಸೆಯಾಗಿದೆ.

ಬೆಂಗಳೂರು (ನ.21) ಪ್ರಜ್ವಲ್ ರೇವಣ್ಣ ವಿರುದ್ದದ ಅಶ್ಲೀಲ ದೃಶ್ಯ ಚಿತ್ರೀಕರಣ ಪ್ರಕರಣ ಸಂಬಂಧ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಮಾಜಿ ಸಂಸದನಿಗೆ ಜಾಮೀನು ಕೋರಲು ಹೈಕೋರ್ಟ್ ಅವಕಾಶ ನೀಡಿದರೂ ತೀವ್ರ ನಿರಾಸೆಯಾಗಿದೆ. ಪ್ರಜ್ವಲ್ ರೇವಣ್ಣನ ಕಡ್ಡಾಯ ಜಾಮೀನು ತಿರಸ್ಕರಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ.ಗಡುವಿನೊಳಗೆ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿಲ್ಲ. ಹೀಗಾಗಿ ಈ ಪ್ರಕರಣದಲ್ಲಿ ಪ್ರಜ್ವಲ್ ಕಡ್ಡಾಯ ಜಾಮೀನು ಕೋರಬಹುದು ಎಂದು ಹೈಕೋರ್ಟ್ ಹೇಳಿದೆ. ಆದರೆ ತೀವ್ರ ನಿರಾಸೆಗೂ ಮತ್ತೊಂದು ಪ್ರಕರಣದ ಶಿಕ್ಷೆ ಪ್ರಮುಖ ಕಾರಣವಾಗಿದೆ.

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕಡ್ಡಾಯ ಜಾಮೀನು ಕೋರಲು ಹೈಕೋರ್ಟ್ ಅವಕಾಶ ನೀಡಿದೆ. ಆದರೆ ಬೇರೆ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದೆ. ಹೀಗಾಗಿ ಕಡ್ಡಾಯ ಜಾಮೀನಿನ ಅನುಕೂಲ ಪ್ರಜ್ವರ್ ರೇವಣ್ಣಗೆ ಸಿಗುವುದಿಲ್ಲ ಎಂದು ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ಪಟ್ಟಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲೇ ಪ್ರಜ್ವಲ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಕೆಯಲ್ಲಿ ವಿಳಂಬದಿಂದ ಜಾಮೀನು ಕೋರುವ ಅವಕಾಶ ಪಡೆದಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣಗೆ ಈ ಅವಕಾಶವಿದ್ದರೂ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆ ಸಾಧ್ಯತೆಗಳು ಕಷ್ಟ. ಕಾರಣ ಬೇರೊಂದು ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಕಾರಣ ಪ್ರಜ್ವಲ್ ಜೈಲಿನಲ್ಲೇ ಕಳೆಯಬೇಕಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣಗೆ ಸಂಕಷ್ಟದ ಸರಮಾಲೆಯಲ್ಲಿ ಸಿಲುಕಿದ್ದಾರೆ.

ಇತ್ತೀಚಗೆ ಪರಪ್ಪನ ಅಗ್ರಹಾರ ಜೈಲಿನಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲು ಪೊಲೀಸರು ಮುಂದಾಗಿದ್ದರು. ಪ್ರಜ್ವಲ್ ಸೆಲ್‌ನಲ್ಲಿ ಮೊಬೈಲ್ ಫೋನ್ ಪತ್ತೆ ಸೇರಿದಂತೆ ಹಲವು ಕಾರಣಗಳಿಂದ ಶಿಫ್ಟ್ ಮಾಡಲು ಮುಂದಾಗಿದ್ದರು. ಇದರಂತೆ ಬೆಂಗಳೂರಿನಿಂದ ತುಮಕೂರುವರೆಗೆ ಕರೆದುಕೊಂಡ ಪೊಲೀಸರು ಬಳಿಕ ಯೂಟರ್ನ್ ಹೊಡೆದಿದ್ದರು. ಮಾರ್ಗ ಮಧ್ಯ ಹಿರಿಯ ಅಧಿಕಾರಿಯ ಫೋನ್ ಕರೆಯಿಂದ ಪೊಲೀಸರು ದಿಢೀರ್ ಶಿಫ್ಟ್ ಕೈಬಿಟ್ಟು ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ವಾಪಸ್ ಬಿಡಲಾಗಿತ್ತು.

PREV
Read more Articles on
click me!

Recommended Stories

ಬೆಂಗಳೂರು ರಾಗಿಗುಡ್ಡ ಮೆಟ್ರೋ ನಿಲ್ದಾಣದ ಬಳಿ ಬೆಂಕಿ ಅವಘಢ, ತ್ಯಾಜ್ಯ ಸ್ಥಳದಲ್ಲಿ ಘಟನೆ
2027ನೇ ಸಾಲಿನ ಸರ್ಕಾರಿ ರಜಾ ದಿನಗಳ ಪಟ್ಟಿ ಪ್ರಕಟಿಸಿದ ರಾಜ್ಯ ಸರ್ಕಾರ, ಒಟ್ಟು ರಜೆ ಎಷ್ಟಿದೆ?