ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿ ಆತ್ಮಹತ್ಯೆ

Published : Oct 16, 2019, 11:03 AM ISTUpdated : Oct 16, 2019, 11:06 AM IST
ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿ ಆತ್ಮಹತ್ಯೆ

ಸಾರಾಂಶ

ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೖದಿ ಸಾವು| ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಅನಿಲ್ ರಾಜ್| ಅನಿಲ್ ರಾಜ್ ವಾಯ್ಸ್ ಆಫ್ ಯಲಹಂಕ ಪತ್ರಿಕೆಯ ಸಂಪಾದಕ| ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಂಧಿತನಾಗಿ ಜೈಲು ಸೇರಿದ್ದ| ನಿನ್ನೆಯಷ್ಟೇ ಕುಟುಂಬಸ್ಥರು ಅನಿಲ್ ರಾಜ್ ರನ್ನು ಜೈಲಿನಲ್ಲಿ ಭೇಟಿಯಾಗಿದ್ದರು| 

ಬೆಂಗಳೂರು[ಅ.16]: ವಿಚಾರಣಾಧೀನ ಕೈದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪರಪ್ಪನ ಅಗ್ರಹಾರ ಜೈಲಿನಲ್ಲಿಇಂದು ನಡೆದಿದೆ. ಮೃತ ಕೖದಿಯನ್ನು ಅನಿಲ್ ರಾಜ್ ಎಂದು ಗುರುತಿಸಲಾಗಿದೆ. 

ಅನಿಲ್ ರಾಜ್ ವಾಯ್ಸ್ ಆಫ್ ಯಲಹಂಕ ಪತ್ರಿಕೆಯ ಸಂಪಾದಕನಾಗಿದ್ದನು. ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಂಧಿತನಾಗಿ ಜೈಲು ಸೇರಿದ್ದನು. ನಿನ್ನೆಯಷ್ಟೇ ಕುಟುಂಬಸ್ಥರು ಅನಿಲ್ ರಾಜ್ ರನ್ನು ಜೈಲಿನಲ್ಲಿ ಭೇಟಿಯಾಗಿ ಬಂದಿದ್ದರು. ಆದರೆ, ಅನಿಲ್ ರಾಜ್ ಪೈಪ್ ಗೆ ಕಟ್ಟಿದ್ದ ಬಿಳಿ ದಾರದಿಂದ ನೇಣು ಬಿಗಿದುಕೊಂಡಿದ್ದ, ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾನೆ ಎಂದು ಜೈಲು ಅಧಿಕಾರಿಗಳಿಂದ ಮಾಹಿತಿ  ನೀಡಿದ್ದಾರೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅನಿಲ್ ರಾಜ್ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ. 
 

PREV
click me!

Recommended Stories

'ಮಾದೇಶ್ವರ ದಯಬಾರದೆ..' ಯೂಟ್ಯೂಬ್‌ನಲ್ಲಿ ಟ್ರೆಂಡ್‌ ಆದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದಪ್ರಸಾದ್‌ ಹಾಡು!
ಬನ್ನೇರುಘಟ್ಟದಲ್ಲಿ ಅಪರೂಪದ ಅತಿಥಿ, ಆಫ್ರಿಕಾದಿಂದ ಆಗಮಿಸಿದ ಕ್ಯಾಪುಚಿನ್ ಕೋತಿಗಳು!