ಗೋಪಾಲನಾಥ್ ನಿಧನ : ಎಸ್ಸೆಂ ಕೃಷ್ಣ ಸಂತಾಪ

By Kannadaprabha NewsFirst Published Oct 12, 2019, 7:37 AM IST
Highlights

ಗೋಪಾಲನಾಥ್‌ ಅವರ ನಿಧನದ ವಿಷಯ ತಿಳಿದು ಅತ್ಯಂತ ದುಃಖವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಶೋಕ ಸಂದೇಶದಲ್ಲಿ ಹೇಳಿದ್ದಾರೆ.

ಬೆಂಗಳೂರು [ಅ.12]: ವಿಶ್ವವಿಖ್ಯಾತ ಸ್ಯಾಕ್ಸೋಫೋನ್‌ ವಾದಕ ಕದ್ರಿ ಗೋಪಾಲನಾಥ್‌ ಅವರ ನಿಧನದ ವಿಷಯ ತಿಳಿದು ಅತ್ಯಂತ ದುಃಖವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಶೋಕ ಸಂದೇಶದಲ್ಲಿ ಹೇಳಿದ್ದಾರೆ.

ವಿದೇಶಿ ವ್ಯಾದವಾದ ಸ್ಯಾಕ್ಸೋಫೋನ್‌ ವಾದನದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತದ ಅಳವಡಿಕೆಯಿಂದ ವಿಶ್ವಪ್ರಸಿದ್ಧಿ ಪಡೆದಿದ್ದ ಗೋಪಾಲನಾಥ ಅವರಿಗೆ ಪದ್ಮಶ್ರೀ ಪ್ರಶಸ್ತಿ ಸೇರಿ ಹಲವಾರು ಪ್ರಶಸ್ತಿಗಳು ಸಂದಿವೆ. ಸಂಗೀತ ಪ್ರಿಯರಲ್ಲಿ ಒಬ್ಬನಾಗಿರುವ ನಾನು ಗೋಪಾಲನಾಥ್‌ ಅವರ ಹಲವು ಕಛೇರಿಗಳನ್ನು ಅಲಿಸುವಂತಾಗಿದ್ದು ನನ್ನ ಪೂರ್ವ ಜನ್ಮದ ಪುಣ್ಯವಾಗಿತ್ತು ಎಂದು ಕೃಷ್ಣ ಕಂಬನಿ ಮಿಡಿದಿದ್ದಾರೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ವಿಶೇಷವಾಗಿ ಬೆಂಗಳೂರಿನಲ್ಲಿ ಶ್ರೀರಾಮ ಸೇವಾ ಮಂಡಳಿಯವರು ಆಯೋಜಿಸುವ ರಾಮನವಮಿ ಉತ್ಸವದ ಸಂಗೀತ ಕಛೇರಿಗಳು ಮತ್ತು ಚೆನ್ನೈನಲ್ಲಿ ಡಿಸೆಂಬರ್‌ ತಿಂಗಳಲ್ಲಿ ಆಯೋಜಿಸುವ ಮದ್ರಾಸ್‌ ಮ್ಯೂಸಿಕ್‌ ಫೆಸ್ಟಿವಲ್‌ಗಳಲ್ಲಿ ಕದ್ರಿ ಗೋಪಾಲನಾಥ್‌ ಅವರ ಕಛೇರಿಗಳನ್ನು ಅಲಿಸುವಾಗ ದೊರಕುತ್ತಿದ್ದ ಆನಂದವನ್ನು ಅಕ್ಷರಗಳಲ್ಲಿ ವರ್ಣಿಸಲಾಗದು. ಅವರ ಅಗಲಿಕೆಯಿಂದ ಸಂಗೀತ ಲೋಕಕ್ಕೆ ಹಾಗೂ ಕುಟುಂಬದ ಸದಸ್ಯರಿಗೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದ್ದಾರೆ.

click me!