ದೀಪಾವಳಿ ಹಬ್ಬದ ಪ್ರಯುಕ್ತ ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ರೈಲು, ದಿನ, ಸಮಯ ಎಲ್ಲೆಲ್ಲಿ ನಿಲುಗಡೆ? ಮಾಹಿತಿ ಇಲ್ಲಿದೆ

Published : Nov 06, 2026, 11:23 AM IST
South Western Railway

ಸಾರಾಂಶ

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅತಿಯಾದ ದಟ್ಟಣೆಯನ್ನು ಹಗುರಗೊಳಿಸಲು ನೈಋತ್ಯ ರೈಲ್ವೆಯು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (SMVT) ಮತ್ತು ಬೆಳಗಾವಿ ನಗರಗಳ ನಡುವೆ ದ್ವಿಪಕ್ಷೀಯ ವಿಶೇಷ ರೈಲು ಸಂಚಾರವನ್ನು ಘೋಷಿಸಿದೆ.

ಹುಬ್ಬಳ್ಳಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ನೈಋತ್ಯ ರೈಲ್ವೆಯು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಬೆಳಗಾವಿ ನಡುವೆ ವಿಶೇಷ ರೈಲು ಸಂಚಾರ ನಡೆಸಲಿದೆ. ಈ ರೈಲುಗಳು ಎರಡೂ ಮಾರ್ಗಗಳಲ್ಲಿ ತಲಾ ಎರಡು ಟ್ರಿಪ್ (ಪ್ರಯಾಣ) ಸಂಚರಿಸಲಿವೆ.

ರೈಲು ಸಂಖ್ಯೆ 06551 ಎಸ್ಎಂವಿಟಿ ಬೆಂಗಳೂರು- ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್: ನ. 7 ಮತ್ತು ನ 9 ರಂದು ಸಂಜೆ 7ಕ್ಕೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಗ್ಗೆ 8:25 ಗಂಟೆಗೆ ಬೆಳಗಾವಿ ತಲುಪಲಿದೆ.

ರೈಲು ಸಂಖ್ಯೆ 06552 ಬೆಳಗಾವಿ- ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು ನ. 8 ಮತ್ತು ನ. 10 ರಂದು ಸಂಜೆ 5:30ಕ್ಕೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಗ್ಗೆ 5ಕ್ಕೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.

ನಿಲುಗಡೆಗಳು:

ಈ ವಿಶೇಷ ರೈಲುಗಳು ಎರಡೂ ಮಾರ್ಗಗಳಲ್ಲಿ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್‌ಎಂಎಂ ಹಾವೇರಿ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೊಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಈ ರೈಲು ಎಸಿ 2-ಟೈರ್, ಎಸಿ 3-ಟೈರ್, ಸ್ಲೀಪರ್ ಕ್ಲಾಸ್ ಮತ್ತು ಜನರಲ್ ಕ್ಲಾಸ್ ಬೋಗಿಗಳು, ದಿವ್ಯಾಂಗಚೇತನ ಸ್ನೇಹಿ ಜತೆಗೆ ಲಗೇಜ್-ಕಮ್-ಬ್ರೇಕ್ ವ್ಯಾನ್ ಹಾಗೂ ಜನರೇಟರ್-ಕಮ್-ಬ್ರೇಕ್ ವ್ಯಾನ್ ಸೇರಿ ಒಟ್ಟು 20 ಬೋಗಿಗಳನ್ನು ಒಳಗೊಂಡಿರಲಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

ಹುಬ್ಬಳ್ಳಿಯಿಂದ ವಟ್ವಾಗೆ ಏಕಮುಖ ವಿಶೇಷ ರೈಲು

ಹುಬ್ಬಳ್ಳಿ: ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಭಾಯಿಸಲು ನೈಋತ್ಯ ರೈಲ್ವೆಯು ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ವಟ್ವಾಗೆ 07311 ಸಂಖ್ಯೆಯ ಏಕಮುಖ ವಿಶೇಷ ಎಕ್ಸ್‌ಪ್ರೆಸ್ ರೈಲು ಓಡಿಸಲು ನಿರ್ಧರಿಸಿದೆ. ಈ ವಿಶೇಷ ರೈಲು ನ. 5ರಂದು ರಾತ್ರಿ 10.15 ಗಂಟೆಗೆ ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಹೊರಟು ನ. 6ರಂದು ರಾತ್ರಿ 9.50ಕ್ಕೆ ವಟ್ವಾವನ್ನು ತಲುಪಲಿದೆ. ಈ ರೈಲು ಮಾರ್ಗಮಧ್ಯ ಧಾರವಾಡ, ಅಳ್ನಾವರ, ಲೋಂಡಾ, ಬೆಳಗಾವಿ, ಗೋಕಾಕ್ ರೋಡ್, ಘಟಪ್ರಭಾ, ರಾಯಭಾಗ, ಕುಡಚಿ, ಮಿರಾಜ್, ಸಾಂಗ್ಲಿ, ಕರಾಡ್, ಸತಾರಾ, ಪುಣೆ, ಲೋನಾವಾಲಾ, ಕಲ್ಯಾಣ್, ವಸಾಯಿ ರೋಡ್, ಪಾಲ್ಘರ್, ವಾಪಿ, ವಲ್ಸಾಡ್, ಸೂರತ್, ಭರೂಚ್, ವಡೋದರಾ ಮತ್ತು ಆನಂದ್ ನಿಲ್ದಾಣಗಳಲ್ಲಿ ನಿಲ್ಲಲಿದೆ. ಈ ರೈಲಿನಲ್ಲಿ ಸ್ಲೀಪರ್ ಕ್ಲಾಸ್, ಜನರಲ್ ಕ್ಲಾಸ್, ಲಗೇಜ್-ಕಮ್-ಬ್ರೇಕ್ ವ್ಯಾನ್ ಹಾಗೂ ಅಂಗವಿಕಲರಿಗಾಗಿ ಮೀಸಲಾದ ಬೋಗಿಗಳು ಸೇರಿದಂತೆ ಒಟ್ಟು 20 ಬೋಗಿಗಳು ಇರಲಿವೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

PREV
Read more Articles on
click me!

Recommended Stories

ಖಾಸಗಿ ವಾಹನಗಳಿಗೆ ಕೋಟಿಗಟ್ಟಲೆ ಮೇಲ್ಸೇತುವೆ, ಬಡವರ ಬಸ್‌ಗೆ ಭಾರಿ ದರ: ಸರ್ಕಾರದ ಸಾರಿಗೆ ನೀತಿಗೆ ಪ್ರಯಾಣಿಕರ ವೇದಿಕೆ ತೀವ್ರ ಖಂಡನೆ
ಕಿದ್ವಾಯಿ, ಕಿಮ್ಸ್‌ಗೆ ರೋಬೋಟಿಕ್‌ ಸರ್ಜರಿ ಉಪಕರಣ ಖರೀದಿ, ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ