ಕಾಂಗ್ರೆಸ್ - ಜೆಡಿಎಸ್ ಕ್ಷೇತ್ರಗಳಿಗೆ ಅನುದಾನ ಕಡಿತ : ಜಟಾಪಟಿ

By Kannadaprabha NewsFirst Published Oct 13, 2019, 8:17 AM IST
Highlights

ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಬೆಂಗಳೂರಿಗೆ ನೀಡಲಾದ ಅನುದಾನದಲ್ಲಿ ಕಾಂಗ್ರೆಸ್, ಜೆಡಿಎಸ್ ಶಾಸಕರ ಕ್ಷೇತ್ರಗಳಿಗೆ ಕಡಿತಗೊಳಿಸಿರುವ ವಿಚಾರವು ನಗರದ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ತೀವ್ರ ಜಟಾಪಟಿಗೆ ಕಾರಣವಾಯಿತು.
 

ಬೆಂಗಳೂರು [ಅ.13]:  ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಬೆಂಗಳೂರಿಗೆ ನೀಡಲಾದ ಅನುದಾನದಲ್ಲಿ ಕಾಂಗ್ರೆಸ್, ಜೆಡಿಎಸ್ ಶಾಸಕರ ಕ್ಷೇತ್ರಗಳಿಗೆ ಕಡಿತಗೊಳಿಸಿರುವ ವಿಚಾರವು ನಗರದ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ತೀವ್ರ ಜಟಾಪಟಿಗೆ ಕಾರಣವಾಯಿತು.

2019 - 20 ನೇ ಸಾಲಿನ ಅನುದಾನ ಬೇಡಿಕೆಗಳ ಮೇಲಿನ ಚರ್ಚೆ ವೇಳೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್, ಜೆಡಿಎಸ್ ಶಾಸಕರ ಕ್ಷೇತ್ರಗಳ ಅನುದಾನವನ್ನು ಕಡಿತ ಗೊಳಿಸಿರುವುದು ಸರಿಯಲ್ಲ ಎಂದರು. ಈ ವೇಳೆ ಪ್ರತಿಪಕ್ಷದ ಸದಸ್ಯರು ತಮ್ಮ ತಮ್ಮ ಕ್ಷೇತ್ರಗಳಿಗೆ ಆಗಿರುವ ಅನ್ಯಾಯದ ಬಗ್ಗೆ ಧ್ವನಿ ಎತ್ತಲು ಮುಂದಾದರು. ಇದಕ್ಕೆ ಪ್ರತಿಯಾಗಿ ಆಡಳಿತ ಪಕ್ಷದ ಸದಸ್ಯರು ಮೈತ್ರಿ ಸರ್ಕಾರದ ಅವಧಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ ಪ್ರಸ್ತಾಪಿಸಲು ಮುಂದಾದರು. 

ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಮಾತಿನ ಸಮರ ನಡೆಯಿತು. ಈ ನಡುವೆ ಕಾಂಗ್ರೆಸ್ ಸದಸ್ಯ ರಾಮಲಿಂಗಾರೆಡ್ಡಿ ಅವರು, ನನ್ನ ಕ್ಷೇತ್ರ ಸೇರಿದಂತೆ ಪಕ್ಷದ ಸದಸ್ಯರ ಕ್ಷೇತ್ರಗಳಿಗೆ ನೀಡಿದ ಅನುದಾನವನ್ನು ಕಡಿತಗೊಳಿಸಲಾಗಿದೆ ಎಂದು ಪ್ರಸ್ತಾಪಿಸಿದರು. ಆಗ ಬಿಜೆಪಿ ಸದಸ್ಯ ಸತೀಶ್ ರೆಡ್ಡಿ, ಮೈತ್ರಿ ಸರ್ಕಾರದ ಅವಧಿಯಲ್ಲಿ ತಮ್ಮ ಕ್ಷೇತ್ರಕ್ಕೆ ಶೂನ್ಯ ಅನುದಾನ ಒದಗಿಸಲಾಗಿದೆ ಎಂದು ಹೇಳಿದರು. ಈ ವೇಳೆ ಮಧ್ಯಪ್ರ 
ವೇಶಿಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕ್ಷೇತ್ರಗಳಿಗೆ ಎಷ್ಟು ಅನುದಾನ ಬಿಡುಗಡೆ ಮಾಡಲಾಗಿದೆ ಎಂಬುದರ ಮಾಹಿತಿಯನ್ನು ಒದಗಿಸಿದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬೊಮ್ಮನಹಳ್ಳಿ ಕ್ಷೇತ್ರಕ್ಕೆ ಕಡಿಮೆ ಅನುದಾನ ಇರುವ ಬಗ್ಗೆ ಪ್ರಸ್ತಾಪವಾಗಿರುವ ಬಗ್ಗೆ ಸತೀಶ್ ರೆಡ್ಡಿ ಸದನದ ಗಮನಕ್ಕೆ ತಂದರು. ಇದರಿಂದ ರಾಮಲಿಂಗಾರೆಡ್ಡಿ ಕೋಪಗೊಂಡು ಕಳೆದ ಬಾರಿ ಅನ್ಯಾಯವಾಗಿದೆ ಎಂಬ ಕಾರಣಕ್ಕಾಗಿ ಈ ಬಾರಿ ನಮಗೆ ಅನ್ಯಾಯ ಮಾಡಲಾಗುತ್ತಿದೆಯೇ ಎಂದು ಕಿಡಿಕಾರಿದರು. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆಯಿತು.

click me!