ಕಡ್ಡಾಯ ವರ್ಗಾವಣೆಯಿಂದ ವಿನಾಯಿತಿ ಪಡೆದಿದ್ದ ಶಿಕ್ಷಕಿ ಸಾವು

By Kannadaprabha NewsFirst Published Oct 18, 2019, 7:55 AM IST
Highlights

ಕಳೆದ ಎರಡು ತಿಂಗಳ ಹಿಂದೆ ವರ್ಗಾವಣೆಯಿಂದ ವಿನಾಯಿತಿ ಪಡೆದುಕೊಂಡಿದ್ದ ಕ್ಯಾನ್ಸರ್ ಪೀಡಿತ ಶಿಕ್ಷಕಿ ನಿಧನರಾಗಿದ್ದಾರೆ. 

ಬೆಂಗಳೂರು [ಅ.18] : ಕ್ಯಾನ್ಸರ್‌ ಕಾಯಿಲೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಕಡ್ಡಾಯ ವರ್ಗಾವಣೆಯಿಂದ ವಿನಾಯಿತಿ ಪಡೆದಿದ್ದ ಶಿಕ್ಷಕಿ ಮಹೇಶ್ವರಿ ಬುಧವಾರ ನಿಧನರಾಗಿದ್ದು, ಮೃತರ ನಿವಾಸಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.

ಮಹೇಶ್ವರಿ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ನಗರದ ಎಳ್ಕುಂಟೆ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು, ಅವರನ್ನು ಕೆಂಗೇರಿ ಬಳಿಯಲ್ಲಿರುವ ಶಾಲೆಗೆ ವರ್ಗಾವಣೆ ಮಾಡಲಾಗಿತ್ತು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಆದರೆ ತಾವು ಕ್ಯಾನ್ಸರ್‌ನಿಂದ ಬಳಲುತ್ತಿರುವುದರಿಂದ ಕಡ್ಡಾಯ ವರ್ಗಾವಣೆಯಲ್ಲಿ ವಿನಾಯಿತಿ ನೀಡಬೇಕೆಂದು ವರ್ಗಾವಣೆ ಕೌನ್ಸೆಲಿಂಗ್‌ ಸ್ಥಳಕ್ಕೆ ಬಂದು ಮನವಿ ಮಾಡಿದ್ದರು. ಆದರೆ, ಶಿಕ್ಷಣ ಇಲಾಖೆಯ ಅಧಿಕಾರಿಗಳು ಕಾನೂನಿನ ನೆಪವೊಡ್ಡಿ ನಿರಾಕರಿಸಿದ್ದರು.

ಈ ಸುದ್ದಿ ಮರು ದಿನ ಮಾಧ್ಯಮಗಳಲ್ಲಿ ಪ್ರಕಟವಾದ ಹಿನ್ನೆಲೆಯಲ್ಲಿ ಸಚಿವರೇ ನೇರವಾಗಿ ಅಧಿಕಾರಿಗಳಿಗೆ ಸೂಚನೆ ನೀಡಿ ವಿನಾಯಿತಿ ಕೊಡಿಸಿದ್ದರು.

click me!