ತುಮಕೂರಿನಿಂದ ಬೆಂಗಳೂರಿಗೆ ಪ್ರಯಾಣಿಕರ ಗಮನಕ್ಕೆ; ಇಂದಿನಿಂದ 8 ದಿನ ಮೇಲ್ಸೇತುವೆ ಬಂದ್

Published : Jul 28, 2026, 07:21 AM IST
Peenya

ಸಾರಾಂಶ

ಡಾಂಬರೀಕರಣ ಕಾಮಗಾರಿಯ ಕಾರಣ, ಬೆಂಗಳೂರಿನ ಪೀಣ್ಯ ಎಲಿವೇಟೆಡ್ ಮೇಲ್ಸೇತುವೆಯಲ್ಲಿ  ಎಂಟು ದಿನಗಳ ಕಾಲ ರಾತ್ರಿ ವೇಳೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ನೆಲಮಂಗಲದಿಂದ ಬೆಂಗಳೂರು ಕಡೆಗೆ ಬರುವ ವಾಹನಗಳಿಗಾಗಿ ಪೊಲೀಸರು ಪರ್ಯಾಯ ಮಾರ್ಗವನ್ನು ಸೂಚಿಸಿದ್ದಾರೆ.

ಬೆಂಗಳೂರು: ಡಾಂಬರೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ತುಮಕೂರು ರಸ್ತೆಯ ರಾಷ್ಟ್ರೀಯ ಹೆದ್ದಾರಿ-4 ರ ಪೀಣ್ಯ ಎಲಿವೇಟೆಡ್ (ಡಾ.ಶ್ರೀ ಶಿವಕುಮಾರ ಸ್ವಾಮೀಜಿ) ಮೇಲ್ಸೇತುವೆಯಲ್ಲಿ (ಬೆಂಗಳೂರು ಕಡೆ ಬರುವ ಮಾರ್ಗ) ಎಂಟು ದಿನಗಳ ಕಾಲ ರಾತ್ರಿ ವೇಳೆ ವಾಹನಗಳ ಓಡಾಟಕ್ಕೆ ಸಂಚಾರ ವಿಭಾಗದ ಪೊಲೀಸರು ನಿರ್ಬಂಧಿಸಿದ್ದಾರೆ. ಈ ತಾತ್ಕಾಲಿಕ ಸಂಚಾರ ವ್ಯವಸ್ಥೆ ಬದಲಾವಣೆಗೆ ಸಾರ್ವಜನಿಕರು ಸಹಕರಿಸುವಂತೆ ಪೊಲೀಸರು ಕೋರಿದ್ದಾರೆ.

ರಾತ್ರಿ 12 ರಿಂದ ಬೆಳಗ್ಗೆ 5 ಗಂಟೆಯವರೆಗೆ ರಸ್ತೆ ಬಂದ್

ಜು.27 ರಿಂದ ಆ.5ರವರೆಗೆ ರಾತ್ರಿ 10 ಗಂಟೆಯಿಂದ ಬೆಳಗೆ 5 ಗಂಟೆಯವರೆಗೆ ಹಾಗೂ ಈ ಅವಧಿಯ ಶನಿವಾರ ಮತ್ತು ಭಾನುವಾರ ರಾತ್ರಿ 12 ರಿಂದ ಬೆಳಗ್ಗೆ 5 ಗಂಟೆಯವರೆಗೆ ಮೇಲ್ಸೇತುವೆಯಲ್ಲಿ ಎಲ್ಲ ಮಾದರಿಯ ವಾಹನಗಳ ಸಂಚಾರವನ್ನು ಪೊಲೀಸರು ನಿಷೇಧಿಸಿದ್ದಾರೆ.

ಪರ್ಯಾಯ ಮಾರ್ಗ ಈ ರೀತಿಯಾಗಿದೆ

ನೆಲಮಂಗಲದಿಂದ ಬೆಂಗಳೂರು ಕಡೆಗೆ ಸಂಚರಿಸುವ ವಾಹನಗಳು ಕೆನ್ನಮೆಟಲ್ ಫ್ಯಾಕ್ಟರಿ ಹತ್ತಿರ ಫೈಓವರ್ ಕೆಳಭಾಗದ ಎನ್.ಹೆಚ್-4 ಮತ್ತು ಸರ್ವಿಸ್ ರಸ್ತೆ ಮೂಲಕ 8ನೇ ಮೈಲಿ ತಲುಪಬೇಕು. ಅಲ್ಲಿಂದ ದಾಸರಹಳ್ಳಿ ಜಾಲಹಳ್ಳಿ ಕ್ರಾಸ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್ ನಿಂದ ಗೊರಗುಂಟೆಪಾಳ್ಯ ಮೂಲಕ ಸಂಚರಿಸಬಹುದಾಗಿದೆ.

PREV
Read more Articles on
click me!

Recommended Stories

ಸಿಟಿ ರವಿ ವಿರುದ್ಧ ಬಲವಂತ ಕ್ರಮಕ್ಕೆ ಹೈಕೋರ್ಟ್ ತಡೆ, ಸರ್ಕಾರಕ್ಕೆ ನೋಟಿಸ್ ಜಾರಿ, ವಕೀಲ ಅರುಣ ಶ್ಯಾಮ್ ವಾದ ಹೇಗಿತ್ತು?
'ಏನಮ್ಮ ವಾರ್ಷಿಕ ಆದಾಯ ಕೇವಲ 40 ಸಾವಿರ ರುಪಾಯಿಗಳೇ?' ಕೆಪಿಎಸ್‌ಸಿ ಅಧ್ಯಕ್ಷ ಸಾಹುಕಾರ ಪುತ್ರಿಗೆ ಹೈಕೋರ್ಟ್ ಛೀಮಾರಿ