
ಬೆಂಗಳೂರು: ಕಚೇರಿಯಲ್ಲಿ ಲೈಟ್ ಸ್ವಿಚ್ ಆಫ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಹೋದ್ಯೋಗಿಗಳ ಮಧ್ಯೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಗೋವಿಂದರಾಜ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಕೊಲೆಯಾದವನನ್ನು ಚಿತ್ರದುರ್ಗ ಮೂಲದ 40 ವರ್ಷದ ಭೀಮೇಶ್ ಬಾಬು ಎಂದು ಗುರುತಿಸಲಾಗಿದೆ, ಆಂಧ್ರಪ್ರದೇಶದ ವಿಜಯವಾಡದ ನಿವಾಸಿ 24ರ ಹರೆಯದ ಸೋಮಾಲ ವಂಶಿ ಕೊಲೆ ಮಾಡಿದ ಯುವಕ. ಇಬ್ಬರು ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದು, ಲೈಟ್ ಆಫ್ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿದೆ ಎಂದು ವರದಿಯಾಗಿದೆ.
ರಾತ್ರಿಪಾಳಿಯಲ್ಲಿ ಕೆಲಸ ಮಾಡ್ತಿದ್ದ ಯುವಕರು
ಶನಿವಾರ ನಸುಕಿನ ಜಾವ 1.30ರ ಸುಮಾರಿಗೆ ಈ ಘಟನೆ ನಡೆದಿದೆ. ಈ ಇಬ್ಬರು ಯುವಕರು ಡಾಟಾ ಡಿಜಿಟಲ್ ಬ್ಯಾಂಕ್ ಎಂಬ ಕಂಪನಿಯಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ಡಾಟಾ ಡಿಜಿಟಲ್ ಬ್ಯಾಂಕ್ ಸಂಸ್ಥೆಯು ದಿನನಿತ್ಯದ ಚಿತ್ರೀಕರಣದ ವೀಡಿಯೊಗಳನ್ನು ಸಂಗ್ರಹಿಸುವ ಕೆಲಸ ಮಾಡುತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಲೈಟ್ ಆಫ್ ಮಾಡುವ ವಿಚಾರಕ್ಕೆ ಗಲಾಟೆ ಕೊಲೆಯಲ್ಲಿ ಅಂತ್ಯ:
ಲೈಟ್ ಆಫ್ ಮಾಡುವ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳ ನಡೆದಿದ್ದು, ಮಾತಿನ ಚಕಮಕಿಯಿಂದ ಕೋಪಗೊಂಡ ಸೋಮಾಲ ವಂಶಿ ಅಲ್ಲೇ ಇದ್ದ ಡಂಬಲ್ಸ್‌ನಿಂದ ಭೀಮೇಶ್ ಅವರ ಹಣೆಗೆ ಹೊಡೆದಿದ್ದು, ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಹೋದ್ಯೋಗಿಯನ್ನು ಕೊಲೆ ಮಾಡಿದ ನಂತರ ಆರೋಪಿ ಸೋಮಾಲ ವಂಶಿ ಸೀದಾ ಬಂದು ಗೋವಿಂದರಾಜ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾನೆ. ಆತನ ವಿರುದ್ಧ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ. ನಂತರ ಆತನನ್ನು ಪೊಲೀಸರು ಬಂಧಿಸಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ.
ಇದನ್ನೂ ಓದಿ: 4 ನೇ ಕ್ಲಾಸ್ ಹುಡುಗಿಗೆ ಸಾಯುವಂತದ್ದು ಏನಾಗಿತ್ತು: ಶಾಲಾ ಕಟ್ಟಡದಿಂದ ಹಾರಿ ಪ್ರಾಣ ಬಿಟ್ಟ ಬಾಲಕಿ
ಇದನ್ನೂ ಓದಿ: ಮೃತ ಸರ್ಕಾರಿ ಉದ್ಯೋಗಿಯ ಕುಟುಂಬ ಎಂದರೆ ವಿಧವೆ ಪತ್ನಿ ಮಾತ್ರವಲ್ಲ: ರಾಜಸ್ಥಾನ ಹೈಕೋರ್ಟ್ ಮಹತ್ವದ ತೀರ್ಪು
ಇದನ್ನೂ ಓದಿ: ದುಬಾರಿ ಆಯ್ತು ಅಮೆರಿಕಾ ಕನಸು: ಏಕೈಕ ಪುತ್ರನೂ ಹೋದ ಹಣವೂ ಹೋಯ್ತು: ಡಂಕಿ ರೂಟ್‌ನ ಕರಾಳ ಮುಖ
ಇದನ್ನೂ ಓದಿ: ಪ್ರದೀಪ್ ಪ್ರತಾಪ್ ಕಿತ್ತಾಟ: ಕಿವಿ ಮಾತು ಹೇಳಿದ ಅಕ್ಕ ಲಕ್ಷ್ಮಿ ಹೆಬ್ಬಾಳ್ಕರ್