ರಾತ್ರೋ ರಾತ್ರಿ ರೌಡಿಗಳ ಚಳಿ ಬಿಡಿಸಿದ ಡಿಸಿಪಿ ರವಿ ಚೆನ್ನಣ್ಣನವರ್

Published : Feb 07, 2019, 09:09 AM IST
ರಾತ್ರೋ ರಾತ್ರಿ ರೌಡಿಗಳ ಚಳಿ ಬಿಡಿಸಿದ ಡಿಸಿಪಿ ರವಿ ಚೆನ್ನಣ್ಣನವರ್

ಸಾರಾಂಶ

ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ರವಿ ಚೆನ್ನಣ್ಣನವರ್ ರಾತ್ರೀ ರಾತ್ರಿ ರೌಡಿಗಳ ಚಳಿ ಬಿಡಿಸಿದ್ದಾರೆ. ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದರೆ ಮುಲಾಜಿಲ್ಲದೆ ಕ್ರಮ ಜರುಗಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. 

ಬೆಂಗಳೂರು : ದಕ್ಷಿಣ ವಿಭಾಗದ ಬಳಿಕ ಪಶ್ಚಿಮ ವಲಯದ ಪೊಲೀಸರು, ಮಂಗಳವಾರ ರಾತ್ರಿ ದಿಢೀರನೇ ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಿ ಬಿಸಿ ಮುಟ್ಟಿಸಿದ್ದಾರೆ. 

ಪಶ್ಚಿಮ ವಿಭಾಗದ ಸುಮಾರು 300 ಕ್ಕೂ ಹೆಚ್ಚಿನ ರೌಡಿ ಗಳನ್ನು ವಿಚಾರಣೆಗೊಳಪಡಿಸಿದ ಪೊಲೀಸರು, ಪಾತಕಿಗಳ ಆದಾಯ ಮೂಲದ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ. 

ಅಲ್ಲದೆ, ಪ್ರತಿಯೊಬ್ಬರ ಮೊಬೈಲ್ ಸಂಖ್ಯೆ ಪಡೆದ ಪೊಲೀಸರು, ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದರೆ ಮುಲಾಜಿಲ್ಲದೆ ಕ್ರಮ ಜರುಗಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. 

ರಾತ್ರಿ 1 ಗಂಟೆ ಬಳಿಕ ತಮ್ಮ ವಿಭಾಗದ ಎಸಿಪಿ ಮತ್ತು ಇನ್ಸ್‌ಪೆಕ್ಟರ್‌ಗಳ ಜತೆ ಡಿಸಿಪಿ ರವಿ.ಡಿ.ಚೆನ್ನಣ್ಣನವರ್ ಕಾರ್ಯಾಚರಣೆ ನಡೆಸಿದ್ದಾರೆ. ಕೆಲ ದಿನಗಳ ಹಿಂದಷ್ಟೆ ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ, ರೌಡಿಗಳಿಗೆ ಚುರುಕು ಮುಟ್ಟಿಸಿದ್ದರು.

PREV
click me!

Recommended Stories

Karnataka Covid-19 Cases: ಕರ್ನಾಟಕದಲ್ಲಿ Covid-19 ಮತ್ತೆ ಏರಿಕೆ; 5 ಹೊಸ ಕೇಸ್ ದಾಖಲು, ಬೆಂಗಳೂರಿನಲ್ಲಿ ಒಂದು ಸಾವು!
Marathahalli Incident: ದೇವರ ಹೆಸರಲ್ಲಿ ಹಣಕ್ಕೆ ಡಿಮ್ಯಾಂಡ್; ಕೊಡದಿದ್ದಕ್ಕೆ ಯುವಕನ ಮೇಲೆ ಹಲ್ಲೆ!