ನಿರುದ್ಯೋಗ ಸಮಸ್ಯೆ ದೂರ ಮಾಡಲು ಹಾಗೂ ಯುವಕರಿಗೆ ಸೂಕ್ತ ತರಬೇತಿ ಹಾಗೂ ಮಾರ್ಗದರ್ಶನ ನೀಡಲು ಉಚಿತ ತರಬೇತಿ ಹಮ್ಮಿಕೊಳ್ಳಲಾಗಿದೆ| ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ತರಬೇತಿ ನಡೆಸಲು ನಿರ್ಧಾರ| ಜಿಲ್ಲೆಯ ವಿದ್ಯಾರ್ಥಿಗಳು ತರಬೇತಿಯ ಲಾಭ ಪಡೆದುಕೊಳ್ಳಬೇಕೆಂದು ಮನವಿ|
ಹುಮನಾಬಾದ(ಅ.27): ನಿರುದ್ಯೋಗ ಸಮಸ್ಯೆ ದೂರ ಮಾಡಲು ಹಾಗೂ ಯುವಕರಿಗೆ ಸೂಕ್ತ ತರಬೇತಿ ಹಾಗೂ ಮಾರ್ಗದರ್ಶನ ನೀಡಲು ಉಚಿತ ತರಬೇತಿ ಹಮ್ಮಿಕೊಳ್ಳಲಾಗುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಬೀದರ್ ಡಾಯಟ್ ಪ್ರಾಚಾರ್ಯಶಶಿಕಾಂತ ವರ್ತುಳೆ ಅವರು ತಿಳಿಸಿದ್ದಾರೆ.
ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಶನಿವಾರ ತರಬೇತಿ ಯಶಸ್ವಿಗಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ತಾಲೂಕಿನ ಬಿ.ಇಡ್. ಕಾಲೇಜಿನ ಪ್ರಾಚಾರ್ಯರ ಸಭೆಯಲ್ಲಿ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದ ಬಿ.ಇಡ್. ಪದವಿ ಮುಗಿಸಿರುವ ವಿದ್ಯಾರ್ಥಿಗಳು ಟಿಇಟಿ ಪರೀಕ್ಷೆ ಎದುರಿಸುವ ನಿಟ್ಟಿನಲ್ಲಿ ಪರೀಕ್ಷೆ ಪೂರ್ವ ಸಿದ್ಧತೆ ಅಣಿಗೊಳಿಸುವ ಉದ್ದೇಶದಿಂದ ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ತರಬೇತಿ ನಡೆಸಲು ನಿರ್ಧರಿಸಲಾಗಿದೆ ಎಂದರು.
undefined
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯಿಂದ ತರಬೇತಿ ಉಚಿತವಾಗಿ 45 ದಿನಗಳ ಕಾಲ ನೀಡಲಾಗುವುದು. ನುರಿತ ಮಾರ್ಗದರ್ಶಕರನ್ನು ಕರೆಸಿ ಸೂಕ್ತ ದಾಖಲೆಗಳೊಂದಿಗೆ ಪರೀಕ್ಷೆ ಸಿದ್ದತೆಯ ಮಾಹಿತಿಗಳನ್ನು ನೀಡಲಾಗುವುದು ಈ ಭಾಗದ ಯುವಕ ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಟಇಟಿ ಪರಿಕ್ಷೆಯಲ್ಲಿ ಭಾಗವಹಿಸಿ ಉದ್ಯೊಗ ಪಡೆದುಕೊಳ್ಳುವ ಉದ್ದೇಶದಿಂದ ಈ ತರೆಬೇತಿ ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿಯೂ ತರಬೇತಿ ನಡೆಸುವ ಪೂರ್ವಭಾವಿ ಸಿದ್ಧತೆಗಾಗಿ ಹುಮನಾಬಾದ್‌ದಿಂದ ಸಭೆ ಆರಂಭಿಸಲಾಗಿದೆ. ಜಿಲ್ಲೆಯ ವಿದ್ಯಾರ್ಥಿಗಳು ತರಬೇತಿಯ ಲಾಭ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.
ಹೆಚ್ಚಿನ ಮಾಹಿತಿಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಅಥವಾ ನೋಡಲ್ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಚಪ್ಪ ವಾಲಿ ಮಾತನಾಡಿ, ಇಲಾಖೆಯ ಆದೇಶದನುಸಾರ ಹುಮನಾಬಾದ್ ತಾಲೂಕಿನ ವಿದ್ಯಾರ್ಥಿಗಳಿಗೆ ಪಟ್ಟಣದ ಎಚ್‌ಕೆಡಿಇಟಿ ದತ್ತಿಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ನವೆಂಬರ್ 2ನೇ ವಾರದಲ್ಲಿ ತರಬೇತಿ ಹಮ್ಮಿ ಕೊಳ್ಳಲಾಗುತ್ತಿದೆ.
ಉಚಿತವಾಗಿ 45 ದಿವಸಗಳ ಕಾಲ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನಡೆಯಲ್ಲಿದ್ದು, ತಾಲೂಕಿನ ವಿದ್ಯಾರ್ಥಿಗಳು ಹೆಸರನ್ನು ನೋಂದಾಯಿಸಿಕೊಳ್ಳಲು ನೋಡಲ್‌ಅಧಿಕಾರಿ ಭೀಮಶಾ ಕೋರಿ ಮೊ:9342204004,9632460025 ಇವರನ್ನು ಸಂಪರ್ಕಿಸುವಂತೆ ಕೋರಿದರು.
ಸಭೆಯಲ್ಲಿ ಬಿಆರ್‌ಸಿ ಅಧಿಕಾರಿ ಶಿವಕುಮಾರ ಪಾರಶೆಟ್ಟಿ, ಸ್ಥಳೀಯ ಬಿ.ಇಡ್ ಕಾಲೇಜಿನ ಪ್ರಾಚಾರ್ಯ ಡಾ. ಅರವಿಂದ ರಾಠೋಡ, ಸಂತೋಷ ಚಟನಳ್ಳಿಕರ್, ಅಶೋಕ ಐ.ಡಿ,ರಾಜೇಂದ್ರ ವರವಟ್ಟಿ, ಪ್ರಶಾಂತ ಚೌದರಿ ಮತ್ತಿತರರು ಉಪಸ್ಥಿತರಿದ್ದರು.