ಬೀದರ್: ಸರ್ಕಾರಿ ಶಾಲೆಯ ಮಕ್ಕಳೊಂದಿಗೆ ಸಮಸ್ಯೆ ಆಲಿಸಿದ ಸಚಿವ ಚವ್ಹಾಣ

Published : Oct 25, 2019, 02:45 PM ISTUpdated : Oct 25, 2019, 02:46 PM IST
ಬೀದರ್: ಸರ್ಕಾರಿ ಶಾಲೆಯ ಮಕ್ಕಳೊಂದಿಗೆ ಸಮಸ್ಯೆ ಆಲಿಸಿದ ಸಚಿವ ಚವ್ಹಾಣ

ಸಾರಾಂಶ

ಸರ್ಕಾರಿ ಶಾಲೆಗೆ ಭೇಟಿ ನೀಡಿದ ಸಚಿವ ಪ್ರಭು ಚವ್ಹಾಣ| ಶಾಲೆಯಲ್ಲಿ ಪಾಠಗಳು ಸರಿಯಾಗಿ ನಡೆಯುತ್ತಿವೆಯಾ, ಶಿಕ್ಷಕರು ಸರಿಯಾದ ಸಮಯಕ್ಕೆ ಶಾಲೆಗೆ ಬರುತ್ತಾರಾ? ಎಂದು ಪ್ರಶ್ನಿಸಿದ ಸಚಿವ ಪ್ರಭು ಚವ್ಹಾಣ| ಶಾಲೆಯ ಕಿಟಕಿಗಳು ಒಡೆದಿರುವುದನ್ನು ಕಂಡು ಮುಖ್ಯ ಶಿಕ್ಷಕರ ವಿರುದ್ಧ ಸಿಡಿಮಿಡಿಗೊಂಡ ಸಚಿವರು| ಕೂಡಲೇ ಶಾಲೆಯ ವ್ಯವಸ್ಥೆಯನ್ನು ಸರಿಪಡಿಸಿಕೊಳ್ಳಬೇಕು| ಶಾಲೆಯ ಸುತ್ತಲಿನ ಆವರಣವನ್ನು ಶುಚಿಯಾಗಿ ಇಟ್ಟುಕೊಳ್ಳಬೇಕು| ಪಠ್ಯ ಚಟುವಟಿಕೆಗಳು ಸರಿಯಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಶಾಲೆಯ ಮುಖ್ಯ ಗುರುಗಳಿಗೆನಿರ್ದೇಶನ ನೀಡಿದ ಸಚಿವರು|

ಕಮಲನಗರ[ಅ.25]: ಶಾಲೆಯಲ್ಲಿ ಪಾಠಗಳು ಸರಿಯಾಗಿ ನಡೆಯುತ್ತಿವೆಯಾ, ಶಿಕ್ಷಕರು ಸರಿಯಾದ ಸಮಯಕ್ಕೆ ಶಾಲೆಗೆ ಬರುತ್ತಾರಾ? ಎಂದು ಸಚಿವ ಪ್ರಭು ಚವ್ಹಾಣ ಅವರು ಶಾಲಾ ಮಕ್ಕಳಿಗೆ ಪ್ರಶ್ನಿಸಿದ್ದಾರೆ. ಕಮಲನಗರ ತಹಸೀಲ್ದಾರ ಕಚೇರಿಯ ಆವರಣದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಸಚಿವರು, ಮೂಲ ಸೌಕರ್ಯಗಳನ್ನು ಪರಿಶೀಲಿಸಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಇದೇ ಸಂದರ್ಭದಲ್ಲಿ ಮಕ್ಕಳೊಂದಿಗೆ ಮಾತನಾಡಿಸಿ ಶಾಲೆಯಲ್ಲಿರುವ ಸಮಸ್ಯೆಗಳನ್ನು ಕೇಳಿದರು. ಶಾಲೆಯ ಕಿಟಕಿಗಳು ಒಡೆದಿರುವುದನ್ನು ಕಂಡು ಮುಖ್ಯಶಿಕ್ಷಕರ ವಿರುದ್ಧ ಸಿಡಿಮಿಡಿಗೊಂಡ ಸಚಿವರು, ಕೂಡಲೇ ಶಾಲೆಯ ವ್ಯವಸ್ಥೆಯನ್ನು ಸರಿಪಡಿಸಿಕೊಳ್ಳಬೇಕು. ಶಾಲೆಯ ಸುತ್ತಲಿನ ಆವರಣವನ್ನು ಶುಚಿಯಾಗಿ ಇಟ್ಟುಕೊಳ್ಳಬೇಕು. ಪಠ್ಯ ಚಟುವಟಿಕೆಗಳು ಸರಿಯಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಶಾಲೆಯ ಮುಖ್ಯ ಗುರುಗಳಿಗೆನಿರ್ದೇಶನ ನೀಡಿದರು.

ಸಾರ್ವಜನಿಕರ ಅಹವಾಲು ಸ್ವೀಕಾರ:

ಕಮಲನಗರ ಪ್ರವಾಸಿ ಮಂದಿರದಲ್ಲಿ ಸಚಿವರು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ಈ ವೇಳೆ ಗ್ರಾಮಸ್ಥರು ವಿವಿಧ ಸಮಸ್ಯೆಗಳ ಬಗ್ಗೆ ತಿಳಿಸಿದರು. ಕಮಲನಗರ ಹೊಸ ತಾಲೂಕೆಂದು ಘೋಷಣೆ ಮಾಡಲಾಗಿದೆ. ಆದರೆ  ಇಲ್ಲಿಯವರೆಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಒದಗಿಸಿಲ್ಲ. ಎಲ್ಲಾಇಲಾಖೆಗಳ ಕಚೇರಿಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ತಿಳಿಸಿದರು.  ಸಾರ್ವಜನಿಕರ ಎಲ್ಲ ಸಮಸ್ಯೆಗಳನ್ನುಹಂತ ಹಂತವಾಗಿ ಪರಿಹರಿಸಲಾಗುತ್ತದೆ. ಸಾರ್ವಜನಿಕರು ಗಾಬರಿಪಡುವ ಅಗತ್ಯವಿಲ್ಲ ಎಂದು ಸಚಿವರು ಭರವಸೆ ನೀಡಿದರು. 
 

PREV
click me!

Recommended Stories

ನವೋದಯ ಪರೀಕ್ಷೆಯಲ್ಲಿ ಅಕ್ರಮ ಆರೋಪ; ಬೀದರ್‌ನಲ್ಲಿ ಬಿಇಓಗೆ ವಿದ್ಯಾರ್ಥಿ ಪೋಷಕರಿಂದ ತರಾಟೆ
ಸ್ಕೂಲ್ ಬಸ್ ಹರಿದು 8 ವರ್ಷದ ಬಾಲಕಿ ಸಾವು; ಚಾಲಕನ ನಿರ್ಲಕ್ಷ್ಯಕ್ಕೆ ಅಮಾಯಕ ಜೀವ ಬಲಿ