ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸಂಚಾರ ನಿಷೇಧಿಸಿದ ಸರ್ಕಾರ; ಎಲ್ಲೇ ಕಂಡರೂ ಸೀಜ್ ಮಾಡೋದು ಖಚಿತ

By Sathish Kumar KH  |  First Published Jul 4, 2024, 4:44 PM IST

ಬೆಂಗಳೂರಿನಲ್ಲಿ ನಾಳೆಯಿಂದ ಎಲೆಕಟ್ರಿಕ್ ಬೈಕ್ ಟ್ಯಾಕ್ಸಿ ಕಂಡರೆ, ಸಾರಿಗೆ ಇಲಾಖೆಯಿಂದ ಸೀಜ್ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. 


ಬೆಂಗಳೂರು (ಜು.04): ರಾಜ್ಯದಲ್ಲಿ ಈಗಾಗಲೇ ಎಲೆಕಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆಯನ್ನು 2021ರಿಂದಲೇ ಸ್ಥಗಿತಗೊಳಿಸಲಾಗಿದೆ. ಆದರೂ, ರ‍್ಯಾಪಿಡೋ ಸೇರಿದಂತೆ ಹಲವು ಕಂಪನಿಯ ಎಲೆಕಟ್‌ರಿಕ್ ಬೈಕ್ ಟ್ಯಾಕ್ಸಿಗಳನ್ನು ಓಡಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಜು.5ರಿಂದ ಎಲ್ಲ ಮಾದರಿಯ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಸಂಚಾರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಆಟೋ, ಟ್ಯಾಕ್ಸಿ, ಕ್ಯಾಬ್‌ಗಳು ಸೇರಿದಂತೆ ಎಲ್ಲ ಮಾದರಿಯ ಪ್ರಯಾಣಿಕರ ಬಾಡಿಗೆ ವಾಹನಗಳಿಗೆ ಬೈಕ್ ಟ್ಯಾಕ್ಸಿಗಳಿಂದ ಭಾರಿ ಹೊಡೆತ ಬೀಳುತ್ತಿತ್ತು. ಇವರೆಲ್ಲರ ವಿರೋಧದ ನಡುವೆಯೂ, ರ‍್ಯಾಪಿಡೋ ಸೇರಿದಂತೆ ವಿವಿಧ ಕಂಪನಿಗಳ ಬೈಕ್ ಟ್ಯಾಕ್ಸಿಗಳು ಸಂಚಾರ ಮಾಡುತ್ತಿವೆ. ಆದರೆ, ಕಳೆದ 2021ರಲ್ಲಿ ಆಟೋ, ಟ್ಯಾಕ್ಸಿ ವಾಹನಗಳ ಚಾಲಕರು ಮತ್ತು ಮಾಲೀಕರ ಸಂಘಟನೆಯ ವತಿಯಿಂದ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವಂತೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡಲಾಗಿತ್ತು. ಈ ವೇಳೆ ಸರ್ಕಾರದಿಂದ ಎಲ್ಲ ಮಾದರಿಯ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಆದರೂ, ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಮಾಡಲಾಗುತ್ತಿದೆ.

Tap to resize

Latest Videos

undefined

ಬೈಕ್ ಟ್ಯಾಕ್ಸಿ ಚಾಲಕರ ಮೇಲಿನ ಹಲ್ಲೆ ತಡೆಗೆ ಹೈಕೋರ್ಟ್‌ ಸೂಚನೆ

ಈ ಹಿನ್ನೆಲೆಯಲ್ಲಿ ಖಾಸಗಿ ಸಾರಿಗೆ ವಾಹನಗಳ ಸಂಘಟನೆಯಿಂದ ಸಾರಿಗೆ ಇಲಾಕೆಯ ಕೇಂದ್ರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲಾಗಿತ್ತು. ಇದರ ಬೆನ್ನಲಿಯೇ ಸಾರಿಗೆ ಇಲಾಖೆ ಆಯುಕ್ತರು ರಾಜ್ಯಾದ್ಯಂತ ನಾಳೆಯಿಂದ ಜು.5ರಿಂದ ಕಡ್ಡಾಯವಾಗಿ ಎಲೆಕ್ಟ್ಇಕ್ ಬೈಕ್ ಟ್ಯಾಕ್ಸಿಗಳ ಸಂಚಾರ ನಿಷೇಧಿಸಬೇಕು. ಒಂದು ವೇಳೆ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಕಂಡುಬಂದಲ್ಲಿ ಕೂಡಲೇ ಅವುಗಳನ್ನು ವಶಕ್ಕೆ ಪಡೆದು ಕಾನೂನು ರೀತ್ಯ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ. ಬೆಂಗಳೂರಿನ 10 ಪ್ರಾದೇಶಿಕ ಸಾರಿಗೆ ಕಚೇರಿಗಳ ವ್ಯಾಪ್ತಿಯಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳ ವಿಶೇಷ ತಂಡಗಳನ್ನು ರಚಿಸುವಂತೆಯೂ ಆದೇಶಿಸಲಾಗಿದೆ.

ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿ ಸೇವೆ ಪುನರಾರಂಭಿಸಿದ ಓಲಾ;ತಮ್ಮದೇ ಇ- ಸ್ಕೂಟರ್ ಬಳಕೆ ಬಗ್ಗೆ ಮಾಹಿತಿ ನೀಡಿದ ಸಿಇಒ

ಅನಧಿಕೃತ ಬೈಕ್ ಟ್ಯಾಕ್ಸಿಗಳಿಗೂ ಕಡಿವಾಣ: ಬೆಂಗಳೂರಿನಲ್ಲಿ ನೋಂದಾಯಿತ ಕಂಪನಿಗಳಾದ ರ‍್ಯಾಪಿಡೋ, ಓಲಾ ಹಾಗೂ ಉಬರ್ ಬೈಕ್‌ ಟ್ಯಾಕ್ಸಿಗಳು ಹೊರತಾಗಿ ಅನಧಿಕೃತವಾಗಿ ನೋಂದಣಿ ಮಾಡಿಕೊಳ್ಳದೇ ಪಿಕಪ್, ಡ್ರಾಪ್ ಮಾಡುವ ಬೈಕ್ ಟ್ಯಾಕ್ಸಿಗಳ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಈ ಮೂಲಕ ಬೆಂಗಳೂರಿನಲ್ಲಿ ನಾಳೆಯಿಂದ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಸಂಪೂರ್ಣ ಫುಲ್‌ಸ್ಟಾಪ್ ಬೀಳುವ ಮುನ್ಸೂಚನೆ ಕಂಡುಬಂದಿದೆ.

click me!