ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಬಿಬಿಎಂಪಿ ಮೆಡಿಕಲ್ ಕಾಲೇಜು: ಬಜೆಟ್‌ನಲ್ಲಿ 500 ಕೋಟಿ ಮೀಸಲು

By Sathish Kumar KH  |  First Published Feb 1, 2024, 12:00 PM IST

ಬೆಂಗಳೂರಿನ ವಿಜಯನಗರದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವತಿಯಿಂದ ಸುಮಾರು 500 ಕೋಟಿ ರೂ. ವೆಚ್ಚದಲ್ಲಿ ಹೊಸದಾಗಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಲಾಗುತ್ತಿದೆ.


ಬೆಂಗಳೂರು  (ಫೆ.01): ರಾಜ್ಯ ರಾಜಧಾನಿಯ ಸ್ಥಳೀಯ ಆಡಳಿತ ಸಂಸ್ಥೆಯಾಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವತಿಯಿಂದ ಸುಮಾರು 500 ಕೋಟಿ ರೂ. ವೆಚ್ಚದಲ್ಲಿ ಹೊಸದಾಗಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ಮುಂದಾಗಿದೆ.

ಬಿಬಿಎಂಪಿ ವತಿಯಿಂದ ಸುಮಾರು 10,000 ರೂ.ಗಳಿಂದ 12,000 ಕೋಟಿ ರೂ. ಮೊತ್ತದ ಬಜೆಟ್‌ ಮಂಡನೆ ಮಾಡಲಿದೆ. ಹಾಲಿ 2024-25ನೇ ಸಾಲಿನ ಬಿಬಿಎಂಪಿ ಬಜೆಟ್‌ನಲ್ಲಿ ಹೊಸದಾಗಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಯೋಜನೆ ರೂಪಿಸಲಾಗಿದೆ. ಈ ಮೂಲಕ ರಾಜ್ಯದಲ್ಲೇ ಮೊದಲ ಬಾರಿಗೆ ಸ್ಥಳೀಯ ಆಡಳಿತ ಸಂಸ್ಥೆಯಿಂದ ಮೆಡಿಕಲ್ ಕಾಲೇಜ್ ನಿರ್ಮಾಣ ಮಾಡಿದ ಕೀರ್ತಿಯನ್ನು ತನ್ನದಾಗಿಸಿಕೊಳ್ಳಲಿದೆ. ಈವರೆಗೆ ಪ್ರಾಥಮಿಕ ಆರೋಗ್ಯ ನೀಡಲು ಮಾತ್ರ ಸೀಮಿತವಾಗಿದ್ದ ಬಿಬಿಎಂಪಿ ವೈದ್ಯಕೀಯ ವ್ಯವಸ್ಥೆಯನ್ನು ಈಗ ಹೈಟೆಕ್‌ ಮಾಡಲಾಗುತ್ತಿದೆ.

Tap to resize

Latest Videos

undefined

ಬಿಬಿಎಂಪಿ 2024-25ನೇ ಸಾಲಿನ ಬಜೆಟ್ ಸಿದ್ಧತೆ; ಈಗ್ಲಾದ್ರೂ ನೆರವೇರುತ್ತಾ ವಿವಿಧ ಇಲಾಖೆಗಳ ಸಮನ್ವಯತೆ!

ಬಿಬಿಎಂಪಿ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮೆಡಿಕಲ್ ಕಾಲೇಜ್ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುತ್ತಿದ್ದು, ಇದು ಸಂಪೂರ್ಣವಾಗಿ ಪಾಲಿಕೆ ಒಡೆತನದಲ್ಲಿಯೇ ಕಾರ್ಯ ನಿರ್ವಹಿಸಲಿದೆ. ಈ ಬಾರಿ ಬಿಬಿಎಂಪಿ ಬಜೆಟ್ ನಲ್ಲಿ ಮೆಡಿಕಲ್ ಕಾಲೇಜ್ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಇದುವರೆಗೆ ಶಾಲೆ, ಕಾಲೇಜುಗಳನ್ನು ನಡೆಸಲಾಗುತ್ತಿತ್ತು. ಈ ಬಾರಿ ಮೆಡಿಕಲ್ ಕಾಲೇಜ್ ನಿರ್ಮಾಣಕ್ಕೆ ಮುಂದಾಗಿದ್ದು, ವೈದ್ಯಕೀಯ ಶಿಕ್ಷಣವನ್ನೂ ನೀಡಲು ಮುಂದಾಗಿದೆ.

ಬಿಬಿಎಂಪಿಯ 2024-25ನೇ ಸಾಲಿನ ಬಜೆಟ್ ನಲ್ಲಿ ಮೆಡಿಕಲ್ ಕಾಲೇಜ್ ನಿರ್ಮಾಣಕ್ಕಾಗಿ 500 ಕೋಟಿ ರೂ. ಹಣವನ್ನು ಮೀಸಲಿಡಲಾಗಿದೆ. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ವೈದ್ಯಕೀಯ ವಿದ್ಯಾಲಯ ಸ್ಥಾಪನೆ ಮಾಡಲು ಯೋಜಿಸಲಾಗಿದೆ. ಗೋವಿಂದ ರಾಜನಗರದ ಎಂ.ಸಿ ಲೇಔಟ್‌ನಲ್ಲಿರೋ ಬಿಬಿಎಂಪಿ ಆಸ್ಪತ್ರೆಯನ್ನು ಮೆಡಿಕಲ್ ಕಾಲೇಜು ಮಾಡಲು ಮುಂದಾಗಿದೆ.ಈ ಬಗ್ಗೆ ಪಾಲಿಕೆಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ. 

ಹೆಬ್ಬಾಳದಿಂದ ಅರಮನೆ ಮೈದಾನವರೆಗೆ ಸುರಂಗ ಮಾರ್ಗಕ್ಕೆ ಬಿಬಿಎಂಪಿ ಪ್ರಸ್ತಾವನೆ ; ಟ್ರಾಫಿಕ್ ಜಾಮ್ ಕಿರಿಕಿರಿಗೆ ಸುರಂಗ ಪರಿಹಾರ?

ವೈದ್ಯಕೀಯ ನಿಯಮದಂತೆ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ 500 ಹಾಸಿಗೆಗಳ ಸಾಮರ್ಥ್ಯವನ್ನು ಹೊಂದಿರಬೇಕು. ಈಗಾಗಲೇ ಎಂಸಿ ಲೇಔಟ್ ಬಿಬಿಎಂಪಿ ಆಸ್ಪತ್ರೆಯಲ್ಲಿ 300 ಹಾಸಿಗೆಯಿದೆ. ಇದೇ ಆಸ್ಪತ್ರೆಗೆ ಹೈಟೆಕ್ ಸ್ವರ್ಶ ನೀಡಿ ಮತ್ತಷ್ಟು ಹಾಸಿಗೆ ಸಾಮರ್ಥ್ಯಗಳನ್ನು ಹೆಚ್ಚಳ ಮಾಡಿ ಮೆಡಿಕಲ್ ಕಾಲೇಜು ಆಗಿ ನಿರ್ಮಿಸಲಾಗುತ್ತದೆ. ಈಗಾಗಲೇ ವೈದ್ಯಕೀಯ ಮಹಾವಿದ್ಯಾಲಯ ನಿರ್ಮಾಣಕ್ಕೆ ಪಾಲಿಕೆಯಿಂದ 500 ಕೋಟಿ ಅನುದಾನ ಈ ಬಾರಿಯ ಬಜೆಟ್ ನಲ್ಲಿ ಕೇಳಿದೆ. ಬಡ ಮಕ್ಕಳ ವೈದ್ಯಕೀಯ ವಿದ್ಯಾಭ್ಯಾಸಕ್ಕೆ ಪಾಲಿಕೆಯಿಂದ ನೂತನ ಮೆಡಿಕಲ್ ಕಾಲೇಜು ನಿರ್ಮಿಸಲಾಗುತ್ತಿದೆ ಎಂದು ಹೇಳಿಕೊಂಡಿದೆ. ಅಂದುಕೊಂಡತೆ ಬಜೆಟ್ ನಲ್ಲಿ ಅನುದಾನ ನೀಡಿದರೆ ಮುಂದಿನ ವರ್ಷ ಬಿಬಿಎಂಪಿಯಿಂದ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಯಾಗಲಿದೆ.

click me!