ಬೆಂಗಳೂರಿನ ಸ್ಥಳೀಯ ಆಡಳಿತ ಸಂಸ್ಥೆ ಬಿಬಿಎಂಪಿ 2024-25ನೇ ಸಾಲಿನ ಬಜೆಟ್‌ನಲ್ಲಿಯಾದರೂ ಪಾಲಿಕೆ ವ್ಯಾಪ್ತಿಯಲ್ಲಿನ ಇಲಾಖೆಗಳ ಸಮನ್ವಯತೆ ತರುವಂತೆ ಜನಪ್ರತಿನಿಧಗಳು ಸಲಹೆ ನೀಡಿದ್ದಾರೆ.
ಬೆಂಗಳೂರು (ಜ.29): ರಾಜ್ಯದ ಅತಿ ದೊಡ್ಡ ಸ್ಥಳೀಯ ಆಡಳಿತ ಸಂಸ್ಥೆಯಾಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಲ್ಲಿ ಕಳೆದ 10 ವರ್ಷಗಳಿಂದ ವಿವಿಧ ಇಲಾಖೆಗಳ (ಬಿಡಿಎ, ಬಿಡಬ್ಲ್ಯೂಎಸ್‌ಎಸ್‌ಬಿ, ಬೆಸ್ಕಾಂ, ಇತರೆ..) ಸಮನ್ವಯತೆ ಭರವಸೆಯನ್ನು ಸರ್ಕಾರ ಹೇಳುತ್ತಲೇ ಬಂದಿವೆ. ಆದರೆ, ಈಗಾಗಲೇ ಮಹಾನಗರ ಪಾಲಿಕೆ ಸದಸ್ಯರಿಲ್ಲದೇ (ಕಾರ್ಪೋರೇಟರ್ಸ್) ನಾಲ್ಕು ವರ್ಷಗಳನ್ನು ಕಳೆದ ಬಿಬಿಎಂಪಿ 2024-25ನೇ ಸಾಲಿನ ಬಜೆಟ್ ಮಂಡಿಸಲು ಸಿದ್ಧತೆ ಮಾಡಿಕೊಂಡಿದೆ. ಬಜೆಟ್ ಸಲಹೆಯಾಗಿ ಪಾಲಿಕೆ ವ್ಯಾಪ್ತಿಯಲ್ಲಿನ ಇಲಾಖೆಗಳ ಸಮನ್ವಯತೆ ಮಾಡುವಂತೆ ಸಾರ್ವಜನಿಕರು ಮತ್ತು ಸ್ಥಳೀಯ ಜನಪ್ರತಿಗಳು ಸಲಹೆಯನ್ನು ನೀಡಿದ್ದಾರೆ.
ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಬಂಗಳೂರಿನ ಸ್ಥಳೀಯ ಆಡಳಿತ ಸಂಸ್ಥೆ ಬಿಬಿಎಂಪಿ 2024-25ನೇ ಸಾಲಿನ ಬಜೆಟ್ ಕುರಿತು ಪೂರ್ವಭಾವಿ ಸಭೆಯನ್ನು ನಡೆಸಲಾಯಿತು. ಈ ಸಭೆಯಲ್ಲಿ ಬೆಂಗಳೂರಿನ ಎಲ್ಲ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಅಧಿಕಾರಿಗಳು ಭಾಗವಹಿಸಿ ಸಲಹೆ ನೀಡಲು ಅವಕಾಶ ನೀಡಲಾಗಿತ್ತು. ಈ ವೇಳೆ ಕಳೆದ 10 ವರ್ಷಗಳಿಂದ ಕೇವಲ ಭರವಸೆ ಹಾಗೂ ಘೋಷಣೆಯಾಗಿಯೇ ಉಳಿದಿರುವ ಬಿಬಿಎಂಪಿ ವ್ಯಾಪ್ತಿಯೊಳಗಿನ ಎಲ್ಲ ಇಲಾಖೆಗಳನ್ನು ಸಮನ್ವಯಗೊಳಿಸುವ ಕಾರ್ಯವನ್ನು ಪೂರ್ಣಗೊಳಿಸುವಂತೆ ಸಲಹೆಯನ್ನು ನೀಡಿದ್ದಾರೆ.
undefined
ಬಿಡಿಎ ಅಧ್ಯಕ್ಷರಾಗಿ ಮೊದಲು ಈ ಕೆಲಸ ಮಾಡೋದಾಗಿ ಶಪಥ ಮಾಡಿದ ಶಾಸಕ ಎನ್.ಎ.ಹ್ಯಾರಿಸ್!
ಮುಂದುವರೆದು ಬೆಂಗಳೂರಿನ ಸಂಚಾರ ದಟ್ಟಣೆ, ಶುದ್ಧ ಕುಡಿಯುವ ನೀರು, ಘನತ್ಯಾಜ್ಯ ವಿಲೇವಾರಿ, ಅನಧಿಕೃತ ಫ್ಲೆಕ್ಸ್ ಗಳ ಹಾವಳಿ ತಡೆಯುವ ವಿಚಾರವಾಗಿ ಸಭೆಯಲ್ಲಿ ಚರ್ಚೆ ಮಾಡಲಾಯಿತು. ಆಸ್ತಿ ತೆರಿಗೆ ಪಾವತಿ ಮಾಡದೇ ಇರುವವರ ಬಗ್ಗೆ ನಿಗಾ ವಹಿಸಿ, ಸರಿಯಾಗಿ ತೆರಿಗೆ ವಸೂಲಿ ಮಾಡಲು ಕ್ರಮವಹಿಸುವ ಬಗ್ಗೆ ತೀರ್ಮಾನಿಸಲಾಯಿತು. ಹಂತಹಂತವಾಗಿ ಬೆಂಗಳೂರು ಸಮಸ್ಯೆ ಗಳ ಪರಿಹಾರ ಮಾಡುವುದು, ಅದರಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಬಿಡಿಎ, ಜಲ ಮಂಡಲಿ, ಬೆಸ್ಕಾಂ ನಡುವೆ ಸಮನ್ವಯತೆ ಸಾಧಿಸಲು ಕ್ರಮ ಕೈಗೊಳ್ಳುವ ಬಗ್ಗೆ ತೀರ್ಮಾನಿಸಲಾಯಿತು. ಜೊತೆಗೆ, 6 ಟಿಎಂಸಿ ನೀರನ್ನು ಬೆಂಗಳೂರಿಗೆ ಬಳಸಲು ಆದ್ಯತೆ ಮೇಲೆ ಕ್ರಮ ಕೈಗೊಳ್ಳಲು ನಿರ್ಧರಿಸಲಾಯಿತು.
ಬಿಬಿಎಂಪಿ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಬಂದ ಪ್ರಮುಖ ಸಲಹೆಗಳು