ಸ್ವಿಸ್ ಬ್ಯಾಂಕ್ ಭಾರತೀಯರ ಹಣದ ವಿರುದ್ಧ ಕ್ರಮದ ಭರವಸೆ!

Published : Jun 29, 2018, 07:18 PM IST
ಸ್ವಿಸ್ ಬ್ಯಾಂಕ್ ಭಾರತೀಯರ ಹಣದ ವಿರುದ್ಧ ಕ್ರಮದ ಭರವಸೆ!

ಸಾರಾಂಶ

ಸ್ವಿಸ್ ಬ್ಯಾಂಕ್ ಭಾರತೀಯರ ಹಣದ ವಿರುದ್ಧ ಕ್ರಮದ ಭರವಸೆ ಸ್ವಿಸ್ ಸರ್ಕಾರದಿಂದ ಮಾಹಿತಿ ಪಡೆಯುತ್ತಿರುವ ಕೇಂದ್ರ ಹಣಕಾಸು ಸಚಿವ ಪಿಯೂಷ್ ಗೋಯಲ್ ಮಾಹಿತಿ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮದ ಭರವಸೆ

ನವದೆಹಲಿ(ಜೂ.29): 2017ರಲ್ಲಿ ಸ್ವಿಸ್ ಬ್ಯಾಂಕ್‌ನಲ್ಲಿರುವ ಭಾರತೀಯರ ಹಣ ಶೇ.50ರಷ್ಟು(7 ಸಾವಿರ ಕೋಟಿ) ಹೆಚ್ಚಳವಾಗಿರುವ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ ಕೇಂದ್ರ ಹಣಕಾಸು ಸಚಿವ ಪಿಯೂಷ್ ಗೋಯಲ್, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ದ್ವಿಪಕ್ಷೀಯ ಒಪ್ಪಂದದ ಪ್ರಕಾರ ಭಾರತ, ಸ್ವಿಡ್ಜರ್‌ಲ್ಯಾಂಡ್ ಬ್ಯಾಂಕ್ ಗಳಲ್ಲಿ ಭಾರತೀಯರು ಹೊಂದಿರುವ ಖಾತೆಗಳ ವಿವರ ಪಡೆಯುತ್ತಿದೆ ಗೋಯಲ್ ಮಾಹಿತಿ ನೀಡಿದ್ದಾರೆ. ಸ್ವಿಡ್ಜರ್ ಲ್ಯಾಂಡ್ ಸರ್ಕಾರ ಜನವರಿ 1, 2018ರಿಂದ ಡಿಸೆಂಬರ್ 31, 2018ರ ವರೆಗೆ ಭಾರತೀಯರ ಬ್ಯಾಂಕ್ ಖಾತೆಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು 2019ರಲ್ಲಿ ನೀಡಲಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ.

ಇದೇ ವೇಳೆ ಸ್ವಿಸ್ ಬ್ಯಾಕ್‌ಗಳಲ್ಲಿ ಭಾರತೀಯರ ಠೇವಣಿ ಶೇ.50ರಷ್ಟು ಹೆಚ್ಚಳವಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಈ ಕುರಿತು ಹಣಕಾಸು ಇಲಾಖೆ ಮಾಹಿತಿ ಕಲೆ ಹಾಕುತ್ತಿದ್ದು, ಅದು ಕಪ್ಪು ಹಣವೇ ಅಥವಾ ಅಕ್ರಮ ವರ್ಗಾವಣೆಯೇ ಎಂಬುದನ್ನು ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ವಿದೇಶದಲ್ಲಿರುವ ಕಪ್ಪು ಹಣದ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಕೇಂದ್ರ ಸರ್ಕಾರ ಘೋಷಿಸಿದ ನಂತರ ಸ್ವಿಸ್ ಬ್ಯಾಂಕ್‌ಗಳಲ್ಲಿನ ಭಾರತೀಯರ ಠೇವಣಿ ಸತತ ಮೂರು ವರ್ಷಗಳಿಂದ ಇಳಿಕೆಯಾಗಿತ್ತು. ಆದರೆ ಕಳೆದ ವರ್ಷ ದಿಢೀರ್ ಶೇ.50ರಷ್ಟು ಹೆಚ್ಚಾಗಿದೆ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ಅಮೆರಿಕಾದ ಬಳಿಕ ಈಗ ಮೆಕ್ಸಿಕೋದಿಂದಲೂ ಭಾರತದ ಮೇಲೆ ಶೇ.50 ಸುಂಕ: ಜನವರಿ 1ರಿಂದಲೇ ಹೊಸ ತೆರಿಗೆ ಜಾರಿ
ಬೆಂಗಳೂರಿನಲ್ಲಿ ಊಬರ್‌ ಕ್ರಾಂತಿಯ ಹೆಜ್ಜೆ, B2B ಲಾಜಿಸ್ಟಿಕ್ಸ್, ಮೆಟ್ರೋ ಟಿಕೆಟ್‌ ಕೂಡ ಲಭ್ಯ!