ಕೇಂದ್ರ ಬಜೆಟ್: ಜಲ್‌ ಜೀವನ್‌ ಯೋಜನೆಗೆ 11500 ಕೋಟಿ

Kannadaprabha News   | Asianet News
Published : Feb 02, 2020, 07:46 AM IST
ಕೇಂದ್ರ ಬಜೆಟ್: ಜಲ್‌ ಜೀವನ್‌ ಯೋಜನೆಗೆ 11500 ಕೋಟಿ

ಸಾರಾಂಶ

ಪ್ರತಿ ಮನೆಗೂ ಕೊಳವೆ ನೀರು ಸರಬರಾಜು| ಜಲ್‌ ಜೀವನ್‌ ಯೋಜನೆಗೆ ಪ್ರಸಕ್ತ ವರ್ಷದ ಬಜೆಟ್‌ನಲ್ಲಿ 11500 ಕೋಟಿ ಬಿಡುಗಡೆ| ಒಂದು ದಶಲಕ್ಷಕ್ಕೂ ಅಧಿಕ ಜನಸಂಖ್ಯೆ ಇರುವ ನಗರಗಳಿಗೆ ಈ ಯೋಜನೆಗಳ ಮೂಲಕ ನೀರು|

ನವದೆಹಲಿ(ಫೆ.02): ಪ್ರತಿ ಮನೆಗೂ ಕೊಳವೆ ನೀರು ಸರಬರಾಜು ಮಾಡುವ ಜಲ್‌ ಜೀವನ್‌ ಯೋಜನೆಗೆ ಪ್ರಸಕ್ತ ವರ್ಷದ ಬಜೆಟ್‌ನಲ್ಲಿ 11500 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ.

ಬಜೆಟ್‌ ಮಂಡನೆ ವೇಳೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಕೆಂಪು ಕೋಟೆಯಲ್ಲಿ ಜಿಲ್‌ ಜೀವನ್‌ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಈ ಯೋಜನೆಗೆ ನಮ್ಮ ಸರ್ಕಾರ ಒಟ್ಟು 3.60 ಲಕ್ಷ ಕೋಟಿ ನೀಡಲಿದೆ. 2020-21ರ ಬಜೆಟ್‌ನಲ್ಲಿ 11,500 ಕೋಟಿ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.

ಕೇಂದ್ರ ಬಜೆಟ್ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಪ್ರಸಕ್ತ ವರ್ಷದಲ್ಲಿ ಒಂದು ದಶಲಕ್ಷಕ್ಕೂ ಅಧಿಕ ಜನಸಂಖ್ಯೆ ಇರುವ ನಗರಗಳಿಗೆ ಈ ಯೋಜನೆಗಳ ಮೂಲಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗುತ್ತದೆ. ಈ ಯೋಜನೆಯಿಂದ ಪ್ರತಿಯೊಂದು ಮನೆಗೂ ಕೊಳವೆ ನೀರು ಸಿಗುವಂತಾಗಲಿದೆ. ಜಲಮೂಲವನ್ನು ಹೆಚ್ಚಿಸಲು ಕೂಡ ಈ ಯೋಜನೆ ನೆರವಾಗಲಿದೆ ಎಂದು ತಿಳಿಸಿದ್ದಾರೆ.
 

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ಒಂದು ರಷ್ಯನ್‌ ರುಬೆಲ್‌ಗೆ ಭಾರತದಲ್ಲಿ ಬೆಲೆ ಎಷ್ಟು? ರೂಪಾಯಿ ಅಥವಾ ರುಬೆಲ್‌, ಯಾವುದರ ಮೌಲ್ಯ ಜಾಸ್ತಿ?
ನಿಖಿಲ್‌ ಕಾಮತ್‌ ಅವಿವಾಹಿತರಲ್ಲ, ವಿಚ್ಛೇದಿತ; ಅವರ ಮೊದಲ ಪತ್ನಿ ದೇಶದ ಪ್ರತಿಷ್ಠಿತ ರಿಯಲ್‌ ಎಸ್ಟೇಟ್‌ ಕಂಪನಿ ನಿರ್ದೇಶಕಿ!