
ಬೆಂಗಳೂರು(ಫೆ.12): ರಾಜ್ಯದ ಸಮಗ್ರ ಕೈಗಾರಿಕಾ ಬೆಳವಣಿಗೆ ಸಾಧಿಸಲು 30 ಸಾವಿರ ಎಕರೆ ಪ್ರದೇಶದಲ್ಲಿ 12 ವಿಶೇಷ ಹೂಡಿಕೆ ವಲಯಗಳನ್ನು ಸ್ಥಾಪಿಸಲು ಯೋಜಿಸಲಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಘೋಷಿಸಿದರು.
ಇನ್ವೆಸ್ಟ್ ಕರ್ನಾಟಕ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ರಾಜ್ಯದಲ್ಲಿ ಸದ್ಯ 2002 ಹೆಚ್ಚಿನ ಕೈಗಾರಿಕಾ ಪ್ರದೇಶಗಳಿವೆ. ಅದರ ಜತೆಗೆ ರಾಜ್ಯದಲ್ಲಿ ಸಮಗ್ರ ಕೈಗಾರಿಕಾ ಬೆಳವಣಿಗೆ ಸಾಧಿಸುವ ಉದ್ದೇಶದಿಂದ 12 ವಿಶೇಷ ಹೂಡಿಕೆ ವಲಯಗಳನ್ನು ಸ್ಥಾಪಿಸಲಾಗುವುದು. ಅದಕ್ಕಾಗಿ ಇತ್ತೀಚೆಗೆ ಅಧಿಸೂಚನೆ ಹೊರಡಿಸಲಾಗಿದೆ. ವಿಶೇಷ ಹೂಡಿಕೆ ವಲಯಗಳಲ್ಲಿ ವಿಶ್ವ ದರ್ಜೆಯ ಮೂಲ ಸೌಕರ್ಯ ಒದಗಿಸಲಾಗುತ್ತದೆ ಎಂದರು.
ಜಿಮ್‌ಗೆ ವ್ಹೀಲ್ ಚೇರ್‌ನಲ್ಲಿ ಸಿದ್ದು: ಕಾಲು ನೋವು ಗುಣಮುಖ ಆಗಲಿ ಎನ್ನುತ್ತಲೇ ಸಿಎಂ ಕಾಲೆಳೆದ ರಾಜನಾಥ್!
ಕೈಗಾರಿಕೆಗಳ ಉತ್ಪಾದನಾ ವೆಚ್ಚ ಕಡಿಮೆಯಾಗಿ ದಕ್ಷತೆ ಹೆಚ್ಚುವಂತಾಗಬೇಕೆನ್ನುವುದು ನಮ್ಮ ಸರ್ಕಾರದ ಉದ್ದೇಶ. ಅದಕ್ಕಾಗಿ ಕ್ಲಸ್ಟರ್ ಆಧಾರಿತ ನೀತಿ ಆಳವಡಿಸಿಕೊಳ್ಳಲಾಗಿದೆ. ಅದರಡಿ ರಾಜ್ಯದ ಬೇರೆಬೇರೆ ಈ ಕಡೆ ಏರೋ ಸ್ಪೇಸ್ ಮತ್ತು ಡಿಫೆನ್ಸ್, ಎಲೆಕ್ನಿಕ್ ವಾಹನ ತಯಾರಿಕೆ ಕ್ಲಸ್ಟರ್, ಫಾರ್ಮಾ, ಡೀಪ್ ಟೆಕ್, ಡೋನ್ ಪಾರ್ಕ್ ಸ್ಥಾಪಿಸಲಾಗುತ್ತಿದೆ. ಅದಕ್ಕೆ ಪೂರಕವಾಗಿ ಕೈಗಾರಿಕಾ ಪ್ರದೇಶ ಗಳಿಗೆ ಹತ್ತಿರದ ನದಿಮೂಲಗಳಿಂದ ಕುಡಿಯುವ ನೀರು ಪೂರೈಸಲು 3,800 ಕೋಟಿ ರು. ಮೊತ್ತದ ಯೋಜನೆ ರೂಪಿಸಲಾಗಿದೆ ಎಂದರು.
ಜಾಗತಿಕ ಮಟ್ಟದಲ್ಲಿ ಚೀನಾದಿಂದ ತೀವ್ರ ಸವಾಲು ಎದುರಾಗುತ್ತಿದೆ. ಅದಕ್ಕಾಗಿ ನಮ್ಮ ಉತ್ಪಾದನಾ ವಲಯದ ಚಿತ್ರಣ ಬದಲಿಸುವ ಅನಿವಾರ್ಯತೆಯಿದೆ. ಜತೆಗೆ ಜಾಗತಿಕ ಅಸ್ಥಿರತೆಸಮಸ್ಯೆಯಿದೆ. ಕರ್ನಾಟಕವನ್ನು ಜಾಗತಿಕ ಮಟ್ಟದಲ್ಲಿ ಉತ್ಪಾದನೆ ಮತ್ತು ನಾವೀನ್ಯತೆಯ ಕೇಂದ್ರವನ್ನಾಗಿ ಮಾಡಲು ಕ್ರಮ ವಹಿಸಲಾಗುತ್ತಿದೆ. ಅದಕ್ಕೆ ಪೂರಕವಾಗಿ ಇನ್ವೆಸ್ಟ್ ಕರ್ನಾಟಕ ಆಯೋಜಿಸಲಾಗಿದೆ. ಅದರ ಜತೆಗೆ ರಾಜ್ಯವನ್ನು ಹೂಡಿಕೆದಾರರ ಸ್ನೇಹಿಯಾಗಿಸಲು ನೂತನ ಏಕಗವಾಕ್ಷಿತಂತ್ರಾಂಶ ಮತ್ತು ಕೈಗಾರಿಕಾ ನೀತಿಗಳು ಸಹಕಾರಿ ಎಂದು ಹೇಳಿದರು.
ಕರ್ನಾಟಕದ ನೂತನ ಕೈಗಾರಿಕಾ ನೀತಿ ಬಿಡುಗಡೆ: 20 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿ
ವಿಶ್ವದ ಉತ್ಪಾದನಾ ಕೇಂದ್ರವನ್ನಾಗಿಸುವ ಗುರಿ: ತಂತ್ರಜ್ಞಾನದ ಬಳಕೆ, ಹೂಡಿಕೆ ಆಕರ್ಷಣೆ ಮತ್ತು ಉದ್ಯಮಗಳ ಸ್ಥಾಪನೆಯು ಆರ್ಥಿಕ ಬೆಳವಣಿಗೆಯ ನಿರ್ಣಾಯಕ ಶಕ್ತಿಗಳು. ಆದಕ್ಕಾಗಿ ಕೈಗಾರಿಕಾ ಕ್ಷೇತ್ರದಲ್ಲಿ ತಂತ್ರಜ್ಞಾನವನ್ನು ಹೆಚ್ಚಿನ ಪ್ರಮಾಣದಲ್ಲಿ ಅಳವಡಿಸಿಕೊಳ್ಳಬೇಕಿದೆ. ಡಿಜಿಟಲ್ ಪರಿವರ್ತನೆ ಅಳವಡಿಸಬೇಕಿದೆ. ಅದರಲ್ಲೂ ರಾಜ್ಯದ ಉತ್ಪಾದನಾ ಕ್ಷೇತ್ರ ಅಭಿವೃದ್ಧಿಪಡಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದ್ದು, ನೂತನ ಕೈಗಾರಿಕಾ ನೀತಿ ಯಲ್ಲೂ ಅದಕ್ಕೆ ಸಹಾಯವಾಗುವ ಅಂಶಗಳನ್ನು ಸೇರಿಸಲಾಗಿದೆ. ಮುಂದಿನ ದಿನಗಳಲ್ಲಿ ಕರ್ನಾಟಕವನ್ನು ವಿಶ್ವದ ಉತ್ಪಾದನಾ ಕೇಂದ್ರ ವನ್ನಾಗಿ ರೂಪಿಸಲಾಗುವುದು ಎಂದು ಪಾಟೀಲ್ ತಿಳಿಸಿದರು.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.