ತಿಂಗಳ ಮೊದಲ ದಿನವೇ ಜನರ ಜೇಬಿಗೆ ಕತ್ತರಿ: LPG ಸಿಲಿಂಡರ್ ಬೆಲೆಯಲ್ಲಿ ಏರಿಕೆ

Published : Oct 01, 2024, 07:43 AM ISTUpdated : Oct 01, 2024, 07:45 AM IST
ತಿಂಗಳ ಮೊದಲ ದಿನವೇ ಜನರ ಜೇಬಿಗೆ ಕತ್ತರಿ: LPG ಸಿಲಿಂಡರ್ ಬೆಲೆಯಲ್ಲಿ ಏರಿಕೆ

ಸಾರಾಂಶ

LPG Price Hike From 1st October: ತಿಂಗಳ ಮೊದಲ ದಿನವಾದ ಇಂದಿನಿಂದಲೇ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗಿದ್ದು, ಹೊಸ ದರಗಳು ಅನ್ವಯವಾಗಲಿದೆ.

ಬೆಂಗಳೂರು: ತಿಂಗಳ ಮೊದಲ ದಿನವೇ ಜನರಿಗೆ ಬೆಲೆ ಏರಿಕೆಯ ಬಿಸಿ ತಾಗಿದೆ. ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗಿದ್ದು, ಇಂದಿನಿಂದಲೇ ಹೊಸ ದರಗಳು ಅನ್ವಯವಾಗಲಿದೆ. ಮಂಗಳವಾರ ಬೆಳಗ್ಗೆಯೇ ಎಲ್‌ಪಿಜಿ ಸಿಲಿಂಡರ್ ಬೆಲೆ ಹೆಚ್ಚಳ ಮಾಡಲಾಗಿದೆ. 1ನೇ ಅಕ್ಟೋಬರ್ 2024ರಿಂದಲೇ ಇಂಧನ ಕಂಪನಿಗಳು ಬೆಲೆಯನ್ನು ಹೆಚ್ಚಳ ಮಾಡಿಕೊಂಡಿವೆ. ವಾಣಿಜ್ಯ ಬಳಕೆಯ 19 ಕೆಜಿ ಎಲ್‌ ಪಿಜಿ ಸಿಲಿಂಡರ್ ಬೆಲೆಯಲ್ಲಿ ಮಾತ್ರ ಏರಿಕೆಯಾಗಿದೆ. ಗೃಹ ಬಳಕೆಯ 14 ಕೆಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಐಓಸಿಎಲ್ ವೆಬ್‌ಸೈಟ್ ಪ್ರಕಾರ, 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್‌ನ ಹೊಸ ಬೆಲೆಗಳು ಇಂದಿನಿಂದ ಅನ್ವಯವಾಗಲಿವೆ. ಆದ್ರೆ ಬೆಲೆಗಳು ನಗರದಿಂದ ನಗರಕ್ಕೆ ವ್ಯತ್ಯಾಸವಾಗಿರುತ್ತವೆ. ದೆಹಲಿಯಿಂದ ಮುಂಬೈನವರೆಗೂ ಬೆಲೆಗಳು ಭಿನ್ನವಾಗಿರುತ್ತವೆ. ಮುಂಬೈನಲ್ಲಿ 1644 ರೂಪಾಯಿಯಿದ್ದ 19 ಕೆಜಿ ಸಿಲಿಂಡರ್ ಬೆಲೆ ಇದೀಗ 1,692.50 ರೂ ಆಗಿದೆ. ಸೆಪ್ಟೆಂಬರ್‌ನಲ್ಲಿ 39 ರೂ.ಗಳಷ್ಟು ಏರಿಕೆಯಾಗಿತ್ತು. 

ಕೋಲ್ಕತ್ತಾದಲ್ಲಿ 1,802.50 ರೂ.ನಿಂದ 1,850.50 ರೂ.ಆಗಿದೆ. ಚೆನ್ನೈನಲ್ಲಿ 1,855 ರೂ.ಯಿದ್ದ 19 ಕೆಜಿ ಸಿಲಿಂಡರ್ ಬೆಲೆ 1,903 ರೂ.ಆಗಿದೆ. ಬೆಂಗಳೂರಿನಲ್ಲಿಯೂ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ 48 ರೂಪಾಯಿ ಏರಿಕೆಯಾಗಿದೆ. ಸದ್ಯ 19 ಕೆಜಿ ಸಿಲಿಂಡರ್ ಬೆಲೆ 1,818 ರೂಪಾಯಿ ಆಗಿದೆ.

21 ವರ್ಷಕ್ಕೆ 71 ಲಕ್ಷ ರೂಪಾಯಿ! ಈ ಪೋಸ್ಟ್ ಆಫೀಸ್ ಯೋಜನೆಯಲ್ಲಿ ಹೂಡಿಕೆ ಹೇಗೆ?

ಜುಲೈ-2024 ನಂತರ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ  ನಿರಂತರವಾಗಿ ಏರಿಕೆಯಾಗುತ್ತಿದೆ. ಜುಲೈನಲ್ಲಿ ಆಯಿಲ್ ಮಾರ್ಕೆಟಿಂಗ್ ಕಂಪನಿಗಳು ಬೆಲೆಗಳನ್ನು ಕೊಂಚ ಇಳಿಕೆ ಮಾಡಿಕೊಂಡಿದ್ದವು. ದೇಶದ ರಾಜಧಾನಿ ದೆಹಲಿಯಲ್ಲಿ 30 ರೂಪಾಯಿವರೆಗೂ ಇಳಿಕೆಯಾಗಿತ್ತು. ಆದರೆ ಆಗಸ್ಟ್‌ನಲ್ಲಿ 8.50 ರೂಪಾಯಿ ಏರಿಕೆಯಾಗಿತ್ತು. ನಂತರ ಇದೀಗ ಮೂರು ತಿಂಗಳು ಸೇರಿ ಒಟ್ಟು 39 ರೂಪಾಯಿ ಬೆಲೆ ಏರಿಕೆಯಾಗಿದೆ.

19 ಕೆಜಿ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿ ನಿರಂತರ ಬದಲಾವಣೆಯಾಗುತ್ತಿದ್ದರೆ, ಮತ್ತೊಂದೆಡೆ, ತೈಲ ಮಾರುಕಟ್ಟೆ ಕಂಪನಿಗಳು ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ಗಳ ಬೆಲೆ ಮಾತ್ರ ಸ್ಥಿರವಾಗಿದೆ. ಮಹಿಳಾ ದಿನಾಚರಣೆಯಂದು ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಸುವ ಮೂಲಕ ಕೇಂದ್ರ ಸರ್ಕಾರ ಬಿಗ್ ರಿಲೀಫ್ ನೀಡಿತ್ತು. ಸದ್ಯ ಗೃಹ ಬಳಕೆಯ 14 ಕೆಜಿ ಎಲ್‌ಪಿಜಿ ಒಂದು ಸಿಲಿಂಡರ್ ಬೆಲೆ ದೆಹಲಿಯಲ್ಲಿ 803 ರೂ., ಕೋಲ್ಕತ್ತಾದಲ್ಲಿ 829 ರೂ., ಮುಂಬೈನಲ್ಲಿ 802.50 ರೂ. ಮತ್ತು ಚೆನ್ನೈನಲ್ಲಿ 818.50 ರೂ. ಮತ್ತು ಬೆಂಗಳೂರಿನಲ್ಲಿ 805.50 ರೂಪಾಯಿ ಆಗಿದೆ. 

ಅಕ್ಟೋಬರ್ 1ರಿಂದ ದೇಶದಲ್ಲಿ ಅಸ್ತಿತ್ವಕ್ಕೆ ಬರಲಿವೆ 10 ಹೊಸ ನಿಯಮಗಳು; LPG ಗ್ಯಾಸ್, UPI, GSTಯಲ್ಲಿ ದೊಡ್ಡ ಬದಲಾವಣೆಗಳು

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

Read more Articles on
click me!

Recommended Stories

ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ
ಮದುವೆ ವ್ಲಾಗ್ ಪೋಸ್ಟ್ ಮಾಡಿ ಕೋಟಿ ಬಾಚಿಕೊಂಡ ವ್ಲಾಗರ್