ಡಿ.31ರ ವರೆಗೆ ಈರುಳ್ಳಿ ರಫ್ತು ಮೇಲೆ ಶೇ.40 ರಷ್ಟು ಸುಂಕ

By Kannadaprabha News  |  First Published Aug 20, 2023, 6:53 AM IST

ದೇಶಿಯ ಮಾರುಕಟ್ಟೆಯಲ್ಲಿ ಬೆಲೆ ಏರಿಕೆ ಮತ್ತು ಪೂರೈಕೆಯನ್ನು ಸಮತೋಲನದಲ್ಲಿರಿಸುವ ಉದ್ದೇಶದಿಂದ ಡಿ.31, 2023ರವರೆಗೆ ಈರುಳ್ಳಿ ರಫ್ತು ಮೇಲೆ ಸರ್ಕಾರವು ಶೇ.40ರಷ್ಟು ತೆರಿಗೆಯನ್ನು ವಿಧಿಸಿ ಶನಿವಾರ ಆದೇಶ ಹೊರಡಿಸಿದೆ.


ನವದೆಹಲಿ: ದೇಶಿಯ ಮಾರುಕಟ್ಟೆಯಲ್ಲಿ ಬೆಲೆ ಏರಿಕೆ ಮತ್ತು ಪೂರೈಕೆಯನ್ನು ಸಮತೋಲನದಲ್ಲಿರಿಸುವ ಉದ್ದೇಶದಿಂದ ಡಿ.31, 2023ರವರೆಗೆ ಈರುಳ್ಳಿ ರಫ್ತು ಮೇಲೆ ಸರ್ಕಾರವು ಶೇ.40ರಷ್ಟು ತೆರಿಗೆಯನ್ನು ವಿಧಿಸಿ ಶನಿವಾರ ಆದೇಶ ಹೊರಡಿಸಿದೆ. ಸುಂಕ ಹೆಚ್ಚಿಸಿದ್ದರಿಂದ ಈರುಳ್ಳಿ ರಫ್ತು ಕಡಿಮೆಯಾಗಿ, ದೇಶೀಯ ಮಾರುಕಟ್ಟೆಯಲ್ಲೇ ಅದು ಉಳಿದುಕೊಳ್ಳುತ್ತದೆ. ಹೀಗಾಗಿ ಯಾವುದೇ ಕೊರತೆಯಾಗಲು ಸಾಧ್ಯವಿಲ್ಲ ಎಂಬ ಉದ್ದೇಶದಿಂದ ಹಣಕಾಸು ಸಚಿವಾಲಯ ಈ ಆದೇಶ ಹೊರಡಿಸಿದೆ.

ಸೆಪ್ಟೆಂಬರ್‌ನಲ್ಲಿ ದೇಶದಲ್ಲಿ ಈರುಳ್ಳಿ ಬೆಲೆ ಏರಿಕೆಯಾಗಲಿದ್ದು ಪೂರೈಕೆಯಲ್ಲಿ ಕೊರತೆಯಾಗಲಿದೆ ಎಂಬ ವರದಿಗಳ ಬೆನ್ನಲ್ಲೇ ಆ.11 ರಂದು ಸರ್ಕಾರವು ಸಂಗ್ರಹಿಸಿಟ್ಟಿದ್ದ 3ಲಕ್ಷ ಟನ್‌ ಈರುಳ್ಳಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಅದಾಗ್ಯೂ ಇತ್ತೀಚೆಗೆ ದೇಶದಲ್ಲಿ ಟೊಮೆಟೋ ಪೂರೈಕೆಯಲ್ಲಿ ಕೊರತೆಯಾಗಿ ಬೆಲೆ ಏರಿಕೆ ಬಿಸಿ ತಟ್ಟಿದಂತೆ ಈರುಳ್ಳಿ ಬೆಲೆಯಲ್ಲೂ ವ್ಯತ್ಯಯವಾಗದಿರಲಿ ಎಂದು ಕೇಂದ್ರ ಈ ನಿರ್ಧಾರ ಕೈಗೊಂಡಿದೆ.

Tap to resize

Latest Videos

ಸಮಯಕ್ಕೆ ಸರಿಯಾಗಿ ಬಾರದ ಮಳೆ‌, ಈರುಳ್ಳಿ ಬಿತ್ತನೆ ಮಾಡದ ರೈತ, ಬೆಲೆ ಗಗನಕ್ಕೇರುವ ಸಾಧ್ಯತೆ!

ಈರುಳ್ಳಿ ಬೇಗ ಕೊಳೆವುದನ್ನು ತಪ್ಪಿಸಲು ವಿಕಿರಣ ಚಿಕಿತ್ಸೆ; ಗಾಮಾ ಕಿರಣ ಹರಿಸಿ ಆಯಸ್ಸು ಹೆಚ್ಚಿಸಲು ಪ್ಲ್ಯಾನ್‌

click me!