
ಬೆಂಗಳೂರು(ಫೆ.06): ಫೆ. 11ರಿಂದ 14ರವರೆಗೆ ನಡೆಯಲಿರುವ ಕರ್ನಾಟಕ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ (ಜಿಮ್ )ದಲ್ಲಿ ಈ ಬಾರಿ ಗ್ರೀಸ್ ಮಾಜಿ ಪ್ರಧಾನಿ ಜಾರ್ಜ್ ಪಪಾಂಡ್ರಿಯೂ, ವೋಲ್ಲೋ ಸಮೂಹದ ಅಧ್ಯಕ್ಷ ಮಾರ್ಟಿನ್ ಲುಂಡ್‌ಸ್ಟೆಡ್ ಸೇರಿ 75 ಸಾಧಕ ಉದ್ಯಮಿಗಳು ಭಾಗವಹಿಸಲಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಇನ್ವೆಸ್ಟ್ ಕರ್ನಾಟಕ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಎಂ.ಬಿ. ಪಾಟೀಲ್, ಆದಿತ್ಯ ಬಿರ್ಲಾ ಸಮೂಹದ ಅಧ್ಯಕ್ಷ ಕುಮಾರಮಂಗಲಂ ಬಿರ್ಲಾ, ಜಿಂದಾಲ್ ಸ್ಟೀಲ್ ವರ್ಕ್ಸಸ್ ವ್ಯವಸ್ಥಾಪಕ ನಿರ್ದೇಶಕ ಸಜ್ಜನ್ ಜಿಂದಾಲ್, ಆಯುಷ್ಮಾನ್ ಭಾರತದ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಇಂದು ಭೂಷಣ್, ಚಲನಚಿತ್ರ ನಿರ್ಮಾಣ ಕಿರಣ್‌ರಾವ್, ಇಸ್ರೋ ಮಾಜಿ ಅಧ್ಯಕ್ಷಸೋಮನಾಥ್, ಅಮೆರಿಕ ಇಂಧನ ಇಲಾಖೆ ಸಿಐಒ ಆ್ಯನ್ ಡಂಕಿನ್ ಸೇರಿ ಹಲವರು ಪ್ರಮುಖರು ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳಲಿ ದ್ದಾರೆ. ಅವರೆಲ್ಲರೂ ಸಮಾವೇಶದಲ್ಲಿ ವಿವಿಧ ಗೋಷ್ಠಿಗಳಲ್ಲಿ ಪಾಲ್ಗೊಂಡು ವಿಚಾರ ಮಂಡಿಸಲಿದ್ದಾರೆ ಎಂದಿದ್ದಾರೆ.
₹50 ಸಾವಿರ ಕೋಟಿ ರೂ ಹೂಡಿಕೆ, 1 ಲಕ್ಷ ಉದ್ಯೋಗ, ಈ ರಾಜ್ಯಕ್ಕೆ ಬಂಪರ್ ಕೊಡುಗೆ ಘೋಷಿಸಿದ ಅಂಬಾನಿ
ಸಮಾವೇಶದಲ್ಲಿ 5 ಸಾವಿರಕ್ಕೂ ಹೆಚ್ಚಿನ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದು, 30ಕ್ಕೂ ಹೆಚ್ಚಿನ ಚಿಂತನಾಗೋಷ್ಠಿಗಳು ನಡೆಯಲಿವೆ. ಸಣ್ಣ ಮತ್ತು ಮಧ್ಯಮಸ್ತರದ ಕೈಗಾರಿಕೆಗಳು ಹಾಗೂ ನವೋದ್ಯಮಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಮುಖ್ಯವಾಗಿ ಭವಿಷ್ಯದ ತಂತ್ರಜ್ಞಾನ, ಆರ್ಥಿಕತೆ ಮತ ಕೈಗಾರಿಕಾ ಉದ್ಯಮ ಕುರಿತು ಚರ್ಚಿಸಲಾಗುವುದು ಎಂದ ಹೇಳಿದ್ದಾರೆ.
ಇನ್ವೆಸ್ಟ್ ಕರ್ನಾಟಕ ಹೂಡಿಕೆ ಸಮಾವೇಶ: 3 ದಿನದಲ್ಲಿ ರಾಜ್ಯಕ್ಕೆ 10 ಲಕ್ಷ ಕೋಟಿ ಸೆಳೆವ ಗುರಿ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಫೆ.12 ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಸಮಾವೇಶದ ಮೂಲಕ 10 ಲಕ್ಷ ಕೋಟಿ ರು. ಬಂಡವಾಳ ಆಕರ್ಷಿಸುವ ಗುರಿ ಹೊಂದಿದ್ದೇವೆ. ಇದಕ್ಕೆ ಪೂರಕವಾಗಿ ಫೆ.11 ರಂದು ಸಂಜೆ 4 ಗಂಟೆಗೆ ಸಮಾವೇಶ ಉದ್ಘಾಟಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದರು.
ಫೆ.03 ರಂದು ವಿಧಾನಸೌಧದಲ್ಲಿ ಇನ್ವೆಸ್ಟ್ ಕರ್ನಾಟಕ-2025 ಸಮಾವೇಶ ಕುರಿತು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸೇರಿ ವಿವಿಧ ಸಚಿವರು, ಹಿರಿಯ ಅಧಿಕಾರಿಗಳೊಂದಿಗೆ ಪೂರ್ವ ಸಿದ್ಧತಾ ಸಭೆ ನಡೆಸಿ ಮಾತನಾಡಿದರು.
ಸಮಾವೇಶ ಮೂಲಕ ರಾಜ್ಯದಲ್ಲಿ 10 ಲಕ್ಷ ಕೋಟಿ ರು.ಗೂ ಹೆಚ್ಚು ಬಂಡವಾಳ ಹೂಡಿಕೆಯಾಗಬಹುದು ಎಂದು ಅಂದಾಜು ಮಾಡಲಾಗಿದೆ. ಇಲ್ಲಿವರೆಗೂ ಸುಮಾರು 7 ಲಕ್ಷ ಕೋಟಿ ಬಂಡವಾಳದ ಹರಿವು ಖಚಿತಪಡಿಸಲಾಗಿದೆ. 18 ದೇಶಗಳ 60ಕ್ಕೂ ಹೆಚ್ಚು ಗಣ್ಯ ಪ್ರತಿನಿಧಿಗಳು ಹಾಗೂ 2,000ಕ್ಕೂ ಹೆಚ್ಚು ಹೂಡಿಕೆದಾರರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಮಾವೇಶದಲ್ಲಿ 9 ದೇಶಗಳು ತಮ್ಮ ಪೆವಿಲಿಯನ್‌ಗಳನ್ನು ತೆರೆಯಲು ಮುಂದೆ ಬಂದಿವೆ. 10 ದೇಶಗಳ ಉನ್ನತ ಮಟ್ಟದ ಕೈಗಾರಿಕಾ ವಲಯದ ನಾಯಕರು ತಾಂತ್ರಿಕ ವಲಯದ ಗೋಷ್ಠಿಗಳಲ್ಲಿ ಭಾಗವಹಿಸಲಿದ್ದಾರೆ. ಹೀಗಾಗಿ ಸಮಾವೇಶ ಸಂಪೂರ್ಣ ಯಶಸ್ವಿಯಾಗುವ ವಿಶ್ವಾಸವಿದೆ ಎಂದು ಹೇಳಿದ್ದರು.
ಜರ್ಮನಿಯ ಕ್ರೋನ್ಸ್ ಕಂಪನಿಯೊಂದಿಗೆ ರಾಜ್ಯ ಸರ್ಕಾರದ ಒಪ್ಪಂದ
2025-30 ಕೈಗಾರಿಕಾ ನೀತಿ ಬಿಡುಗಡೆ:
ಸಮಾವೇಶದಲ್ಲೇ ಕರ್ನಾಟಕ ರಾಜ್ಯದ ನೂತನ ಕೈಗಾರಿಕಾ ನೀತಿ 2025-30 ಅನ್ನು ಪ್ರಕಟಿಸಲಾಗುವುದು. ದೇಶದ ಅನೇಕ ರಾಜ್ಯಗಳ ನೀತಿಗಳನ್ನು ಅಧ್ಯಯನ ಮಾಡಲಾಗಿದ್ದು, ಎಲ್ಲದಕ್ಕಿಂತ ಉತ್ತಮವಾದ, ಪ್ರೋತ್ಸಾಹದಾಯಕ ನೀತಿ ಪರಿಚಯಿಸಲಾಗುವುದು. ಜೊತೆಗೆ ಕ್ಲೀನ್ ಮೊಬಿಲಿಟಿ ನೀತಿ 2025-30 ಅನ್ನು ಅನಾವರಣ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದಿದ್ದರು.
ಅನೇಕ ಹೂಡಿಕೆದಾರರು ಬೆಂಗಳೂರು ಸೇರಿ ಹೊರಗಿನ ಜಿಲ್ಲೆಗಳಲ್ಲಿ ಸಾಕಷ್ಟು ಉದ್ಯೋಗ ಸೃಷ್ಟಿಗೆ ಒತ್ತು ನೀಡಿದ್ದಾರೆ. ಇವರಿಗೆ ಮೂರು ಲಕ್ಷ ಡಾಲರ್ ಮೊತ್ತದ ಬಹುಮಾನ ನೀಡಲಾಗುವುದು. ನವೋದ್ಯಮಗಳ ಪ್ರತಿ ವಿಭಾಗಕ್ಕೆ ಒಟ್ಟು 1 ಲಕ್ಷ ಡಾಲರ್ ಬಹುಮಾನ ಮೊತ್ತ ನಿಗದಿ ಮಾಡಲಾಗಿದೆ. ವಿನೂತನ ಚಿಂತನೆಗಳನ್ನು ಹೊಂದಿರುವ 45 ನವೋದ್ಯಮಗಳಿಗೆ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದ್ದರು.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.