ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ಮಾರ್ಚ್ ನಲ್ಲಿ ಡಿಎ ಹೆಚ್ಚಳ ಸಾಧ್ಯತೆ

By Suvarna NewsFirst Published Dec 5, 2022, 5:53 PM IST
Highlights

ನವರಾತ್ರಿ ಸಮಯದಲ್ಲಿ ಕೇಂದ್ರ ಸರ್ಕಾರಿ ನೌಕರರ ಡಿಎ ಹೆಚ್ಚಳವಾಗಿತ್ತು. ಈಗ ಇನ್ನೊಮ್ಮೆ ಡಿಎ ಏರಿಕೆ ಮಾಡಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಹೇಳಲಾಗಿದೆ. ವರದಿಗಳ ಪ್ರಕಾರ 2023ರ ಮಾರ್ಚ್ ನಲ್ಲಿ ಡಿಎ ಹೆಚ್ಚಳವಾಗುವ ಸಾಧ್ಯತೆಯಿದೆ. 
 

ನವದೆಹಲಿ (ಡಿ.5): ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಇನ್ನೊಮ್ಮೆ ಶೇ.3-5ರಷ್ಟು ಹೆಚ್ಚಳವಾಗಲಿದೆ ಎಂದು ಅನೇಕ ವರದಿಗಳು ತಿಳಿಸಿವೆ. ಮಾರ್ಚ್ ನಲ್ಲಿ ತುಟ್ಟಿ ಭತ್ಯೆ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಇದರಿಂದ ಕೇಂದ್ರ ಸರ್ಕಾರದ ಲಕ್ಷಾಂತರ ನೌಕರರು ಹಾಗೂ ಪಿಂಚಣಿದಾರರಿಗೆ ಪ್ರಯೋಜನವಾಗಲಿದೆ.  ನವರಾತ್ರಿ ಸಂದರ್ಭದಲ್ಲಿ (ಸೆಪ್ಟೆಂಬರ್ ನಲ್ಲಿ) ಕೇಂದ್ರ ಸರ್ಕಾರಿ ನೌಕರರ ಡಿಎ ಅನ್ನು ಕೇಂದ್ರ ಸರ್ಕಾರ ಶೇ.4ರಷ್ಟು ಏರಿಕೆ ಮಾಡಿತ್ತು. ಪರಿಣಾಮ ಕೇಂದ್ರ ಸರ್ಕಾರಿ ನೌಕರರ ಡಿಎ ಶೇ.34ರಿಂದ ಶೇ.38ಕ್ಕೆ ಹೆಚ್ಚಳವಾಗಿತ್ತು.  ಇನ್ನು 18 ತಿಂಗಳುಗಳಿಂದ ಬಾಕಿ ಉಳಿದಿರುವ ತುಟ್ಟಿ ಭತ್ಯೆ ಹಾಗೂ ತುಟ್ಟಿ ಪರಿಹಾರವನ್ನು ಕಂತುಗಳಲ್ಲಿ ನೀಡಲು ಕೂಡ ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಶೀಘ್ರದಲ್ಲೇ ನೀಡುವ ಸಾಧ್ಯತೆಯಿದೆ. ಹಣದುಬ್ಬರ ಹೆಚ್ಚಳ ಹಾಗೂ ಏಳನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಪರಿಗಣಿಸಿ ಡಿಎ ಅನ್ನು  2022ರ ಮಾರ್ಚ್ ನಲ್ಲಿ ಶೇ.3-5ರಷ್ಟು ಏರಿಕೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಹೀಗಾಗಿ ಇನ್ನು ಮೂರು ತಿಂಗಳಲ್ಲಿ ಕೇಂದ್ರ ಸರ್ಕಾರಿ ನೌಕರರ ವೇತನ ಹೆಚ್ಚಳವಾಗುವ ನಿರೀಕ್ಷೆ ಹೆಚ್ಚಿದೆ. 

ಈ ವರ್ಷದ ಮಾರ್ಚ್ ನಲ್ಲಿ ಕೇಂದ್ರ ಸಚಿವ ಸಂಪುಟ ಡಿಎಯನ್ನು (DA) ಶೇ.3ಕ್ಕೆ ಏರಿಕೆ ಮಾಡಲು ಒಪ್ಪಿಗೆ ನೀಡಿತ್ತು. ಪರಿಣಾಮ ಡಿಎ ಮೂಲವೇತನದ ಶೇ.34ಕ್ಕೆ ಹೆಚ್ಚಳವಾಗಿತ್ತು. ಇನ್ನು ಸೆಪ್ಟೆಂಬರ್ ನಲ್ಲಿ ಕೂಡ ಕೇಂದ್ರ ಸರ್ಕಾರ ನೌಕರರ (Central Government employees) ಡಿಎ ಅನ್ನು ಶೇ.4ರಷ್ಟು ಏರಿಕೆ ಮಾಡಲು ಒಪ್ಪಿಗೆ ನೀಡಿತ್ತು. ಪರಿಣಾಮ ಕೇಂದ್ರ ಸರ್ಕಾರಿ ನೌಕರರ ಡಿಎ ಮೂಲವೇತನದ ಶೇ.38ಕ್ಕೆ ಏರಿಕೆಯಾಗಿದೆ. ಜುಲೈ 1ರಿಂದ ಪೂರ್ವಾನ್ವಯವಾಗುವಂತೆ ಈ ಹೆಚ್ಚಳ (Hike) ಮಾಡಲಾಗಿದೆ. ಇದರಿಂದ ಸುಮಾರು 47.68 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 68.62 ಲಕ್ಷ ಪಿಂಚಣಿದಾರರಿಗೆ ಪ್ರಯೋಜನವಾಗಿದೆ. 

ವಿವಾಹಿತರು ಈ ಯೋಜನೆಯಲ್ಲಿ ಹೂಡಿಕೆ ಮಾಡಿದ್ರೆ ಸಿಗುತ್ತೆ ತಿಂಗಳಿಗೆ 5000ರೂ. ಪಿಂಚಣಿ

ಡಿಎ ಪರಿಷ್ಕರಣೆಗೆ ಅಖಿಲ ಭಾರತ ಗ್ರಾಹಕ ಬೆಲೆ ಸೂಚ್ಯಂಕ (AICPI) ಮಾನದಂಡವಾಗಿದ್ದು,ಅದರ ಆಧಾರದಲ್ಲೇ ಪರಿಷ್ಕರಿಸಲಾಗುತ್ತದೆ. ಎಐಸಿಪಿಐ ಆರ್ ಬಿಐಯ (RBI) ಸಹನ ಮಟ್ಟಕ್ಕಿಂತ ಮೇಲಿದೆ. 

ಕೋವಿಡ್ -19 (COVID-19) ಕಾರಣದಿಂದ ಸೃಷ್ಟಿಯಾದ ಹೆಚ್ಚುವರಿ ವೆಚ್ಚಗಳನ್ನು ಭರಿಸಲು ಕೇಂದ್ರ ಸರ್ಕಾರ ಡಿಎ (DA) ಹಾಗೂ ಡಿಆರ್ (DR) ದರ ಹೆಚ್ಚಳದ ಮೂರು ಕಂತುಗಳನ್ನು ತಡೆ ಹಿಡಿದಿತ್ತು. 2020 ಜನವರಿ 1, 2020 ಜುಲೈ 1 ಹಾಗೂ 2021ರ ಜನವರಿ 1ರ ಡಿಎ (DA) ಹಾಗೂ ಡಿಆರ್ (DR) ಕಂತುಗಳನ್ನು ಸರ್ಕಾರ ತಡೆ ಹಿಡಿದಿತ್ತು. 2021ರ ಜುಲೈನಲ್ಲಿ ಡಿಎ ಹಾಗೂ ಡಿಆರ್ ಹೆಚ್ಚಳದ ಮೇಲಿನ ತಡೆಯನ್ನು ಹಿಂಪಡೆದ ಸರ್ಕಾರ, ಆ ಬಳಿಕ ಒಟ್ಟು ಮೂರು ಬಾರಿ ಡಿಎ (DA) ಹಾಗೂ ಡಿಆರ್  (DR) ಭತ್ಯೆಗಳಲ್ಲಿ ಹೆಚ್ಚಳ ಮಾಡಿತ್ತು. 

ಮತ್ತೆ ಗೃಹ, ವಾಹನ ಬಡ್ಡಿ ದರ ಏರಿಕೆ ಖಚಿತ: ನಾಡಿದ್ದು ಆರ್‌ಬಿಐ ಬಡ್ಡಿದರ ಏರಿಕೆ?

ಡಿಎ ಲೆಕ್ಕಚಾರ ಹೀಗೆ
ಉದ್ಯೋಗಿಗಳ ಜೀವನ ನಿರ್ವಹಣಾ ವೆಚ್ಚದ ಆಧಾರದಲ್ಲಿ ಡಿಎ (DA) ನಿಗದಿಪಡಿಸಲಾಗುತ್ತದೆ. ಉದ್ಯೋಗಿ ನಗರ, ಗ್ರಾಮೀಣ, ಅರೆಪಟ್ಟಣ ಹೀಗೆ ಯಾವ ಪ್ರದೇಶದಲ್ಲಿ ವಾಸಿಸುತ್ತಾನೆ ಎಂಬ ಆಧಾರದಲ್ಲಿ ಡಿಎ ನಿಗದಿಪಡಿಸಲಾಗುತ್ತದೆ. ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರ (Pensioners) ಡಿಎ ಲೆಕ್ಕಾಚಾರ ಮಾಡೋ ಫಾರ್ಮುಲಾವನ್ನು ಕೇಂದ್ರ ಸರ್ಕಾರ (Central Government) 2006ರಲ್ಲಿ ಬದಲಾಯಿಸಿತ್ತು. ಅದು ಈ ಕೆಳಗಿನಂತಿದೆ.
ತುಟ್ಟಿ ಭತ್ಯೆ %= (ಅಖಿಲ ಭಾರತ ಗ್ರಾಹಕ ದರ ಸೂಚ್ಯಂಕದ ಸರಾಸರಿ (ಮೂಲ ವರ್ಷ 2001=100) ಕಳೆದ 3 ತಿಂಗಳು-126.33)/126.33)x100.
 

click me!