ಹೆದ್ದಾರಿ ನಿರ್ಮಾಣಕ್ಕೆ ಖಾಸಗಿ ಬಂಡವಾಳ ಆಕರ್ಷಣೆಯ ಗುರಿ| ಮುಂದಿನ ಮೂರು ವರ್ಷದಲ್ಲಿ ಹೆದ್ದಾರಿ, ರಸ್ತೆ ಉನ್ನತೀಕರಣ| 11. ಕಿ. ಮೀ ಹೆಚ್ಚುವರಿ ಹೆದ್ದಾರಿ ನಿರ್ಮಾಣ| ದೇಶಾದ್ಯಂತ ಭಾರತ್ ಮಾಲಾ ಯೋಜನೆ ವಿಸ್ತರಣೆ
ನವದೆಹಲಿ(ಫೆ.01) ಚುನಾವಣಾ ಹೊಸ್ತಿಲಲ್ಲಿ ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಹಾಗೂ ಅಸ್ಸಾಂಗೆ ಈ ಬಾರಿಯ ಬಜೆಟ್‌ನಲ್ಲಿ ಹೆಚ್ಚಿನ ಯೋಜನೆಗಳನ್ನು ಪ್ರಕಟಿಸಲಾಗಿದೆ. ಈ ನಾಲ್ಕು ರಾಜ್ಯಗಳಲ್ಲಿ ರಸ್ತೆ ನಿರ್ಮಾಣಕ್ಕೆ ಒಟ್ಟು 2.27ಲಕ್ಷ ಕೋಟಿ ರೂ. ಮೀಸಲಿರಿಸಲಾಗಿದೆ.
undefined
ಪಶ್ಚಿಮ ಬಂಗಾಳದಲ್ಲಿಯೂ ಕೂಡ ರಸ್ತೆ ಅಭಿವೃದ್ಧಿಗೆ ಅನುದಾನ ಒದಗಿಸಲಾಗಿದೆ. ತಮಿಳುನಾಡು, ಕೇರಳದಲ್ಲಿ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಹಣ ಒದಗಿಸಲಾಗಿದೆ.
ತಮಿಳುನಾಡಿನಲ್ಲಿ ಮೂರುವರೆ ಸಾವಿರ ಕಿಲೋ ಮೀಟರ್ ಎರಡು ಹೆದ್ದಾರಿ, 55 ಸಾವಿರ ಕೋಟಿ ವೆಚ್ಚದಲ್ಲಿ ಕೇರಳದಲ್ಲಿ 1100 ಕಿಲೋ ಮೀಟರ್ ಹಾಗೂ ಪಶ್ಚಿಮ ಬಂಗಾಳದಲ್ಲಿ 700 ಕಿಲೋ ಮೀಟರ್ ಹೆದ್ದಾರಿ ನಿರ್ಮಾಣಕ್ಕೆ ಬಂಪರ್ ಅನುದಾನ ಘೋಷಿಸಲಾಗಿದೆ. ಭಾರತ್ ಮಾಲಾ ಯೋಜನೆ 3.3 ಲಕ್ಷ ಕೋಟಿ ರೂ. ಘೋಷಿಸಲಾಗಿದೆ.
ಏಪ್ರಿಲ್, ಮೇ ತಿಂಗಳಲ್ಲಿ ಅಸ್ಸಾಂ ಹಾಗೂ ಪಶ್ಚಿಮ ಬಂಗಾಳ, ತಮಿಳುನಾಡು ಹಾಘೂ ಕೇರಳದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ ಎಂಬುವುದು ಉಲ್ಲೇಖನೀಯ.