
ನವದೆಹಲಿ(ಜ.15): ಭಾರತ ಪ್ರವಾಸದಲ್ಲಿರುವ ಅಮೆಜಾನ್ ಮುಖ್ಯಸ್ಥ ಜೆಫ್ ಬೆಜೋಸ್, ಆನ್‌ಲೈನ್ ಆಧಾರಿತ ಸಣ್ಣ ಮತ್ತು ಮಧ್ಯಮ ವಾಣಿಜ್ಯ ಕಂಪನಿಗಳನ್ನು ಆರಂಭಿಸಲು ದೇಶದಲ್ಲಿ 1 ಬಿಲಿಯನ್ ಅಮೆರಿಕನ್ ಡಾಲರ್(7,100 ಕೋಟಿ ರೂ.) ಹೂಡಿಕೆ ಮಾಡುವ ಘೋಷಣೆ ಮಾಡಿದ್ದಾರೆ.
ಅಮೆಜಾನ್‌ಗೆ ಭಾರತದಲ್ಲಿ ಉತ್ತಮ ಮಾರುಕಟ್ಟೆ ಇದ್ದು, ಇದನ್ನು ವಿಸ್ತರಿಸುವ ಉದ್ದೇಶದೊಂದಿಗೆ 1 ಬಿಲಿಯನ್ ಡಾಲರ್ ಹೂಡಿಕೆ ಮಾಡಲಿರುವುದಾಗಿ ಜೆಫ್ ಬೆಜೋಸ್ ಘೋಷಿಸಿದರು.
2025ರ ಹೊತ್ತಿಗೆ 10 ಬಿಲಿಯನ್ ಯುಎಸ್ ಡಾಲರ್ ಮೊತ್ತದ ಭಾರತದ ವಸ್ತುಗಳನ್ನು ಅಮೆರಿಕವೂ ಸೇರಿದಂತೆ ವಿವಿಧ ದೇಶಗಳಿಗೆ ರಫ್ತು ಮಾಡುವುದು ತಮ್ಮ ಉದ್ದೇಶ ಎಂದೂ ಜೆಫ್ ಬೆಜೋಸ್ ಸ್ಪಷ್ಟಪಡಿಸಿದ್ದಾರೆ.
21ನೇ ಶತಮಾನದಲ್ಲಿ ಭಾರತ-ಅಮೆರಿಕ ನಡುವೆ ಉತ್ತಮ ವಾಣಿಜ್ಯ ಸಂಬಂಧ ಅತ್ಯಂತ ಮಹತ್ವದ್ದಾಗಿದೆ ಎಂದು ಅಭಿಪ್ರಾಯಪಟ್ಟಿರುವ ಜೆಫ್, ಪರಸ್ಪರ ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವುದು ಉತ್ತಮ ಭವಿಷ್ಯಕ್ಕೆ ಅನಿವಾರ್ಯ ಎಂದು ಹೇಳಿದರು.
ಇದಕ್ಕೂ ಮೊದಲು ಅಮೆಜಾನ್ ಮುಖ್ಯಸ್ಥ ಜೆಫ್ ಬೆಜೋಸ್ ನವದೆಹಲಿಯ ರಾಜ್‌ಘಾಟ್‌ಗೆ ತೆರಳಿ ಮಹಾತ್ಮಾ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.