ರೈತರಿಂದ ನೇರವಾಗಿ ತೊಗರಿ ಖರೀದಿಗೆ ವೆಬ್‌ಸೈಟ್‌ ಆರಂಭಿಸಿದ ಅಮಿತ್ ಶಾ: ಹಣ ರೈತರ ಖಾತೆಗೆ ವರ್ಗಾವಣೆ

Published : Jan 05, 2024, 12:52 PM IST
ರೈತರಿಂದ ನೇರವಾಗಿ ತೊಗರಿ ಖರೀದಿಗೆ ವೆಬ್‌ಸೈಟ್‌ ಆರಂಭಿಸಿದ ಅಮಿತ್ ಶಾ: ಹಣ ರೈತರ ಖಾತೆಗೆ ವರ್ಗಾವಣೆ

ಸಾರಾಂಶ

ಆಹಾರ ಭದ್ರತೆಗಾಗಿ ಹೆಚ್ಚುವರಿ ದಾಸ್ತಾನು ಮಾಡಲು ಕೇಂದ್ರ ಸರ್ಕಾರ ಈ ಪೋರ್ಟಲ್‌ ಮೂಲಕ ರೈತರಿಂದ ತೊಗರಿ ಖರೀದಿಸಲಿದೆ. ರೈತರು ಇದರಲ್ಲಿ ನೋಂದಣಿ ಮಾಡಿಕೊಂಡು ಸರ್ಕಾರಿ ಸ್ವಾಮ್ಯದ ನಾಫೆಡ್‌ ಅಥವಾ ಎನ್‌ಸಿಸಿಎಫ್‌ಗೆ ಕನಿಷ್ಠ ಬೆಂಬಲ ಬೆಲೆ ಅಥವಾ ಮಾರುಕಟ್ಟೆ ಬೆಲೆ ಇವುಗಳಲ್ಲಿ ಯಾವುದು ಹೆಚ್ಚಿದೆಯೋ ಆ ಬೆಲೆಗೆ ತಮ್ಮ ತೊಗರಿಯನ್ನು ಮಾರಾಟ ಮಾಡಬಹುದು.

ನವದೆಹಲಿ (ಜನವರಿ 5, 2024): ಕನಿಷ್ಠ ಬೆಂಬಲ ಬೆಲೆ ಅಥವಾ ಮಾರುಕಟ್ಟೆ ದರದಡಿ ರೈತರಿಂದ ನೇರವಾಗಿ ತೊಗರಿ ಖರೀದಿಸಲು ಕೇಂದ್ರ ಸರ್ಕಾರ ಹೊಸ ವೆಬ್‌ಸೈಟ್‌ ಆರಂಭಿಸಿದೆ. ಕೇಂದ್ರ ಸಹಕಾರ ಸಚಿವ ಅಮಿತ್‌ ಶಾ ಗುರುವಾರ ತೊಗರಿ ಖರೀದಿಗೆ www.esamridhi.in ಪೋರ್ಟಲ್‌ ಲೋಕಾರ್ಪಣೆ ಮಾಡಿದರು. ಇದರಿಂದ ತೊಗರಿ ಹೆಚ್ಚು ಬೆಳೆವ ಕರ್ನಾಟಕದ ಕಲಬುರಗಿ ರೈತರಿಗೆ ಅನುಕೂಲವಾಗಲಿದೆ.

ಆಹಾರ ಭದ್ರತೆಗಾಗಿ ಹೆಚ್ಚುವರಿ ದಾಸ್ತಾನು ಮಾಡಲು ಕೇಂದ್ರ ಸರ್ಕಾರ ಈ ಪೋರ್ಟಲ್‌ ಮೂಲಕ ರೈತರಿಂದ ತೊಗರಿ ಖರೀದಿಸಲಿದೆ. ರೈತರು ಇದರಲ್ಲಿ ನೋಂದಣಿ ಮಾಡಿಕೊಂಡು ಸರ್ಕಾರಿ ಸ್ವಾಮ್ಯದ ನಾಫೆಡ್‌ ಅಥವಾ ಎನ್‌ಸಿಸಿಎಫ್‌ಗೆ ಕನಿಷ್ಠ ಬೆಂಬಲ ಬೆಲೆ ಅಥವಾ ಮಾರುಕಟ್ಟೆ ಬೆಲೆ ಇವುಗಳಲ್ಲಿ ಯಾವುದು ಹೆಚ್ಚಿದೆಯೋ ಆ ಬೆಲೆಗೆ ತಮ್ಮ ತೊಗರಿಯನ್ನು ಮಾರಾಟ ಮಾಡಬಹುದು. ಅದರ ಹಣವು ರೈತರ ಬ್ಯಾಂಕ್‌ ಖಾತೆಗೆ ಡಿಬಿಟಿ (ನೇರ ನಗದು ವರ್ಗಾವಣೆ) ಮೂಲಕ ಸಂದಾಯವಾಗಲಿದೆ.

ಬರ ಪರಿಹಾರ ಕೊಡದೇ, ಆಧಾರ ಜೋಡಣೆ ಕುಂಟು ನೆಪ ಹೇಳಿದ ಸರ್ಕಾರಕ್ಕೆ ಛೀಮಾರಿ ಹಾಕಿದ ಮಾಜಿ ಸಿಎಂ!

ಪೋರ್ಟಲ್‌ ಲೋಕಾರ್ಪಣೆ ಮಾಡಿದ ಅಮಿತ್‌ ಶಾ, ಡಿಬಿಟಿ ಅಡಿ 25 ತೊಗರಿ ಬೆಳೆಗಾರರಿಗೆ 68 ಲಕ್ಷ ರೂ.ಗಳನ್ನು ವರ್ಗಾವಣೆ ಮಾಡಿದರು. ದೇಶದಲ್ಲಿ ಕರ್ನಾಟಕ, ಆಂಧ್ರಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ಜಾರ್ಖಂಡ್‌ ಮತ್ತು ಗುಜರಾತ್‌ನಲ್ಲಿ ತೊಗರಿ ಬೆಳೆಯಲಾಗುತ್ತಿದ್ದು, ಇಲ್ಲಿನ ರೈತರಿಗೆ ಸರ್ಕಾರದ ಈ ಪೋರ್ಟಲ್‌ನಿಂದ ಅನುಕೂಲವಾಗಲಿದೆ.

‘ಸದ್ಯ ತೊಗರಿ ಸೇರಿದಂತೆ ಅನೇಕ ಬೇಳೆಗಳನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. 2014ರಲ್ಲಿ 19.2 ದಶಲಕ್ಷ ಟನ್‌ ಇದ್ದ ದೇಸಿ ತೊಗರಿ ಉತ್ಪಾದನೆಯು ಬೆಂಬಲ ಬೆಲೆ ದ್ವಿಗುಣಗೊಳಿಸಿದ್ದರ ಪರಿಣಾಮ 2023ರಲ್ಲಿ 26 ದಶಲಕ್ಷ ಟನ್‌ಗೆ ಏರಿಕೆಯಾಗಿದ್ದರೂ ಸ್ವಾವಲಂಬನೆ ಸಾಧ್ಯವಾಗಿಲ್ಲ. 2027ಕ್ಕೆ ಬೇಳೆಕಾಳುಗಳ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಲು ಎಲ್ಲಾ ಕ್ರಮ ಕೈಗೊಳ್ಳಲಾಗಿದೆ. 2028ರ ಜನವರಿಯಿಂದ ಒಂದೇ ಒಂದು ಕೆ.ಜಿ. ಬೇಳೆಕಾಳನ್ನೂ ನಾವು ಆಮದು ಮಾಡಿಕೊಳ್ಳುವುದಿಲ್ಲ. ಮುಂದಿನ ದಿನಗಳಲ್ಲಿ ಮೆಕ್ಕೆಜೋಳ, ಚನ್ನಂಗಿ ಬೇಳೆ, ಉದ್ದು ಮುಂತಾದ ಬೇಳೆಗಳನ್ನು ಖರೀದಿಸುವುದಕ್ಕೂ ಪೋರ್ಟಲ್‌ ಬಿಡುಗಡೆ ಮಾಡಲಾಗುವುದು’ ಎಂದು ಅಮಿತ್‌ ಶಾ ಹೇಳಿದರು.

ಒಂದೇ ರಾತ್ರಿ 11 ರೈತರ ಪಂಪಸೆಟ್ ಕೇಬಲ್ ಕಳ್ಳತನ ಮಾಡಿದ ಖದೀಮರು; ಬರದ ಪರಿಸ್ಥಿತಿಗೆ ರೈತರು ಕಣ್ಣೀರು

ರೈತರು ತೊಗರಿ ಮಾರುವುದು ಹೇಗೆ?
ಸದ್ಯ ಕನಿಷ್ಠ ಬೆಂಬಲ ಬೆಲೆಯಡಿ ಕೇಂದ್ರ ಸರ್ಕಾರ ದೇಶದ ಬೇರೆ ಬೇರೆ ಕಡೆ ಖರೀದಿ ಕೇಂದ್ರಗಳನ್ನು ಸ್ಥಾಪಿಸಿ ರೈತರಿಂದ ತೊಗರಿ ಖರೀದಿಸುತ್ತಿದೆ. ಇನ್ನು ಮುಂದೆ ರೈತರು ತೊಗರಿ ಬೆಳೆಯುವುದಕ್ಕೂ ಮೊದಲೇ ಪ್ರಾಥಮಿಕ ಕೃಷಿ ಕ್ರೆಡಿಟ್‌ ಸೊಸೈಟಿ ಅಥವಾ ಕೃಷಿ ಉತ್ಪಾದಕ ಕೇಂದ್ರಗಳ ಮೂಲಕ www.esamridhi.in ವೆಬ್‌ಸೈಟಿನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಬೆಳೆ ಬಂದ ಮೇಲೆ ನಾಫೆಡ್‌ ಅಥವಾ ಎನ್‌ಸಿಸಿಎಫ್‌ಗೆ ಈ ಪೋರ್ಟಲ್‌ನಲ್ಲೇ ಮಾರಾಟ ಮಾಡಬಹುದು. ಮಧ್ಯವರ್ತಿಗೆ ಅವಕಾಶವಿಲ್ಲದಂತೆ ಹಣ ನೇರವಾಗಿ ರೈತರ ಖಾತೆಗೆ ವರ್ಗಾವಣೆಯಾಗುತ್ತದೆ. ಇಲ್ಲಿ ನೋಂದಣಿ ಮಾಡಿಕೊಂಡ ಮೇಲೂ ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅವಕಾಶವಿರುತ್ತದೆ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

Read more Articles on
click me!

Recommended Stories

Gold Price: ಸಂಬಳದಲ್ಲಿ ಹಣ ಉಳಿದಿದ್ಯಾ? ಇಲ್ಲಿದೆ ನೋಡಿ ಇಂದಿನ ಚಿನ್ನದ ಬೆಲೆ
ಇಂಟರ್ನೆಟ್ ಇಲ್ಲದೆಯೂ UPI ಪಾವತಿ ಮಾಡಬಹುದು, *99# ಮೂಲಕ ಹಣ ಕಳುಹಿಸುವುದು ಹೇಗೆ?