ರಾಮ ಮಂದಿರ ಟ್ರಸ್ಟ್‌ಗೆ ದೇಣಿಗೆ ನೀಡುವವರಿಗೆ ಸಿಗುತ್ತೆ ಬಹುದೊಡ್ಡ ವಿನಾಯಿತಿ!

By Suvarna NewsFirst Published May 9, 2020, 4:05 PM IST
Highlights

ಕೇಂದ್ರ ಹಣಕಾಸು ಸಚಿವಾಲಯ ಶುಕ್ರವಾರ ತಡರಾತ್ರಿ ಅಧಿಸೂಚನೆ| ರಾಮ ಮಂದಿರ ಟ್ರಸ್ಟ್‌ಗೆ ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80 ಜಿ ಅಡಿಯಲ್ಲಿ ದೇಣಿಗೆ ನೀಡಿದವರಿಗೆ ಕೇಂದ್ರೀಯ ನೇರ ತೆರಿಗೆ ಮಂಡಳಿ ಪರಿಹಾರ|  'ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್'  ಐತಿಹಾಸಿಕ ಪ್ರಾಮುಖ್ಯತೆ ಮತ್ತು ಸಾರ್ವಜನಿಕ ಪೂಜಾ ಸ್ಥಳ

ಲಕ್ನೋ(ಮೇ.09): ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಸ್ಥಾಪಿಸಲಾಗಿರುವ 'ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್'ಗೆ ದೇಣಿಗೆ ನೀಡುವವರಿಗೆ ಆದಾಯ ತೆರಿಗೆ ವಿನಾಯಿತಿ ನೀಡಲು ಕೇಂದ್ರ ಹಣಕಾಸು ಇಲಾಖೆ ನಿರ್ಧರಿಸಿದೆ. 

ಕೇಂದ್ರ ಹಣಕಾಸು ಸಚಿವಾಲಯ ಈ ಸಂಬಂಧ ಶುಕ್ರವಾರ ತಡರಾತ್ರಿ ಅಧಿಸೂಚನೆ ಹೊರಡಿಸಿದ್ದು, ರಾಮ ಮಂದಿರ ಟ್ರಸ್ಟ್‌ಗೆ ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80 ಜಿ ಅಡಿಯಲ್ಲಿ ದೇಣಿಗೆ ನೀಡುವವರಿಗೆ ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ವಿನಾಯಿತಿ ಇದೆ ಎಂದಿದೆ.

ರಾಮ ಮಂದಿರ ನಿರ್ಮಾಣಕ್ಕೆ ಉದ್ಧವ್‌ ಠಾಕ್ರೆ 1 ಕೋಟಿ ರು.!

ಅಲ್ದೇ ಕೇಂದ್ರ ಹಣಕಾಸು ಸಚಿವಾಲ 'ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್'ನ್ನು ಐತಿಹಾಸಿಕ ಪ್ರಾಮುಖ್ಯವುಳ್ಳ ಹಾಗೂ ಸಾರ್ವಜನಿಕ ಪೂಜಾ ಸ್ಥಳವೆಂದು ಹೆಸರಿಸಿದೆ. ಹೀಗಗಿ ಈ ಟ್ರಸ್ಟ್‌ಗೆ ದೇಣಿಗೆ ನೀಡುವವರು 2020-21ನೇ ಸಾಲಿನಿಂದ ತೆರಿಗೆ ವಿನಾಯಿತಿ ಪಡೆಯಲಿದ್ದಾರೆ.

ಏನಿದು ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80 ಜಿ?

ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80 ಜಿ ಅಡಿಯಲ್ಲಿ ಸರ್ಕಾರದ ಪರಿಹಾರ ನಿಧಿಗಳು, ದೇಣಿಗೆ ಸೇರಿದಂತೆ ಯಾವುದೇ ಸಾಮಾಜಿಕ, ರಾಜಕೀಯ ಮತ್ತು ಸಾರ್ವಜನಿಕ ಕಲ್ಯಾಣ ಸಂಸ್ಥೆಗಳು ತೆರಿಗೆ ವಿನಾಯಿತಿ ಪಡೆಯಲು ಅರ್ಹವಾಗುತ್ತವೆ. ಆದರೆ ತೆರಿಗೆಯಲ್ಲಿನ ಈ ವಿನಾಯಿತಿ ಎಲ್ಲಾ ದೇಣಿಗೆಗೆ ಒಂದೇ ಆಗಿರುವುದಿಲ್ಲ ಆದರೆ ಕೆಲ ನಿಯಮಗಳು ಮತ್ತು ಷರತ್ತುಗಳ ಪ್ರಕಾರ ವಿನಾಯಿತಿ ಸಿಗಲಿದೆ.
 

click me!