ಪ್ರತಿ ತಿಂಗಳು ಪ್ರಾರಂಭವಾಗುವ ಮುನ್ನ ಆ ತಿಂಗಳಿಗೆ ಸಂಬಂಧಿಸಿ ಆರ್ ಬಿಐ ರಜಾಪಟ್ಟಿ ಬಿಡುಗಡೆ ಮಾಡುತ್ತದೆ. ಅದರಂತೆ ಮೇ ತಿಂಗಳಿಗೆ ಸಂಬಂಧಿಸಿದ ರಜಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಹಾಗಾದ್ರೆ ಮೇ ತಿಂಗಳಲ್ಲಿ ಒಟ್ಟು ಎಷ್ಟು ದಿನ ಬ್ಯಾಂಕ್ ಕಾರ್ಯನಿರ್ವಹಿಸೋದಿಲ್ಲ? ಇಲ್ಲಿದೆ ಮಾಹಿತಿ.
ನವದೆಹಲಿ (ಏ.25): ಏಪ್ರಿಲ್ ತಿಂಗಳು ಮುಕ್ತಾಯಗೊಳ್ಳಲು ಬೆರಳೆಣಿಕೆ ದಿನಗಳಷ್ಟೇ ಬಾಕಿ ಉಳಿದಿವೆ. ಹೀಗಿರುವಾಗ ಮುಂಬರುವ ಮೇ ತಿಂಗಳಿಗೆ ಸಂಬಂಧಿಸಿ ಈಗಲೇ ಕೆಲವು ಸಿದ್ಧತೆ ನಡೆಸೋದು ಅಗತ್ಯ. ಅದರಲ್ಲೂ ಬ್ಯಾಂಕಿಗೆ ಭೇಟಿ ನೀಡುವ ಕೆಲಸಗಳಿದ್ರೆ ಯಾವಾಗ ಎಂಬ ಬಗ್ಗೆ ಮೊದಲೇ ತೀರ್ಮಾನ ಕೈಗೊಳ್ಳುವುದು ಉತ್ತಮ. ಇದಕ್ಕೆ ನೀವು ಮೇ ತಿಂಗಳ ಬ್ಯಾಂಕ್ ರಜಾಪಟ್ಟಿಯನ್ನು ಗಮನಿಸೋದು ಅಗತ್ಯ. ಪ್ರತಿ ಹೊಸ ತಿಂಗಳು ಪ್ರಾರಂಭವಾಗುವ ಮುನ್ನ ಆರ್ ಬಿಐ ಆ ತಿಂಗಳಿಗೆ ಸಂಬಂಧಿಸಿದ ರಜಾಪಟ್ಟಿಯನ್ನು ಬಿಡುಗಡೆ ಮಾಡುತ್ತದೆ. ಅದರಂತೆ ಮೇ ತಿಂಗಳ ರಜಾಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ. ಮೇನಲ್ಲಿ ವಾರದ ರಜೆಗಳು ಸೇರಿದಂತೆ ಬ್ಯಾಂಕ್ ಗಳು ಒಟ್ಟು 12 ದಿನಗಳ ಕಾಲ ಕಾರ್ಯನಿರ್ವಹಿಸೋದಿಲ್ಲ. ಇನ್ನು ಆರ್ ಬಿಐ ರಜಾಪಟ್ಟಿಯಲ್ಲಿರುವ ಎಲ್ಲ ರಜೆಗಳು ಎಲ್ಲ ರಾಜ್ಯಗಳಿಗೂ ಅನ್ವಯಿಸೋದಿಲ್ಲ. ಆಯಾ ಪ್ರಾದೇಶಿಕ ಆಚರಣೆ ಹಾಗೂ ಹಬ್ಬಗಳಿಗೆ ಅನುಗುಣವಾಗಿ ರಜೆಗಳನ್ನು ನೀಡಲಾಗುತ್ತದೆ. ಆದರೆ, ಸಾರ್ವಜನಿಕ ಹಾಗೂ ಗೆಜೆಟೆಡ್ ರಜೆಗಳು ಮಾತ್ರ ದೇಶವ್ಯಾಪ್ತಿ ಎಲ್ಲ ಬ್ಯಾಂಕುಗಳಿಗೂ ಅನ್ವಯಿಸುತ್ತವೆ. ಇನ್ನು ಎಲ್ಲ ಭಾನುವಾರ ಹಾಗೂ ಎರಡನೇ ಮತ್ತು ನಾಲ್ಕನೇ ಶನಿವಾರ ದೇಶಾದ್ಯಂತ ಎಲ್ಲ ಬ್ಯಾಂಕುಗಳಿಗೆ ರಜೆಯಿರುತ್ತದೆ.
ಬ್ಯಾಂಕ್ (Bank) ರಜೆಗಳನ್ನು (Holidays) ಆರ್ ಬಿಐ (RBI) ಮೂರು ವರ್ಗಗಳನ್ನಾಗಿ ವಿಂಗಡಿಸಿದೆ. 1.ನೆಗೋಶಿಯಬಲ್ ಇನ್ಸ್ಟ್ರುಮೆಂಟ್ಸ್ ಆಕ್ಟ್ ಅಡಿಯಲ್ಲಿ ರಜಾದಿನ, 2. ನೆಗೋಶಿಯಬಲ್ ಇನ್ಸ್ಟ್ರುಮೆಂಟ್ಸ್ ಆಕ್ಟ್ ಮತ್ತು ರಿಯಲ್-ಟೈಮ್ ಗ್ರಾಸ್ ಸೆಟಲ್ಮೆಂಟ್ ರಜೆಗಳು ಹಾಗೂ 3.ಅಕೌಂಟ್ಸ್ ಕ್ಲೋಸಿಂಗ್ ರಜೆಗಳು. ಆರ್ ಬಿಐ (RBI) ರಜಾಪಟ್ಟಿಯಲ್ಲಿರೋ ರಜೆಗಳು ಸಾರ್ವಜನಿಕ ವಲಯ (Public sector), ಖಾಸಗಿ ವಲಯ (Private sector), ವಿದೇಶಿ ಬ್ಯಾಂಕುಗಳು (Foreign banks), ಕೋಆಪರೇಟಿವ್ ಬ್ಯಾಂಕುಗಳು (Co-operative banks) ಹಾಗೂ ಪ್ರಾದೇಶಿಕ ಬ್ಯಾಂಕುಗಳಿಗೆ (Regional banks) ಅನ್ವಯಿಸಲಿವೆ.
ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ
ಬ್ಯಾಂಕುಗಳಿಗೆ (Banks) ರಜೆಯಿರುವ ದಿನ ಆನ್ ಲೈನ್ ವಹಿವಾಟಿಗೆ (Online transaction) ಹಾಗೂ ಎಟಿಎಂ ವ್ಯವಹಾರಗಳಿಗೆ (ATM transaction) ಯಾವುದೇ ತೊಂದರೆಯಾಗೋದಿಲ್ಲ. ಆದರೆ, ಬ್ಯಾಂಕಿಗೆ (Bank) ಹೋಗಿಯೇ ಮಾಡಬೇಕಾದ ಯಾವುದಾದ್ರೂ ಕೆಲಸವಿದ್ರೆ ಮಾತ್ರ ಮುಂದೂಡುವುದು ಉತ್ತಮ. ಕೆಲವೊಮ್ಮೆ ಮನೆ (Home) ಅಥವಾ ನಿವೇಶನ , ಕಾರ್ (Car) ಖರೀದಿಗೆ ಏನಾದ್ರೂ ಪ್ಲ್ಯಾನ್ ಮಾಡಿದ್ರೆ ಸಾಲ ಪ್ರಕ್ರಿಯೆಗೆ ಸಂಬಂಧಿಸಿ ಬ್ಯಾಂಕಿಗೆ ಭೇಟಿ ನೀಡಬೇಕಾದ ಅನಿವಾರ್ಯತೆ ಇರುತ್ತದೆ. ಹಾಗೆಯೇ ಬ್ಯಾಂಕ್ ಗಳಲ್ಲಿ ಎಫ್ ಡಿ (FD) ಮಾಡಿಸಲು ಅಥವಾ ಇನ್ಯಾವುದೋ ಹೂಡಿಕೆ (Investment) ಯೋಜನೆಗಳಲ್ಲಿ ಹಣ ತೊಡಗಿಸುವ ಯೋಚನೆ ಮಾಡಿದ್ರು ಕೂಡ ಬ್ಯಾಂಕಿಗೆ ಹೋಗಬೇಕಾದ ಸಂದರ್ಭ ಎದುರಾಗುತ್ತದೆ. ಹೀಗಾಗಿ ಯಾವೆಲ್ಲ ದಿನ ರಜೆಯಿರುತ್ತದೆ ಎಂಬುದನ್ನು ಮೊದಲೇ ಗಮನಿಸಿ ಆ ಬಳಿಕ ಭೇಟಿ ನೀಡುವ ಪ್ಲ್ಯಾನ್ (Plan) ಮಾಡೋದು ಉತ್ತಮ.
SBI ಡೆಬಿಟ್ ಕಾರ್ಡ್ ಕಳೆದು ಹೋಗಿದೆಯಾ? ನೆಟ್ ಬ್ಯಾಂಕಿಂಗ್ ಬಳಸಿ ಬ್ಲಾಕ್ ಮಾಡೋದು ಹೇಗೆ?
ಮೇ ತಿಂಗಳ ಬ್ಯಾಂಕ್ ರಜಾಪಟ್ಟಿ ಹೀಗಿದೆ:
ಮೇ 1: ಕಾರ್ಮಿಕರ ದಿನ, ಮಹಾರಾಷ್ಟ್ರ ದಿನ
ಮೇ 5: ಬುದ್ಧ ಪೂರ್ಣಿಮಾ (ದೆಹಲಿ, ಹರಿಯಾಣ, ಮಹಾರಾಷ್ಟ್ರ, ಪಂಜಾಬ್, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಉತ್ತರಾಖಂಡ, ಅಸ್ಸಾಂ, ಬಿಹಾರ, ಗುಜರಾತ್, ಅರುಣಾಚಲ ಪ್ರದೇಶ, ಛತ್ತೀಸ್ ಗಢ)
ಮೇ 7: ಭಾನುವಾರ
ಮೇ 9: ರವೀಂದ್ರನಾಥ್ ಟ್ಯಾಗೋರ್ ಜನ್ಮದಿನ
ಮೇ 13: ಎರಡನೇ ಶನಿವಾರ
ಮೇ 14: ಭಾನುವಾರ
ಮೇ 16: ಸಿಕ್ಕಿಂ ರಾಜ್ಯ ದಿನ
ಮೇ 21: ಭಾನುವಾರ
ಮೇ 22: ಮಹಾರಾಣಾ ಪ್ರತಾಪ್ ಜಯಂತಿ (ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಪಂಜಾಬ್, ರಾಜಸ್ಥಾನ)
ಮೇ 24: ಕಝಿ ನಝರುಲ್ ಇಸ್ಲಾಂ ಜಯಂತಿ (ತ್ರಿಪುರ)
ಮೇ 27: ನಾಲ್ಕನೇ ಶನಿವಾರ
ಮೇ 28: ಭಾನುವಾರ