
ನವದೆಹಲಿ(ಫೆ.10): ಎರಡು ಸಾರ್ವಜನಿಕ ವಲಯದ ಬ್ಯಾಂಕುಗಳ ಖಾಸಗೀಕರಣವನ್ನು ವಿರೋಧಿಸಿ, 9 ಕಾರ್ಮಿಕ ಸಂಘಟನೆಗಳನ್ನು ಒಳಗೊಂಡಿರುವ ಬ್ಯಾಂಕ್ ಕಾರ್ಮಿಕ ಸಂಘಟನೆಗಳ ಸಂಯುಕ್ತ ಒಕ್ಕೂಟ (ಯುಎಫ್‌ಬಿಯು) ಮಾಚ್‌ರ್ 15 ಮತ್ತು 16ರಂದು ಎರಡು ದಿನಗಳ ಕಾಲ ಮುಷ್ಕರಕ್ಕೆ ಕರೆ ನೀಡಿದೆ.
ಕಳೆದ ವಾರ ಬಜೆಟ್ ಮಂಡಿಸಿದ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಬಂಡವಾಳ ಹಿಂತೆಗೆತದ ಭಾಗವಾಗಿ 2 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣ ಮಾಡಲಾಗುವುದೆಂದು ಘೋಷಿಸಿದ್ದರು.
ಸರ್ಕಾರದ ಈ ನಿರ್ಣಯವನ್ನು ವಿರೋಧಿಸಿ ಒಕ್ಕೂಟವು ಪ್ರತಿಭಟನೆಗೆ ಕರೆ ನೀಡಿದೆ ಎಂದು ಅಖಿಲ ಭಾರತ ಬ್ಯಾಂಕ್ ಕಾರ್ಮಿಕರ ಸಂಘ (ಎಐಬಿಇಎ)ದ ಕಾರ‍್ಯದರ್ಶಿ ಸಿ.ಎಚ್.ವೆಂಕಟಾಚಲಂ ಮಂಗಳವಾರ ತಿಳಿಸಿದ್ದಾರೆ.
ನಿರುದ್ಯೋಗಿಗಳಿಗೆ ಇಲ್ಲಿದೆ ಸುವರ್ಣಾವಕಾಶ: ಫೆ. 8ರಂದು ಗಂಗಾವತಿಯಲ್ಲಿ ಉದ್ಯೋಗ ಮೇಳ
ಕಳೆದ ನಾಲ್ಕು ವರ್ಷಗಳಲ್ಲಿ ಈಗಾಗಲೇ ಕೇಂದ್ರ ಸರ್ಕಾರ 14 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ವಿಲೀನಗೊಳಿಸಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.