Karnataka Budget 2022 ಬೊಮ್ಮಾಯಿ ಘೋಷಿಸಿದ ಹೊಸ ಯೋಜನೆಗಳು ಇಂತಿವೆ

By Suvarna News  |  First Published Mar 4, 2022, 4:02 PM IST

* ಕರ್ನಾಟಕ ಬಜೆಟ್ 2022-23
* ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರ
* ಬೊಮ್ಮಾಯಿ ಘೋಷಿಸಿದ ಹೊಸ ಯೋಜನೆಗಳು


ಬೆಂಗಳೂರು, (ಮಾ.04): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು(Basavaraj Bommai) ತಮ್ಮ ಚೊಚ್ಚಲ ಬಜೆಟ್ ಅನ್ನು ಇಂದು(ಮಾ.04) ಮಂಡಿಸಿದ್ದಾರೆ. 2,653,720 165 ಕೋಟಿ ರೂ. ಬಜೆಟ್​ ಮಂಡನೆ ಮಾಡಿದ್ದಾರೆ.

 ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರವನ್ನು ಹೊಂದಿದ್ದು, ಹಲವಾರು ಹೊಸ ಯೋಜನೆಗಳನ್ನು (New Schemes)  ಬಸವರಾಜ ಬೊಮ್ಮಾಯಿಯವರು ತಮ್ಮ ಮೊದಲ ಬಜೆಟ್‌ನಲ್ಲಿ (Karnataka Budget 2022) ಘೋಷಣೆ ಮಾಡಿದ್ದಾರೆ. ಅವು ಈ ಕೆಳಗಿನಂತಿವೆ.

Tap to resize

Latest Videos

undefined

Karnataka Budget 2022 Live: ತೆರಿಗೆ ಬರೆ ಇಲ್ಲ, ವಾಣಿಜ್ಯ ತೆರಿಗೆ ಹೆಚ್ಚಳ ಪ್ರಸ್ತಾಪವೂ ಇಲ್ಲ!

ಬೊಮ್ಮಾಯಿ ಘೋಷಣೆ ಮಾಡಿದ ಹೊಸ ಯೋಜನೆಗಳು
* ನೇಕಾರರ ಮಕ್ಕಳಿಗೆ ಶಿಕ್ಷಣಕ್ಕೆ ವಿದ್ಯಾರ್ಥಿ ವೇತನ ಯೋಜನೆ 
* ಯೆಲ್ಲೋ ಬೋರ್ಡ್ ಚಾಲಕರ ಮಕ್ಕಳ ಉನ್ನತ ಶಿಕ್ಷಣಕ್ಕೆ ವಿದ್ಯಾನಿಧಿ ಯೋಜನೆ, ಆರೋಗ್ಯ ಸೌಲಭ್ಯಕ್ಕೆ ವಿಶೇಷ ಯೋಜನೆ 
* ಗೋಶಾಲೆಗಳಲ್ಲಿನ ಗೋವುಗಳನ್ನು ಸಾರ್ವಜನಿಕರು, ಖಾಸಗಿ ಸಂಸ್ಥೆ ದತ್ತು ಪಡೆಯುವುದನ್ನು ಪ್ರೋತ್ಸಾಹಿಸಲು ಪುಣ್ಯಕೋಟಿ ದತ್ತು ಯೋಜನೆ 
* ಮೀನುಗಾರರಿಗಾಗಿ ಮತ್ಸ್ಯ ಸಿರಿ ಯೋಜನೆ 
* ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮುಖ್ಯಮಂತ್ರಿ ವಿದ್ಯಾರ್ಥಿ ಮಾರ್ಗದರ್ಶಿನಿ ಎಂಬ ಹೊಸ ಯೋಜನೆ 
* ಯಾತ್ರಾಸ್ಥಳ ಶ್ರೀಶೈಲದಲ್ಲಿ 85 ಕೋಟಿ ರೂ ವೆಚ್ಚದಲ್ಲಿ ಯಾತ್ರಿ ನಿವಾಸ ಸಂಕೀರ್ಣ ನಿರ್ಮಾಣ
 * ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆಹಾರ ಪಾರ್ಕ್ ಸ್ಥಾಪನೆ 
* ರೈತರಿಗೆ ರಿಯಾಯಿತಿ ದರದಲ್ಲಿ 24 ಸಾವಿರ ಕೋಟಿ ರೂ. ಸಾಲ 
* ಬಳ್ಳಾರಿಯಲ್ಲಿ ನೂತನ ಕೃಷಿ ಕಾಲೇಜು ನಿರ್ಮಾಣ. 
* ಬೆಳಗಾವಿಯಲ್ಲಿ ನೂತನ ಕೃಷಿ ಕಾಲೇಜು ನಿರ್ಮಾಣ
 * ಹಾವೇರಿಯ ಹಿರೆಕೆರೋರಿನಲ್ಲಿ ಗೋವಿನ ಜೋಳ ಸಂಶೋಧನಾ ಸಂಸ್ಥೆ ಸ್ಥಾಪನೆ 
* ಹಾವೇರಿಯಲ್ಲಿ 1 ಲಕ್ಷ ಲೀಟರ್ ಸಾಮರ್ಥ್ಯದ ಮೆಗಾ ಡೈರಿ ಸ್ಥಾಪನೆ 
* ಕಟ್ಟಡ ಕಾರ್ಮಿಕರಿಗಾಗಿ 100 ಹೈಟೆಕ್ ಸಂಚಾರಿ ಕ್ಲಿನಿಕ್ ಆರಂಭ 
* ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗದಲ್ಲಿ ಶ್ರೀ ನಾರಾಯಣ ಗುರು ವಸತಿ ಶಾಲೆ ಆರಂಭ 
* ತುಂಗಭದ್ರಾ ಜಲಾಶಯ ಭರ್ತಿಯಾದ ಬಳಿಕ ಹೊರ ಹೋಗುವ ನೀರನ್ನು ಸಂಗ್ರಹ ಮಾಡಲು ನವಲಿ ಬಳಿ ಸಮತೋಲನಾ ಜಲಾಶಯ ನಿರ್ಮಾಣಕ್ಕೆ 

* ಅಸಾಂಕ್ರಾಮಿಕ ರೋಗಳ ಪತ್ತೆಗಾಗಿ ನಮ್ಮ ಕ್ಲಿನಿಕ್ ನಿರ್ಮಾಣ, ಬೆಂಗಳೂರು ನಗರದಲ್ಲಿ ಎಲ್ಲಾ ವಾರ್ಡ್‌ಗಳಲ್ಲಿ ಈ ಕ್ಲಿನಿಕ್ ನಿರ್ಮಾಣ 
* ರಾಮನಗರದ ಅರ್ಚಕರಹಳ್ಳಿಯಲ್ಲಿ 600 ಕೋಟಿ ರೂ. ವೆಚ್ಚದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಆರಂಭ 
* ರಾಷ್ಟ್ರೀಯ ಶಿಕ್ಷಣ ನೀತಿಯನ್ನು ದೇಶದಲ್ಲಿ ಮೊದಲ ಬಾರಿಗೆ ರಾಜ್ಯದಲ್ಲಿ ಆರಂಭ 
* ಮುಂದಿನ ಎರಡು ವರ್ಷದಲ್ಲಿ 25 ಲಕ್ಷ ಮನೆಗಳಿಗೆ ನಲ್ಲಿಗಳ ಮೂಲಕ ನೀರಿನ ಸಂಪರ್ಕ
 * ರಾಜ್ಯದಲ್ಲಿ ರೇಷ್ಮೆ ಬೆಳೆಗಾರರಿಗೆ ಅತ್ಯಾಧುನಿಕ ಮಾರುಕಟ್ಟೆ ಸೌಲಭ್ಯ 
* ರಾಜ್ಯ ಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ಆಯೋಜನೆ 
* ಯಾಣದಲ್ಲಿ ರೋಪ್‌ ವೇ ನಿರ್ಮಾಣಕ್ಕೆ ಕ್ರಮ
* ಮೈಸೂರು ವಿಮಾನ ನಿಲ್ದಾಣ ರನ್‌ ವೇ ವಿಸ್ತರಣೆ 
* ದೇಸಿ ಕ್ರೀಡೆ ನಿರ್ಮಾಣ ಉತ್ತೇಜನಕ್ಕೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕ್ರೀಡಾ ಅಂಕಣ ನಿರ್ಮಾಣ '
 * ರಾಯಚೂರಿನಲ್ಲಿ ಗ್ರೀನ್‌ ಗ್ರೀನ್‌ ಫೀಲ್ಡ್‌ ವಿಮಾನ ನಿಲ್ದಾಣ ನಿರ್ಮಾಣ 

click me!