
ಹಾಸನ: ಸ್ವಾತಂತ್ರ್ಯ ದಿನಾಚರಣೆಯಂದು ಬೆಂಗಳೂರಲ್ಲಿ ಬರೋಬ್ಬರಿ 2 ಕಿ.ಮೀ ಸರದಿ ನಿಂತು ದೇಶದಲ್ಲೇ ಹೆಸರುವಾಸಿಯಾಗಿರುವ ಎಚ್‌ಎಂಟಿ (ಹಿಂದೂಸ್ತಾನ್ ಮಷಿನ್ ಟೂಲ್ಸ್) ಕೈಗಡಿಯಾರಗಳನ್ನು ಜನರು ಖರೀದಿಸಿದ್ದರಿಂದ ಒಂದೇ ದಿನಕ್ಕೆ ₹35 ಲಕ್ಷ ಸಂಗ್ರಹವಾಗಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ತಿಳಿಸಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಕೇಂದ್ರ ಸಚಿವನಾದ ಮೇಲೆ ಸಂಸ್ಥೆಗೆ ಒಂದು ಕಾಯಕಲ್ಪ ನೀಡಿದ್ದೇನೆ. ಎಚ್‌ಎಂಟಿಯನ್ನು ಬೆಳೆಸಿ ಉಳಿಸಲು ಎಲ್ಲರ ಸಹಕಾರವನ್ನ ಬಯಸುತ್ತೇನೆ. ಆ.15ರಂದು ಕಿಲೋ ಮಿಟರ್‌ಗಟ್ಟಲೇ ಸರತಿ ಸಾಲಲ್ಲಿ ನಿಂತು ಜನರು ವಾಚ್ ಖರೀದಿಸಿದ್ದಕ್ಕೆ ಆಭಾರಿಯಾಗಿದ್ದೇನೆ ಎಂದರು.
80ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಎಚ್‌ಎಂಟಿಯು ವಿಶೇಷ ಆವೃತ್ತಿಯ ಕೆಲ ಅಪರೂಪದ ಕೈಗಡಿಯಾರಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿತ್ತು. ಅಂದು ವಾಚುಗಳ ಖರೀದಿಗೆ ಮುಗಿಬಿದ್ದ ಗ್ರಾಹಕರನ್ನು ನೋಡಿ ನನಗೇ ಆಶ್ಚರ್ಯವಾಯಿತು ಎಂದರು.
ಸ್ವಾತಂತ್ರ್ಯ ದಿನಾಚರಣೆಯಂದು ಎಚ್‌ಎಂಟಿ ವಾಚ್ ದಾಖಲೆ ಪ್ರಮಾಣದಲ್ಲಿ ಮಾರಾಟವಾಗಿದ್ದು, ಅಂದು ಜನರು ಕ್ಯೂನಲ್ಲಿ ನಿಂತು ವಾಚ್ ಖರೀದಿಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಇದರಿಂದಾಗಿ ಎಚ್.ಡಿ.ಕುಮಾರಸ್ವಾಮಿ ಹರ್ಷ ವ್ಯಕ್ತಪಡಿಸಿದ್ದಾರೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.