ಬೆಂಗಳೂರು ಮಿಷನ್ 2022: ಬಜೆಟ್‌ನಲ್ಲಿ ರಾಜ್ಯ ರಾಜಧಾನಿಗೆ ಸಿಕ್ಕಿದ್ದಿಷ್ಟು...!

By Suvarna News  |  First Published Mar 8, 2021, 2:06 PM IST

ವಿಶ್ವದಲ್ಲೇ ಬೆಂಗಳೂರು ಅತಿ ವೇಗವಾಗಿ ಬೆಳೆಯುತ್ತಿದೆ. ಅದಕ್ಕೆ ತಕ್ಕಂತೆ ಮೂಲ ಸೌಕರ್ಯ ಒದಗಿಸುವುದು ನಮ್ಮ ಕರ್ತವ್ಯವಾಗಿದೆ ಎಂದಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಈ ಬಾರಿಯ ಬಜೆಟ್‌ನಲ್ಲಿ ಬೆಂಗಳೂರು ನಗರ ಅಭಿವೃದ್ಧಿಗೆ ಒಟ್ಟು 7795 ಕೋಟಿ ರೂ ಮೀಸಲಿಟ್ಟಿದ್ದಾರೆ. ಹಾಗಾದ್ರೆ ಬೆಂಗಳೂರಿಗೆ ಏನೆಲ್ಲಾ ಸಿಕ್ಕಿದೆ ಎನ್ನುವ ಸಂಕ್ಷಪ್ತ ಮಾಹಿತಿ ಈ ಕೆಳಗಿನಂತಿದೆ.


ಬೆಂಗಳೂರು, (ಮಾ.08): ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು (ಸೋಮವಾರ) 2021-22ರ ಬಜೆಟ್ ಮಂಡನೆ ಮಾಡಿದ್ದು, ಸಿಲಿಕಾನ್ ಸಿಟಿ, ರಾಜ್ಯದ ರಾಜಧಾನಿ ಬೆಂಗಳೂರಿಗೆ ಅನುದಾದ ಜೊತೆ ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

ಕರ್ನಾಟಕ ಬಜೆಟ್ 2021: ಕ್ಷಣ-ಕ್ಷಣದ ಮಾಹಿತಿ

Tap to resize

Latest Videos

ವಿಶ್ವದಲ್ಲೇ ಬೆಂಗಳೂರು ಅತಿ ವೇಗವಾಗಿ ಬೆಳೆಯುತ್ತಿದೆ. ಅದಕ್ಕೆ ತಕ್ಕಂತೆ ಮೂಲ ಸೌಕರ್ಯ ಒದಗಿಸುವುದು ನಮ್ಮ ಕರ್ತವ್ಯವಾಗಿದೆ ಎಂದಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಬೆಂಗಳೂರು ನಗರ ಅಭಿವೃದ್ಧಿಗೆ ಒಟ್ಟು 7795 ಕೋಟಿ ರೂ ಮೀಸಲಿಟ್ಟಿದ್ದಾರೆ.

 ಅಲ್ಲದೇ ಈ ಬಾರಿಯ ಆಯವ್ಯಯದಲ್ಲಿ ಬೆಂಗಳೂರು ಮಿಷನ್ 2022- ಬೆಂಗಳೂರಿಗೆ ನವಚೈತನ್ಯ ಕಾರ್ಯಕ್ರಮ ರೂಪಿಸಲಾಗುತ್ತಿದೆ ಎಂದು ಘೋಷಿಸಿದ್ದಾರೆ.

ವಿವಿಧ ಜಾತಿ ಸಮುದಾಯಗಳಿಗೆ ಬಜೆಟ್ಟಿನಲ್ಲಿ ಇಷ್ಟಿಷ್ಟು ಕೋಟಿ ಅನುದಾನ

ಬೆಂಗಳೂರಿಗೆ ಸಿಕ್ಕಿರುವ ಕೊಡುಗೆಗಳು

* ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿರುವ ಗ್ಯಾಸ್ಟ್ರೋ ಎಂಟ್ರಾಲಜಿ ವಿಜ್ಞಾನ ಹಾಗೂ ಆರ್ಗನ್ ಟ್ರಾನ್ಸ್‍ಪ್ಲಾಂಟ್ ಸಂಸ್ಥೆಯು ದೇಶದ ಮೊಟ್ಟ ಮೊದಲ ಅಂಗಾಂಗ ಕಸಿ ಸಂಸ್ಥೆ
* ಬೆಂಗಳೂರು ನಗರ ಮತ್ತು ಗ್ರಾಮಾಂತರ, ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ 234 ಕೆರೆಗಳಿಗೆ ಬೆಂಗಳೂರು ನಗರದ ವೃಷಭಾವತಿ ಕಣಿವೆಯಿಂದ ದ್ವಿತೀಯ ಹಂತಕ್ಕೆ ಸಂಸ್ಕರಿಸಿದ 308 ಎಂಎಲ್‌ಡಿ ನೀರು ತುಂಬಿಸುವ 500 ಕೋಟಿ ರೂ. ಯೋಜನೆ ಅನುಷ್ಠಾನ. 
* ಬೆಂಗಳೂರಿನಲ್ಲಿ ನಿರ್ಭಯಾ ಯೋಜನೆಯಲ್ಲಿ ನಗರಾದ್ಯಂತ 7,500 ಸಿಸಿ ಕ್ಯಾಮರಾಗಳ ಅಳವಡಿಕೆ. 

* ಬಿಎಂಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ರಿಯಾಯಿತಿ ದರದ ಬಸ್ ಪಾಸ್. 'ವನಿತಾ ಸಂಗಾತಿ' ಬಸ್ ಪಾಸ್ ಹೆಸರಿನಲ್ಲಿ ಈ ಯೋಜನೆ ಜಾರಿ. 
* ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಕರ್ನಾಟಕ ಸಂಸ್ಕೃತಿ ಕೇಂದ್ರ ಸ್ಥಾಪನೆ. 
* ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆಗೊಳಿಸಲು  67 ಕಿ. ಮೀ. ಫೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ.
ಬೈಯಪ್ಪನಹಳ್ಳಿಯಲ್ಲಿರುವ ಎನ್‍ಜಿಇಎಫ್‍ಗೆ ಸೇರಿದ 105 ಎಕರೆ ಜಮೀನಿನಲ್ಲಿ ಜನರಿಗೆ ಕಾನನದ ಅನುಭವ ನೀಡುವಂತಹ ವೃಕ್ಷೋದ್ಯಾನ ನಿರ್ಮಾಣ.
* ವಾಹನ ದಟ್ಟಣೆಯನ್ನು ಕಡಿಮೆ ಮಾಡಲು 15,767 ಕೋಟಿ ರೂ. ವೆಚ್ಚದಲ್ಲಿ ಉಪ ನಗರ ರೈಲು ಯೋಜನೆ.
* ಬೆಂಗಳೂರಿನ ಓಕಳೀಪುರಂನಲ್ಲಿ ರೇಷ್ಮೆ ಇಲಾಖೆಗೆ ಸೇರಿದ ಕಟ್ಟಡದಲ್ಲಿ ರೇಷ್ಮೆ ಇಲಾಖೆಯ ಎಲ್ಲಾ ಕಚೇರಿ ಒಂದೇ ಕಡೆ ಇರುವಂತೆ ರೇಷ್ಮೆ ಭವನ ಸ್ಥಾಪನೆ. 
*ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡನೆ ಟರ್ಮಿನಲ್ ಕಟ್ಟಡ ನಿರ್ಮಾಣ ಕಾಮಗಾರಿಯನ್ನು 4,751 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ.

* ಬೆಂಗಳೂರು ಉತ್ತರ ಭಾಗದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ. 45 ಲಕ್ಷ ರೂ. ತನಕ ಫ್ಲ್ಯಾಟ್‌ಗಳನ್ನು ಖರೀದಿ ಮಾಡುವಾಗ ಮುದ್ರಾಂಕ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ. 
* ಬೆಂಗಳೂರು ನೀರು ಸರಬರಾಜು ಒಳಚರಂಡಿ ಮಂಡಳಿ ವತಿಯಿಂದ ಬಿಬಿಎಂಪಿ ಸಹಯೋಗದೊಂದಿಗೆ 450 ಕೋಟಿ ವೆಚ್ಚದಲ್ಲಿ ಕೆಸಿ ವ್ಯಾಲಿ ಆವರಣದ 248 ಎಂಎಲ್‌ಡಿ ಸಾಮರ್ಥ್ಯದ ಎಸ್‌ಟಿಪಿ ಪುನರುಜ್ಜೀವನ ಮತ್ತು ಉನ್ನತೀಕರಣಕ್ಕೆ ಕ್ರಮ.
* ಯಶವಂತಪುರ-ಚನ್ನಸಂದ್ರ ಮತ್ತು ಬೈಯಪ್ಪನಹಳ್ಳಿ- ಹೊಸೂರು ವಿಭಾಗಗಳ ನಡುವೆ ದ್ವಿಪಥ ರೈಲು ಯೋಜನೆಯನ್ನು ರೈಲ್ವೆ ಮಂತ್ರಾಲಯದ ಸಹಯೋಗದಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಇದಕ್ಕಾಗಿ 813ಕೋಟಿ ರೂ. ಮೀಸಲು
* ಕೋರಮಂಗಲ ಕಣಿವೆ ನೀರುಗಾಲುವೆಯನ್ನು 169 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದ್ದು, ಆ ನೀರುಗಾಲುವೆಯನ್ನು ಶುದ್ಧ ನೀರುಗಾಲುವೆಯನ್ನಾಗಿ ಪರಿವರ್ತಿಸಿ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲಾಗುವುದು.

* ತ್ಯಾಜ್ಯ ನಿರ್ವಹಣೆಯಲ್ಲಿ ಬೆಂಗಳೂರು ಅನ್ನು ಮಾದರಿ ನಗರವನ್ನಾಗಿ ಅಭಿವೃದ್ಧಿ ಪಡಿಸಲು ಘನ ತ್ಯಾಜ್ಯ ಸಂಗ್ರಹಣೆ ಸಾಗಾಣಿಕೆ ಮತ್ತು ಸಂಸ್ಕರಣೆಯನ್ನು ನಿರ್ವಹಿಸಲು ಪ್ರತ್ಯೇಕ ಕಂಪೆನಿಗಳನ್ನು ಸ್ಥಾಪಿಸಲಾಗುವುದು.
*  ಆಗಸ್ಟ್ 2021ರೊಳಗೆ ಒಂದು ರಾಷ್ಟ್ರ ಒಂದು ಕಾರ್ಡ್ ವ್ಯವಸ್ಥೆ ಜಾರಿಗೆ ಕ್ರಮ. 
* ನಮ್ಮ ಮೆಟ್ರೋ ಹಾಗೂ ಬಿಎಂಟಿಸಿ ಬೆಂಗಳೂರು ಮಹಾನಗರ ಪಾಲಿಕೆ ಸಾರಿಗೆ ಸಂಸ್ಥೆಗಳಲ್ಲಿ ಈ ಕಾರ್ಡ್ ಬಳಕೆಗೆ ಅವಕಾಶ. 
* ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗಳಲ್ಲಿ ಆಟೊಮೆಟಿಕ್ ಫೇರ್ ಕಲೆಕ್ಷನ್ ಯೋಜನೆ ಅನುಷ್ಠಾನ. 
* ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ 20 ಕೋಟಿ ರೂ.ಗಳ ವೆಚ್ಚದಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆಯ 50 ಹಾಸಿಗೆ ಸಾಮರ್ಥ್ಯದ ಉಪಕೇಂದ್ರ. 

* ಬಿಬಿಎಂಪಿಯ 57 ವಾರ್ಡ್‌ಗಳಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಜನಾರೋಗ್ಯ ಕೇಂದ್ರಗಳ ಸ್ಥಾಪನೆ. 
* 33 ಕೋಟಿ ರೂ. ವೆಚ್ಚದಲ್ಲಿ ಬಿಬಿಎಂಪಿ ಶಾಲೆಗಳ ನವೀಕರಣ ಹಾಗೂ ಪುನರ್ ನಿರ್ಮಾಣ
* ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ವಾರಾಂತ್ಯದಲ್ಲಿ ಸಾಹಿತ್ಯ , ಸಾಂಸ್ಕಂತಿಕ, ಚಿತ್ರಸಂತೆ ಮತ್ತಿತರ ಜಾನಪದ ಕಾರ್ಯಕ್ರಮಗಳನ್ನು ಆಯೋಜಿಸಲು 2 ಕೋಟಿ ರೂ. ಮೀಸಲು.

click me!