LPG Price Hike: ಬೆಲೆ ಏರಿಕೆ ಬಿಸಿ, ಗ್ಯಾಸ್‌ ಸಿಲಿಂಡರ್‌ ಬೆಲೆ ಮತ್ತೆ 103.50ರೂ. ಹೆಚ್ಚಳ!

By Suvarna News  |  First Published Dec 1, 2021, 9:20 AM IST

* ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್ ದರ ಮತ್ತೆ ಏರಿಕೆ

* ಬೆಲೆ ಏರಿಕೆ ಹೊಡೆತಕ್ಕೆ ಗ್ರಾಹಕರು ಕಂಗಾಲು

* ಬೆಲೆ ಏರಿಕೆ ಮಧ್ಯೆ ಒಂದು ಸಮಾಧಾನಕರ ಸುದ್ದಿ


ನವದೆಹಲಿ(ಡಿ.01): ಇಂದು ಡಿಸೆಂಬರ್ ತಿಂಗಳ ಮೊದಲ ದಿನವಾಗಿದ್ದು, ತಿಂಗಳ ಮೊದಲ ದಿನ ಜನಸಾಮಾನ್ಯರಿಗೆ ಹಣದುಬ್ಬರದ ದೊಡ್ಡ ಹೊಡೆತ ಬಿದ್ದಿದೆ. ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಡಿಸೆಂಬರ್ 1 ರಿಂದ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ (LPG Gas Cylinder) ಬೆಲೆಯನ್ನು ಹೆಚ್ಚಿಸಿವೆ. ದೇಶದ ಅತಿದೊಡ್ಡ ಸರ್ಕಾರಿ ಸ್ವಾಮ್ಯದ ತೈಲ ಕಂಪನಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ (Indian Oil Corporation) 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್‌ನ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 103.50 ರೂ.ವರೆಗೆ ಹೆಚ್ಚಿಸಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಇಂದಿನಿಂದ ಪ್ರತಿ ಸಿಲಿಂಡರ್ ಗೆ 100.50 ರೂ ಹೆಚ್ಚಳವಾಗಿದೆ. ಈ ಮೂಲಕ ಇಲ್ಲಿ ಈಗ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 2101 ರೂ.ಗೆ ಏರಿಕೆಯಾಗಿದೆ.

ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಾಗಿಲ್ಲ

Tap to resize

Latest Videos

undefined

ಆದರೆ, ತೈಲ ಕಂಪನಿಗಳು ಸಾಮಾನ್ಯ ಜನರ ಗೃಹ ಬಳಕೆಗಾಗಿ 14.2 ಕೆಜಿ ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸದಿರುವುದುಬಹುದೊಡ್ಡ ನೆಮ್ಮದಿಯ ವಿಚಾರವಾಗಿದೆ. ಇದರ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ದೆಹಲಿಯಲ್ಲಿ 14.2 ಕೆಜಿ ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್ ಬೆಲೆ 899.50 ರೂ.ನಲ್ಲಿ ಬದಲಾಗದೆ ಉಳಿದಿದೆ.

ಸಬ್ಸಿಡಿ ಇಲ್ಲದ 14.2 ಕೆಜಿ ಸಿಲಿಂಡರ್ ಬೆಲೆ ಎಷ್ಟು ಗೊತ್ತಾ

ದೆಹಲಿಯಲ್ಲಿ ಈಗ ಸಬ್ಸಿಡಿರಹಿತ 14.2 ಕೆಜಿ ಸಿಲಿಂಡರ್ ಬೆಲೆ 899.50 ರೂ. ಕೋಲ್ಕತ್ತಾದಲ್ಲಿ ಎಲ್‌ಪಿಜಿ ಸಿಲಿಂಡರ್ ಬೆಲೆ 926 ರೂ., ಮುಂಬೈನಲ್ಲಿ 899.50 ರೂ., ಚೆನ್ನೈನಲ್ಲಿ ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ ಈಗ 915.50 ರೂ.

ಇಂದಿನಿಂದ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್‌ನ ಹೊಸ ಬೆಲೆ ಹೀಗಿದೆ

ದೆಹಲಿಯಲ್ಲಿ 19 ಕೆ.ಜಿ ವಾಣಿಜ್ಯ ಅನಿಲದ ಬೆಲೆ 100 ರೂ.ನಿಂದ 2100.50 ರೂ.ಗೆ ಏರಿಕೆಯಾಗಿದೆ. ಕೋಲ್ಕತ್ತಾದಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 101 ರೂಪಾಯಿ ಏರಿಕೆಯಾಗಿ 2,174.5 ರೂಪಾಯಿಗೆ ತಲುಪಿದೆ. ಮೊದಲು ಇದರ ಬೆಲೆ 2073.5 ರೂ.

ಮುಂಬೈನಲ್ಲಿ ವಾಣಿಜ್ಯ ಗ್ಯಾಸ್ ಬೆಲೆ 2,051 ರೂ.ಗೆ ಏರಿಕೆಯಾಗಿದೆ. ಮೊದಲು ಬೆಲೆ 1,950 ರೂ. ಇಲ್ಲಿ 101 ರೂಪಾಯಿ ಏರಿಕೆಯಾಗಿದೆ. ಅದೇ ಸಮಯದಲ್ಲಿ ಚೆನ್ನೈನಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 2,234.50 ರೂ.ಗೆ ಏರಿದೆ. ಈ ಹಿಂದೆ ಬೆಲೆ 2,133 ರೂಪಾಯಿ ಇತ್ತು.

LPG ಬೆಲೆಯನ್ನು ಈ ರೀತಿ ಪರಿಶೀಲಿಸಿ

ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಪರಿಶೀಲಿಸಲು, ನೀವು ಸರ್ಕಾರಿ ತೈಲ ಕಂಪನಿಯ ವೆಬ್‌ಸೈಟ್‌ಗೆ ಹೋಗಬೇಕು. ಇಲ್ಲಿ ಕಂಪನಿಗಳು ಪ್ರತಿ ತಿಂಗಳು ಹೊಸ ದರಗಳನ್ನು ನೀಡುತ್ತವೆ. https://iocl.com/Products/IndaneGas.aspx ಲಿಂಕ್‌ನಲ್ಲಿ ನಿಮ್ಮ ನಗರದ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ನೀವು ಪರಿಶೀಲಿಸಬಹುದು.

click me!