Rakesh Jhunjhunwala ವಿಧಿವಶ: ಬಿಗ್‌ ಬುಲ್‌ ನಿಧನಕ್ಕೆ ಪ್ರಧಾನಿ ಮೋದಿ ಸೇರಿ ಗಣ್ಯರ ಸಂತಾಪ

By BK Ashwin  |  First Published Aug 14, 2022, 9:19 AM IST

ಖ್ಯಾತ ಹೂಡಿಕೆದಾರ ರಾಕೇಶ್‌ ಜುಂಜುನ್‌ವಾಲಾ ಭಾನುವಾರ ಬೆಳಗ್ಗೆ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. 


ಬಿಗ್‌ ಬುಲ್‌ ಎಂದೇ ಪ್ರಖ್ಯಾತಿ ಹೊಂದಿದ ಹೂಡಿಕೆದಾರ ಹಾಗೂ ಇತ್ತೀಚೆಗಷ್ಟೇ ಆರಂಭವಾಗಿದ್ದ ಆಕಾಶ ಏರ್‌ಲೈನ್ಸ್‌ ಮುಖ್ಯಸ್ಥ ರಾಕೇಶ್‌ ಜುಂಜುನ್‌ವಾಲಾ ಭಾನುವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಬೆಳಗ್ಗೆ 6.45 ರ ವೇಳೆಗೆ ಅವರು ವಿಧಿವಶರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಅನಾರೋಗ್ಯದಿಂದ ರಾಕೇಶ್‌ ಜುಂಜುನ್‌ವಾಲಾ ನಿಧನರಾಗಿದ್ದಾರೆ ಎಂದು ತಿಳಿದುಬಂದಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆ ವೇಳೆಗೆ ಅವರು ತೀರಿಕೊಂಡಿದ್ದರು. 

ಭಾರತೀಯ ಬಿಲಿಯನೇರ್ ಉದ್ಯಮಿ, ಷೇರು ವ್ಯಾಪಾರಿ ಮತ್ತು ಹೂಡಿಕೆದಾರ ರಾಕೇಶ್ ಜುಂಜುನ್ವಾಲಾ ಅವರು 62ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಜುಲೈ 5, 1960 ರಂದು ಜನಿಸಿದ ಜುಂಜುನ್ವಾಲಾ ಮುಂಬೈನಲ್ಲಿ ರಾಜಸ್ಥಾನಿ ಕುಟುಂಬದಲ್ಲಿ ಬೆಳೆದಿದ್ದರು, ಅಲ್ಲಿ ಅವರ ತಂದೆ ಆದಾಯ ತೆರಿಗೆ ಆಯುಕ್ತರಾಗಿ ಕೆಲಸ ಮಾಡಿದರು. ರಾಕೇಶ್‌  ಸೈಡೆನ್‌ಹ್ಯಾಮ್‌ ಕಾಲೇಜಿನಿಂದ ಪದವಿ ಪಡೆದಿದ್ದರು ಮತ್ತು ನಂತರ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾದಲ್ಲಿ ಸೇರಿಕೊಂಡಿದ್ದರು. 

Tap to resize

Latest Videos

ಇದನ್ನು ಓದಿ: ವಿಮಾನಯಾನ ಸೇವೆ ಆರಂಭಿಸಿದ ‘ಆಕಾಶ ಏರ್‌’: ಶೀಘ್ರದಲ್ಲೇ ಬೆಂಗಳೂರು - ಕೊಚ್ಚಿ ನಡುವೆ ಫ್ಲೈಟ್‌

Billionaire veteran investor and Akasa Air founder Rakesh Jhunjhunwala passes away at the age of 62 in Mumbai pic.twitter.com/36QcRfHXsa

— ANI (@ANI)

ಅವರು ಅಂದಾಜು $5.5 ಶತಕೋಟಿ ನಿವ್ವಳ ಮೌಲ್ಯವನ್ನು ಹೊಂದಿದ್ದರು ಎಂದು ತಿಳಿದುಬಂದಿದ್ದು, ಇದು ಅವರನ್ನು ಭಾರತದಲ್ಲಿ 36ನೇ ಶ್ರೀಮಂತ ವ್ಯಕ್ತಿಯನ್ನಾಗಿ ಮಾಡಿತ್ತು. ಸಕ್ರಿಯ ಹೂಡಿಕೆದಾರರಲ್ಲದೆ, ಜುಂಜುನ್‌ವಾಲಾ ಆಪ್ಟೆಕ್ ಲಿಮಿಟೆಡ್ ಮತ್ತು ಹಂಗಾಮಾ ಡಿಜಿಟಲ್ ಮೀಡಿಯಾ ಎಂಟರ್‌ಟೈನ್‌ಮೆಂಟ್ ಪ್ರೈವೇಟ್‌ ಲಿಮಿಟೆಡ್‌ನ ಮುಖ್ಯಸ್ಥರಾಗಿದ್ದರು. ಅಲ್ಲದೆ, ಪ್ರೈಮ್ ಫೋಕಸ್ ಲಿಮಿಟೆಡ್, ಜಿಯೋಜಿತ್ ಫೈನಾನ್ಶಿಯಲ್ ಸರ್ವಿಸಸ್, ಬಿಲ್ಕೇರ್ ಲಿಮಿಟೆಡ್, ಪ್ರಜ್ ಇಂಡಸ್ಟ್ರೀಸ್ ಲಿಮಿಟೆಡ್, ಪ್ರೊವೋಗ್ ಇಂಡಿಯಾ ಲಿಮಿಟೆಡ್, ಕಾನ್ಕಾರ್ಡ್ ಬಯೋಟೆಕ್ ಲಿಮಿಟೆಡ್, ಇನ್ನೋವಸಿಂತ್ ಟೆಕ್ನಾಲಜೀಸ್ ಲಿಮಿಟೆಡ್, ಮಿಡ್ ಡೇ ಮಲ್ಟಿಮೀಡಿಯಾ ಲಿಮಿಟೆಡ್, ನಾಗಾರ್ಜುನ ಕನ್ಸ್‌ಟ್ರಕ್ಷನ್‌ ಕಂಪನಿ ಲಿಮಿಟೆಡ್ ಮತ್ತು ಟಾಪ್ಸ್ ಸೆಕ್ಯುರಿಟಿ ಲಿಮಿಟೆಡ್ - ಹೀಗೆ ಹಲವು ಕಂಪನಿಗಳ ನಿರ್ದೇಶಕರ ಮಂಡಳಿಯಲ್ಲಿದ್ದಾರೆ.

ರಾಕೇಶ್‌ ಜುಂಜುನ್ವಾಲಾ ಅವರನ್ನು "ಬಿಗ್ ಬುಲ್ ಆಫ್ ಇಂಡಿಯಾ" ಮತ್ತು "ಕಿಂಗ್ ಆಫ್ ಬುಲ್ ಮಾರ್ಕೆಟ್" ಎಂದು ಪ್ರಖ್ಯಾತಿ ಹೊಂದಿದ್ದಾರೆ. ಅವರ ಷೇರು ಮಾರುಕಟ್ಟೆ ಮುನ್ಸೂಚನೆಗಳು ಮತ್ತು ಷೇರು ಮಾರುಕಟ್ಟೆಯ ಗೂಳಿಯ ದೃಷ್ಟಿಕೋನಗಳಿಗೆ ವ್ಯಾಪಕವಾಗಿ ಹೆಸರುವಾಸಿಯಾಗಿದ್ದರು.

ಇತ್ತೀಚೆಗಷ್ಟೇ ರಾಕೇಶ್ ಜುಂಜುನ್‌ವಾಲಾ ಮತ್ತು ಮಾಜಿ ಜೆಟ್ ಏರ್‌ವೇಸ್ ಸಿಇಒ ವಿನಯ್ ದುಬೆ ಭಾರತೀಯ ವಿಮಾನಯಾನ ಸಂಸ್ಥೆ ಆಕಾಶ ಏರ್‌ವೇಸ್‌ ಅನ್ನು ಸಹ-ಸ್ಥಾಪಿಸಿದ್ದರು. ಏರ್‌ಲೈನ್ ಪ್ರಸ್ತುತ 2 ವಿಮಾನಗಳನ್ನು ಹೊಂದಿದ್ದು, 70 ಹೆಚ್ಚಿನ ವಿಮಾನಗಳಿಗೆ ಹೆಚ್ಚುವರಿ ಆದೇಶವನ್ನು ಹೊಂದಿದೆ ಮತ್ತು 9 ಆಗಸ್ಟ್ 2022 ರಂತೆ 3 ನಗರಗಳಿಗೆ ಹಾರುತ್ತದೆ.

ವಿಭಿನ್ನ ಉಡುಗೆಯಿಂದ ವೈರಲ್‌ ಆಯ್ತು ಭಾರತದ ಹೊಸ ವಿಮಾನಯಾನ ಸಂಸ್ಥೆ 'Akasa Air'

ಪ್ರಧಾನಿ ಮೋದಿ ಸೇರಿ ಗಣ್ಯರ ಸಂತಾಪ

ಪ್ರಖ್ಯಾತ ಹೂಡಿಕೆದಾರ ರಾಕೇಶ್‌ ಜುಂಜುನ್ವಾಲಾ ನಿಧನಕ್ಕೆ ಪ್ರಧಾನಿ ಮೋದಿ ಸೇರಿ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್‌ ಮಾಡಿದ ಮೋದಿ, ರಾಕೇಶ್ ಜುಂಜುನ್ವಾಲಾ ಅದಮ್ಯರಾಗಿದ್ದರು. ಪೂರ್ಣ ಜೀವನ, ಹಾಸ್ಯ ಮತ್ತು ಒಳನೋಟವುಳ್ಳ ಅವರು ಆರ್ಥಿಕ ಜಗತ್ತಿಗೆ ಅಳಿಸಲಾಗದ ಕೊಡುಗೆಯನ್ನು ಬಿಟ್ಟು ಹೋಗುತ್ತಾರೆ. ಅವರು ಭಾರತದ ಪ್ರಗತಿಯ ಬಗ್ಗೆ ತುಂಬಾ ಉತ್ಸುಕರಾಗಿದ್ದರು. ಅವರ ಅಗಲಿಕೆ ದುಃಖ ತಂದಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ’’ ಎಂದು ಬರೆದುಕೊಂಡಿದ್ದಾರೆ.

Rakesh Jhunjhunwala was indomitable. Full of life, witty and insightful, he leaves behind an indelible contribution to the financial world. He was also very passionate about India’s progress. His passing away is saddening. My condolences to his family and admirers. Om Shanti. pic.twitter.com/DR2uIiiUb7

— Narendra Modi (@narendramodi)

ಇನ್ನು, ‘’ದಲಾಲ್‌ ಸ್ಟ್ರೀಟ್‌ನ ಬಿಗ್ ಬುಲ್‌ ಆಗಿ ಯುಗದ ಅಂತ್ಯವಾಗಿದೆ. #ರಾಕೇಶ್ ಜುನ್‌ಜುನ್‌ವಾಲಾ ನಿಧನರಾಗಿದ್ದು, ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ಸಂತಾಪಗಳು. ಓಂ ಶಾಂತಿ’’ ಎಂದು ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್‌ ಟ್ವೀಟ್‌ ಮಾಡಿದ್ದಾರೆ. 

click me!