ಆರೋಗ್ಯವೇ ಭಾಗ್ಯ: ಯಡಿಯೂರಪ್ಪ ಆರೋಗ್ಯ ಕ್ಷೇತ್ರಕ್ಕೆ ಕೊಟ್ಟ ಕೊಡುಗೆಗಳು

By Suvarna News  |  First Published Mar 8, 2021, 2:46 PM IST

ಈ ಬಾರಿಯ ಕರ್ನಾಟಕ ಬಜೆಟ್‌ನಲ್ಲಿ ಮುಖ್ಯಮಂತ್ರಿ ಬಿಎಸ್‌ವೈ ಯಡಿಯೂಪ್ಪನವರು ಆರೋಗ್ಯ ಇಲಾಖೆಗೆ ಒಟ್ಟು 11,908 ಕೋಟಿ ರೂ. ಅನುದಾನ ನಿಗದಿಪಡಿಸಿದ್ದಾರೆ. 


ಬೆಂಗಳೂರು, (ಮಾ.08): ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು 2021-22ನೇ ಸಾಲಿನ ಬಜೆಟ್‌ನಲ್ಲಿ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಹೊಸ ಕೊಡುಗೆಗಳನ್ನು ಘೋಷಿಸಿದ್ದಾರೆ. 

ಆರೋಗ್ಯವೇ ಭಾಗ್ಯ ಎಂಬ ನಾಣ್ಣುಡಿಯಿದೆ. ಆರೋಗ್ಯವಿದ್ದರೆ ಏನು ಬೇಕಿದ್ದರೂ ಪಡೆಯಬಹುದು ಎನ್ನುವುದು ಇದರರ್ಥ.ಅದರಂತೆ ಈ ಬಜೆಟ್‌ನಲ್ಲಿ ಮುಖ್ಯಮಂತ್ರಿ ಬಿಎಸ್‌ವೈ ಯಡಿಯೂಪ್ಪನವರು ಆರೋಗ್ಯ ಇಲಾಖೆಗೆ ಒಟ್ಟು 11,908 ಕೋಟಿ ರೂ. ಅನುದಾನ ನಿಗದಿಪಡಿಸಿದ್ದಾರೆ. ಹಾಗಾದ್ರೆ, ಆರೋಗ್ಯ ಇಲಾಖೆಗೆ ಏನೆಲ್ಲಾ ಕೊಟ್ಟಿದ್ದಾರೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ.

Latest Videos

undefined

Live| Karnataka Budget 2021: ಕೃಷಿ ಹಾಗೂ ಅನ್ನದಾತನಿಗೆ ಆತ್ಮ ನಿರ್ಭರದ ಬಲ, ವೈಜ್ಞಾನಿಕ ಮಾರಾಟಕ್ಕೆ ಒತ್ತು

 ಬಜೆಟ್‌ನಲ್ಲಿ ಆರೋಗ್ಯ ಇಲಾಖೆಗೆ ಸಿಕ್ಕಿದ್ದೇನು? 
* ರಾಜ್ಯದ ನಾಲ್ಕು ವಿಭಾಗಗಳಲ್ಲಿ ಒಟ್ಟು 2.5 ಕೋಟಿ ರೂ ವೆಚ್ಚದಲ್ಲಿ 'ತಾಯಂದಿರ ಎದೆಹಾಲಿನ ಬ್ಯಾಂಕ್' ಸ್ಥಾಪನೆ.
* ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಮಾಡುವುದನ್ನು ಉತ್ತೇಜಿಸಲು 10 ಕೋಟಿ ರೂ. ವೆಚ್ಚದಲ್ಲಿ 'ಚಿಗುರು' ಕಾರ್ಯಕ್ರಮಕ್ಕೆ ಚಾಲನೆ.
* 19 ಜಿಲ್ಲಾ ಆಸ್ಪತ್ರೆಗಳಲ್ಲಿ 25 ಹಾಸಿಗೆ ಹಾಗೂ 100 ತಾಲ್ಲೂಕು ಆಸ್ಪತ್ರೆಗಳಲ್ಲಿ 6 ಹಾಸಿಗೆ ಸಾಮರ್ಥ್ಯದ ಐಸಿಯು ಘಟಕಗಳನ್ನು 60 ಕೋಟಿ ರೂ ವೆಚ್ಚದಲ್ಲಿ ಸ್ಥಾಪನೆ.
* ರಾಜ್ಯದ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮಾದರಿ ಮೇಲ್ದರ್ಜೆಗೇರಿಸಲು ಕ್ರಮ
* ಎರಡು ಕೋಟಿ ರೂ ವೆಚ್ಚದಲ್ಲಿ ನಾಲ್ಕು ಪ್ರಾದೇಶಿಕ ಆಹಾರ ಸುರಕ್ಷತಾ ಪ್ರಯೋಗಾಲಯಗಳ ಉನ್ನತೀಕರಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಆಂಟಿ-ಮೈಕ್ರೋಬಿಯಲ್ ರೆಸಿಸ್ಟೆನ್ಸ್ ಘಟಕ ಪ್ರಾರಂಭ
* ದಾವಣಗೆರೆಯಲ್ಲಿ 50 ಹಾಸಿಗೆ ಸಾಮರ್ಥ್ಯದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯ ಉಪ ಕೇಂದ್ರವನ್ನು ನಿರ್ಮಿಸಲಾಗುವುದು. ಇದಕ್ಕಾಗಿ 50 ಕೋಟಿ ರೂ.

* ಶಿವಮೊಗ್ಗದಲ್ಲಿನ ಆಯುರ್ವೇದ ಕಾಲೇಜನ್ನು ಆಯುಷ್ ವಿಶ್ವವಿದ್ಯಾಲಯವಾಗಿ ಉನ್ನತೀಕರಿಸುವುದಾಗಿ ಯಡಿಯೂರಪ್ಪ ಪ್ರಕಟಿಸಿದ್ದಾರೆ.
ಎರಡು ಕೋಟಿ ರೂ ವೆಚ್ಚದಲ್ಲಿ ನಾಲ್ಕು ಪ್ರಾದೇಶಿಕ ಆಹಾರ ಸುರಕ್ಷತಾ ಪ್ರಯೋಗಾಲಯಗಳ ಉನ್ನತೀಕರಣ.
* 2 ಕೋಟಿ ರೂ ವೆಚ್ಚದಲ್ಲಿ ನಾಲ್ಕು ಪ್ರಾದೇಶಿಕ ಆಹಾರ ಸುರಕ್ಷತಾ ಪ್ರಯೋಗಾಲಯಗಳ ಉನ್ನತೀಕರಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಆಂಟಿ-ಮೈಕ್ರೋಬಿಯಲ್ ರೆಸಿಸ್ಟೆನ್ಸ್ ಘಟಕ ಪ್ರಾರಂಭಿಸುವುದನ್ನು ಪ್ರಕಟಿಸಲಾಗಿದೆ.
* ಅಪೌಷ್ಟಿಕತೆಯಿಂದ ತಾಯಿ ಮತ್ತು ಮಗುವನ್ನು ರಕ್ಷಿಸಲು 5 ಕೋಟಿ ರೂ ವೆಚ್ಚದಲ್ಲಿ ಭಾರತೀಯ ವೈದ್ಯ ಪದ್ಧತಿ ಆಧರಿಸಿದ 'ಪೋಷಣೆ ಮತ್ತು ಜೀವನೋಪಾಯ' ಕಾರ್ಯಕ್ರಮ ಜಾರಿ
* ಬೆಂಗಳೂರು, ಮೈಸೂರು, ಬಳ್ಳಾರಿ ಮತ್ತು ಹುಬ್ಬಳ್ಳಿ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ಒಟ್ಟು ಐದು ಕೋಟಿ ರೂ ವೆಚ್ಚದಲ್ಲಿ ತುರ್ತು ವಿಭಾಗ ಪ್ರಾರಂಭ.

* ಮೈಸೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಟ್ರಾಮಾ ಕೇರ್ ಕೇಂದ್ರ ಪ್ರಾರಂಭಿಸಲಾಗುವುದು.
* ಕಲಬುರಗಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸುಟ್ಟಗಾಯಗಳ ಚಿಕಿತ್ಸಾ ಕೇಂದ್ರ ಮತ್ತು ಪ್ಲಾಸ್ಟಿಕ್ ಸರ್ಜರಿ ವಿಭಾಗ.
* ಮಹಿಳೆಯರಲ್ಲಿ ಕ್ಯಾನ್ಸರ್ ರೋಗ ಪತ್ತೆ ಹಚ್ಚಲು 11 ಕೋಟಿ ರೂ ಗಳ ವೆಚ್ಚದಲ್ಲಿ ಹೊಸ ಸುಸಜ್ಜಿತ ಸಂಚಾರಿ ಪ್ರಯೋಗಾಲಯ 
* ಶಿವಮೊಗ್ಗ ಮತ್ತು ಮೈಸೂರಿನಲ್ಲಿ 100 ಕೋಟಿ ರೂ ವೆಚ್ಚದಲ್ಲಿ ಪ್ರಾದೇಶಿಕ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಸ್ಥಾಪನೆ.
* ಚಿತ್ರದುರ್ಗ ಜಿಲ್ಲೆಯಲ್ಲಿ ಸಾರ್ವಜನಿಕ ವಿಜ್ಞಾನಗಳ ಸಂಸ್ಥೆಗಳಲ್ಲಿ ಪ್ರಸಕ್ತ ಸಾಲಿನಿಂದ 100 ಸ್ನಾತಕೋತ್ತರ ಸೀಟುಗಳ ಹೆಚ್ಚಳ.
* ಚಿತ್ರದುರ್ಗ ಜಿಲ್ಲೆಯಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಡಿ ಹೊಸ ವೈದ್ಯಕೀಯ ಕಾಲೇಜು ಪ್ರಾರಂಭ. 
* ಧಾರವಾಡದ ಡಿಮ್ಹಾನ್ಸ್ ಸಂಸ್ಥೆಯನ್ನು 75 ಕೋಟಿ ರೂ ವೆಚ್ಚದಲ್ಲಿ ಮಾನಸಿಕ ನರರೋಗಿಗಳ ಸುಸಜ್ಜಿತ ಚಿಕಿತ್ಸಾ ಸಂಸ್ಥೆಯನ್ನಾಗಿ ಹಂತ ಹಂತವಾಗಿ ಮೇಲ್ದರ್ಜೆಗೆ.
* ಹಾಸನ ಮತ್ತು ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗಳಲ್ಲಿ ಪ್ರಸಕ್ತ ಸಾಲಿನಿಂದ 100 ಸ್ನಾತಕೋತ್ತರ ಸೀಟುಗಳ ಹೆಚ್ಚಳ.
* ಬುದ್ಧಿಮಾಂದ್ಯರ ಆರೈಕೆ ಮಾಡಲು ಅನುಕೂಲವಾಗುವಂತೆ ಶೇ.75 ಕ್ಕಿಂತ ಹೆಚ್ಚಿನ ಮನೋವೈಕಲ್ಯತೆ ಹೊಂದಿದವರಿಗೆ ನೀಡುವ  ಮಾಸಾಶನ 200 ರೂ.ಗಳಿಗೆ ಹೆಚ್ಚಳ. ಹುಟ್ಟಿನಿಂದಲೇ ಶ್ರವಣದೋಷವುಳ್ಳ ನಾಲ್ಕು ವರ್ಷದೊಳಗಿನ ಮಕ್ಕಳಿಗೆ ಅವರ ತಾಯಂದಿರ ಸಹಿತ ವಾಕ್ ತರಬೇತಿ ನೀಡಲು ಕ್ರಮ.

click me!