Budget 2023:ಈ ಬಾರಿಯ ಬಜೆಟ್ ನಲ್ಲಿ ಆದಾಯ ತೆರಿಗೆ ಸ್ಲ್ಯಾಬ್ ಬದಲಾವಣೆ ಆಗುತ್ತಾ? ಜನರ ನಿರೀಕ್ಷೆಗಳು ಏನಿವೆ?

By Suvarna News  |  First Published Jan 27, 2023, 5:01 PM IST

2023ನೇ ಸಾಲಿನ ಬಜೆಟ್ ಮಂಡನೆಗೆ ದಿನಗಣನೆ ಪ್ರಾರಂಭವಾಗಿದೆ. ಈ ನಡುವೆ ಬಜೆಟ್ ಕುರಿತು ಜನರ ನಿರೀಕ್ಷೆಗಳು ಕೂಡ ಹೆಚ್ಚಿವೆ. ಹಾಗಾದ್ರೆ ಈ ಬಾರಿಯ ಬಜೆಟ್ ನಿಂದ ಸಾಮಾನ್ಯ ಜನರು ಏನು ನಿರೀಕ್ಷೆ ಮಾಡುತ್ತಿದ್ದಾರೆ? ಇಲ್ಲಿದೆ ಮಾಹಿತಿ. 
 


ನವದೆಹಲಿ (ಜ.27): 2023-24ನೇ ಆರ್ಥಿಕ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಸಂಸತ್ತಿನಲ್ಲಿ ಮಂಡಿಸಲಿದ್ದಾರೆ. 2024ರಲ್ಲಿ ಲೋಕಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಬಾರಿಯ ಬಜೆಟ್ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ಉತ್ಪಾದನಾ ವಲಯ ಹಾಗೂ ಗ್ರಾಮೀಣ ಆರ್ಥಿಕತೆಗೆ ಈ ಬಾರಿಯ ಬಜೆಟ್ ನಲ್ಲಿ ಹೆಚ್ಚಿನ ಮಹತ್ವ ನೀಡುವ ನಿರೀಕ್ಷೆಯಿದೆ. ಹಾಗೆಯೇ ಭಾರತದ ಮಧ್ಯಮ ವರ್ಗ, ರೈತರು ಹಾಗೂ ಹೂಡಿಕೆದಾರರಿಗೆ ಬಜೆಟ್ ಮೂಲಕ ನಿರಾಳತೆ ನೀಡುವಂತಹ ನಿರ್ಧಾರಗಳನ್ನು ಪ್ರಕಟಿಸುವ ಸಾಧ್ಯತೆಯಿದೆ ಎಂದು ಕೂಡ ಹೇಳಲಾಗಿದೆ. ಬಜೆಟ್ ಅಧಿವೇಶನ ಜನವರಿ 31ರಿಂದ ಏಪ್ರಿಲ್ 6ರ ತನಕ ನಡೆಯಲಿದೆ. ಬಜೆಟ್ ಎಂದ ತಕ್ಷಣ ದೇಶದ ಪ್ರತಿ ವರ್ಗದ ಜನರು ಒಂದಿಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿರುತ್ತಾರೆ. ಈ ಬಾರಿಯಂತೂ ಮುಂದಿನ ವರ್ಷದ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಜನಪ್ರಿಯ ಯೋಜನೆಗಳನ್ನು ಘೋಷಣೆ ಮಾಡುವ ನಿರೀಕ್ಷೆಯಿದೆ. ಹಾಗಾದ್ರೆ ಈ ಬಾರಿಯ ಬಜೆಟ್ ನಲ್ಲಿ ವಿವಿಧ ವಲಯಕ್ಕೆ ಸಂಬಂಧಿಸಿದಂತೆ ಜನರು ಯಾವೆಲ್ಲ ನಿರೀಕ್ಷೆಗಳನ್ನಿಟ್ಟುಕೊಳ್ಳಬಹುದು? ಇಲ್ಲಿದೆ ಮಾಹಿತಿ.

*ನೇರ ತೆರಿಗೆ ಪಾವತಿಯಲ್ಲಿ ಬಹುದೊಡ್ಡ ಪಾಲು ಹೊಂದಿರುವ ಆದಾಯ ತೆರಿಗೆ ಪಾವತಿದಾರರು ಈ ಬಾರಿಯ ಬಜೆಟ್ ಕುರಿತು ಹೆಚ್ಚಿನ ನಿರೀಕ್ಷೆಗಳನ್ನಿಟ್ಟುಕೊಂಡಿದ್ದಾರೆ. ಅದರಲ್ಲೂ ಹೆಚ್ಚಿನ ತೆರಿಗೆ ಪ್ರಯೋಜನ ಸಿಗಬಹುದು ಎಂಬ ನಿರೀಕ್ಷೆ ಈ ಬಾರಿ ತುಸು ಹೆಚ್ಚೇ ಇದೆ. ತೆರಿಗೆ ಕಡಿತದ ಮಿತಿಯನ್ನು 50,000ರೂ.ನಿಂದ ಒಂದು ಲಕ್ಷ ರೂ.ಗೆ ಏರಿಕೆ ಮಾಡೋದು ಇದರಲ್ಲಿ ಮುಖ್ಯವಾದದ್ದು. 
*ಜಿಡಿಪಿ ಬೆಳವಣಿಗೆಯನ್ನು ನೀತಿಗಳ ಮೂಲಕ ಉತ್ತೇಜಿಸಲು 2023ನೇ ಕೇಂದ್ರ ಬಜೆಟ್ ನಲ್ಲಿ ವಿತ್ತ ಸಚಿವೆ ಹೆಚ್ಚಿನ ಒತ್ತು ನೀಡಲಿದ್ದಾರೆ ಎಂದು ಅಂದಾಜಿಸಲಾಗಿದೆ.
*ಕಳೆದ ಬಾರಿಯ ಬಜೆಟ್ ನಲ್ಲಿ ಆದಾಯ ತೆರಿಗೆ ಸ್ಲ್ಯಾಬ್ ನಲ್ಲಿ ಯಾವುದೇ ಬದಲಾವಣೆ ಮಾಡಿರಲಿಲ್ಲ. ಹೀಗಾಗಿ ಈ ಬಾರಿ ಆದಾಯ ತೆರಿಗೆ ಸ್ಲ್ಯಾಬ್ ನಲ್ಲಿ ಬದಲಾವಣೆ ಮಾಡುವ ಮೂಲಕ ತೆರಿಗೆ ಭಾರವನ್ನು ಸರ್ಕಾರ ತಗ್ಗಿಸಲಿದೆ ಎಂಬುದು ಆದಾಯ ತೆರಿಗೆ ಪಾವತಿಸುವ ಮಾಸಿಕ ವೇತನ ಪಡೆಯುವ ಪ್ರತಿಯೊಬ್ಬ ವ್ಯಕ್ತಿಯ ನಿರೀಕ್ಷೆಯಾಗಿದೆ.
*ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮಾದರಿಯಲ್ಲೇ ಜಾನುವಾರುಗಳಿಗೆ ವಿಮೆ ಕಾರ್ಯಕ್ರಮವನ್ನು ಬಜೆಟ್ ನಲ್ಲಿ ಸೇರ್ಪಡೆಗೊಳಿಸಿದ್ರೆ ಉತ್ತಮ ಎಂಬ ಅಭಿಪ್ರಾಯ ರೈತರಲ್ಲಿದೆ. ಈ ರೀತಿಯ ವಿಮಾ ಯೋಜನೆಯಲ್ಲಿ ಹೈನುಗಾರರು ಸ್ವಲ್ಪ ಮೊತ್ತದ ಪ್ರೀಮಿಯಂ ಪಾವತಿಸಬೇಕು. ಉಳಿದ ಮೊತ್ತವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮಾನವಾಗಿ ಭರಿಸುವಂತಿರಬೇಕು ಎಂಬುದು ರೈತಾಪಿ ವರ್ಗದ ಬೇಡಿಕೆಯಾಗಿದೆ.

Tap to resize

Latest Videos

undefined

ಎಸ್ ಬಿಐ ಗ್ರಾಹಕರೇ ಗಮನಿಸಿ, ಒಂದೇ ಒಂದು ಮಿಸ್ಡ್ ಕಾಲ್ ನೀಡಿದ್ರೆ ಮಿನಿ ಸ್ಟೇಟ್ಮೆಂಟ್ ಲಭ್ಯ!

*ರಕ್ಷಣಾ ಸಶಸ್ತ್ರಗಳ ಸ್ಥಳೀಯ ಉತ್ಪಾದನೆ ಉತ್ತೇಜಿಸಲು ಈ ವಲಯಕ್ಕೆ ನೀಡುವ ಅನುದಾನದ ಪ್ರಮಾಣ ಶೇ.10-ಶೇ.15ಕ್ಕೆ ಹೆಚ್ಚಳ ಮಾಡುವ ನಿರೀಕ್ಷೆ.
*ಮುಂಬರುವ ಹಣಕಾಸು ಸಾಲಿನಲ್ಲಿ ಆಹಾರ ಸಬ್ಸಿಡಿ ವೆಚ್ಚವನ್ನು ತಗ್ಗಿಸಲು ಕ್ರಮ ಕೈಗೊಂಡಿರುವ ಸರ್ಕಾರ.
*ದೇಶದ ಪ್ರಮುಖ ನಗರಗಳು ಈಗಾಗಲೇ ಸಾಕಷ್ಟು ಉದ್ಯೋಗಾವಕಾಶ ಸೃಷ್ಟಿಸಿರುವ ಕಾರಣ ಸಣ್ಣ ನಗರಗಳಲ್ಲಿ ಉದ್ಯೋಗ ಸೃಷ್ಟಿ ಉತ್ತೇಜನಕ್ಕೆ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ.  ಸಣ್ಣ ನಗರಗಳಲ್ಲಿ ಹೂಡಿಕೆ ಮಾಡಲು ಕಂಪನಿಗಳಿಗೆ ಸರ್ಕಾರ ಹೆಚ್ಚಿನ ಉತ್ತೇಜನ ನೀಡಬೇಕಿದೆ.
*ಪ್ರತಿಯೊಬ್ಬ ವ್ಯಕ್ತಿಯು ಒಂದೇ ರೀತಿಯ ಆದಾಯ ತೆರಿಗೆ ಸ್ಲ್ಯಾಬ್ ದರಗಳಿಗೆ ಒಳಪಡಬೇಕು. ವಯಸ್ಸಿನ ಆಧಾರದಲ್ಲಿ ಮಾತ್ರ ವಿಭಿನ್ನ ತೆರಿಗೆ ಸ್ಲ್ಯಾಬ್ ಗಳನ್ನು ರಚಿಸಬೇಕು. ಮಹಿಳೆಯರಿಗೆ ಪ್ರತ್ಯೇಕ ಆದಾಯ ತೆರಿಗೆ ಸ್ಲ್ಯಾಬ್ ಗಳನ್ನು ನಿಗದಿಪಡಿಸುವ ಜೊತೆಗೆ ವಿನಾಯ್ತಿ ಸೌಲಭ್ಯಗಳನ್ನು ಕೂಡ ನೀಡಬೇಕು ಎಂಬುದು ತಜ್ಞರ ಅಭಿಪ್ರಾಯ.

ಒಂದೇ ಒಂದು ರಿಪೋರ್ಟ್‌, 1.44 ಲಕ್ಷ ಕೋಟಿ ಕಳೆದುಕೊಂಡ ಗೌತಮ್‌ ಅದಾನಿ!

*ಈ ಬಾರಿಯ ಬಜೆಟ್ ನಲ್ಲಿ ಪ್ರಧಾನ ಮಂತ್ರಿ ಸಮ್ಮಾನ್ ನಿಧಿ ಯೋಜನೆಯ ಮೊತ್ತವನ್ನು ಕೇಂದ್ರ ಸರ್ಕಾರ ಏರಿಕೆ ಮಾಡಬಹುದು ಎಂಬ ನಿರೀಕ್ಷೆಯನ್ನು ರೈತರು ಹೊಂದಿದ್ದಾರೆ. 
* ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳು ಶತಾಬ್ದಿ ಹಾಗೂ ರಾಜಧಾನಿ ಎಕ್ಸ್ ಪ್ರೆಸ್ ರೈಲುಗಳ ಜಾಗವನ್ನು ನಿಧಾನವಾಗಿ ಆಕ್ರಮಿಸಿಕೊಳ್ಳಬೇಕು. 2023ನೇ ಸಾಲಿನ ಬಜೆಟ್ ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೊಸ ರೈಲುಗಳನ್ನು ಪ್ರಸ್ತಾಪಿಸುವ ಸಾಧ್ಯತೆಯಿದ್ದು,  400 ವಂದೇ ಭಾರತ್ ರೈಲುಗಳನ್ನು ಪ್ರಾರಂಭಿಸುವ ದಿನಾಂಕಗಳನ್ನು ಘೋಷಿಸುವ ಸಾಧ್ಯತೆಯಿದೆ. 

click me!