ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡ ಮೋದಿ ಸರ್ಕಾರ

Published : Jan 02, 2019, 07:42 PM IST
ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡ ಮೋದಿ ಸರ್ಕಾರ

ಸಾರಾಂಶ

ಸಾರ್ವಜನಿಕ ವಲಯದ 3 ಬ್ಯಾಂಕ್ ಗಳ ವಿಲೀನಕ್ಕೆ ಕೇಂದ್ರ ಸಮ್ಮತಿ! ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ 3 PSU ಬ್ಯಾಂಕ್ ವಿಲೀನಕ್ಕೆ ಓಕೆ! ಇದು ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡ ಮೋದಿ ಸರ್ಕಾರ.

ನವದೆಹಲಿ, [ಜ.02]: ಸಾರ್ವಜನಿಕ ವಲಯದ 3 ಪ್ರಮುಖ ಬ್ಯಾಂಕ್ ಗಳ ವಿಲೀನಕ್ಕೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದೆ.

ಇಂದು [ಬುಧವಾರ] ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ವಿಜಯ ಬ್ಯಾಂಕ್‌, ದೇನಾ ಬ್ಯಾಂಕ್‌ ಮತ್ತು ಬ್ಯಾಂಕ್‌ ಆಫ್‌ ಬರೋಡಾ ವಿಲೀನಕ್ಕೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ ತೋರಿದೆ. 

ಭಾರತೀಯ ಬ್ಯಾಂಕಿಂಗ್‌ ಇತಿಹಾಸದಲ್ಲೇ ಮೂರು ಪ್ರಮುಖ ಬ್ಯಾಂಕ್‌ಗಳ ವಿಲೀನ ಇದೇ ಮೊದಲಾಗಿದೆ. ಕೇಂದ್ರದ ಒಪ್ಪಿಗೆ ಮೇರೆಗೆ ಇನ್ಮುಂದೆ ಬ್ಯಾಂಕ್ ಆಫ್ ಬರೋಡಾ ಜತೆ ದೇನಾ ಬ್ಯಾಂಕ್, ವಿಜಯಾ ಬ್ಯಾಂಕ್ ವಿಲೀನವಾಗಲಿವೆ. 

ಇನ್ನು ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್‌, ವಿಲೀನದ ನಂತರ ವಿಜಯ ಬ್ಯಾಂಕ್‌ ಮತ್ತು ದೇನಾ ಬ್ಯಾಂಕ್‌ ನೌಕರರು ಬ್ಯಾಂಕ್‌ ಆಫ್‌ ಬರೋಡಾಗೆ ವರ್ಗಾವಣೆಯಾಗಲಿದ್ದಾರೆ. 

ದೇನಾ ಬ್ಯಾಂಕ್‌ನ 1000 ಷೇರು ಹೊಂದಿರುವವರಿಗೆ ಬ್ಯಾಂಕ್‌ ಆಫ್‌ ಬರೋಡಾದ 110 ಈಕ್ವಿಟಿ ಷೇರು ದೊರೆಯಲಿದೆ. ಅದೇ ರೀತಿ ವಿಜಯ ಬ್ಯಾಂಕ್‌ನ 1000 ಷೇರು ಹೊಂದಿರುವವರಿಗೆ 402 ಈಕ್ವಿಟಿ ಷೇರು ದೊರೆಯಲಿದೆ ಎಂದು ಹೇಳಿದರು.

ಕಳೆದ ಸೆಪ್ಟೆಂಬರ್‌ನಲ್ಲಿ ಅರುಣ್ ಜೇಟ್ಲಿ ಅಧ್ಯಕ್ಷತೆಯಲ್ಲಿ ನಡೆದ ಪರ್ಯಾಯ ಕಾರ್ಯ ಯೋಜನೆ ಸಮಿತಿಯ ಸಭೆಯಲ್ಲಿ ಮೂರು ಬ್ಯಾಂಕ್‌ಗಳ ವಿಲೀನಕ್ಕೆ ಅನುಮೋದನೆ ನೀಡಲಾಯಿತು. 

ಈ ವಿಲೀನದ ನಂತರ ಬ್ಯಾಂಕ್‌ ಆಫ್‌ ಬರೋಡಾ ದೇಶದ ಮೂರನೇ ಅತಿ ದೊಡ್ಡ ಬ್ಯಾಂಕ್‌ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.  

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ಬೆಂಗಳೂರಿನಲ್ಲಿ ಊಬರ್‌ ಕ್ರಾಂತಿಯ ಹೆಜ್ಜೆ, B2B ಲಾಜಿಸ್ಟಿಕ್ಸ್, ಮೆಟ್ರೋ ಟಿಕೆಟ್‌ ಕೂಡ ಲಭ್ಯ!
Vastu Tips: ಮನೆಯಲ್ಲಿ 'ಓಡುತ್ತಿರುವ ಏಳು ಕುದುರೆ' ಫೋಟೋ ಯಾಕೆ ಹಾಕ್ತಾರೆ? ಸೀಕ್ರೆಟ್ ಗೊತ್ತಾದ್ರೆ ಈಗ್ಲೇ ಹಾಕ್ತೀರಾ..