
ನವದೆಹಲಿ (ಮಾ.19): ಬ್ಯಾಂಕಿಗ್ ವ್ಯವಸ್ಥೆ ಹಾಗೂ ಗಾತ್ರದ ದೃಷ್ಟಿಯಿಂದ ಮಹತ್ವದ್ದಾಗಿರುವ ಅಗ್ರ ಬ್ಯಾಂಕುಗಳ ಪಟ್ಟಿಯಲ್ಲಿ ಕೆನರಾ ಬ್ಯಾಂಕ್ ಕೂಡ ಸೇರ್ಪಡೆ ಆಗುವ ಸಾಧ್ಯತೆ ಇದೆ. ಆರ್‌ಬಿಐನ ಅಗ್ರ ಬ್ಯಾಂಕುಗಳ ಪಟ್ಟಿಯಲ್ಲಿ ಸದ್ಯ ಎಸ್‌ಬಿಐ, ಐಸಿಐಸಿಐ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕುಗಳಿವೆ.
ಈ ಬ್ಯಾಂಕುಗಳು ಕಾರ್ಯನಿರ್ವಹಣೆಗೆ ದೊಡ್ಡ ಮಟ್ಟದ ಬಂಡವಾಳವನ್ನು ಹೊಂದಿರುವ ಕಾರಣ ಹಾಗೂ ಬಂಡವಾಳವನ್ನು ಆಕರ್ಷಿಸುವ ಸಾಮರ್ಥ್ಯ ಇರುವ ಕಾರಣ ಪತನಗೊಳ್ಳುವ ಸಾಧ್ಯತೆ ಇಲ್ಲ. ಈ ಬ್ಯಾಂಕುಗಳ ಮೇಲೆ ಜನರು ನಂಬಿಕೆ ಇಡಬಹುದಾಗಿದೆ.
ಕಳೆದ 2 ವರ್ಷಗಳಿಂದ ಒಂದೇ ಒಂದು 2000 ಮುಖಬೆಲೆಯ ನೋಟು ಮುದ್ರಿಸಿಲ್ಲ: ಕೇಂದ್ರ! ...
ಸಾರ್ವಜನಿಕ ವಲಯದ ಬ್ಯಾಂಕುಗಳ ವಿಲೀನದಿಂದಾಗಿ ಬ್ಯಾಂಕ್ ಆಫ್ ಬರೋಡಾ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಮತ್ತು ಕೆನರಾ ಬ್ಯಾಂಕುಗಳು ಗಾತ್ರದಲ್ಲಿ ಕ್ರಮವಾಗಿ 3,4, ಮತ್ತು 5ನೇ ಸ್ಥಾನವನ್ನು ಅಲಂಕರಿಸಿದ್ದು, ಐಸಿಐಸಿಐ ಬ್ಯಾಂಕ್‌ನ್ನು 6ನೇ ಸ್ಥಾನಕ್ಕೆ ತಳ್ಳಿವೆ. ಈ ಹಿನ್ನೆಲೆಯಲ್ಲಿ ಆರ್‌ಬಿಐ ವ್ಯವಸ್ಥಿತ ಬ್ಯಾಂಕುಗಳ ಪಟ್ಟಿಯನ್ನು ಪರಿಷ್ಕೃರಿಸಲು ಮುಂದಾಗಿದೆ ಎಂದು ವರದಿಗಳು ತಿಳಿಸಿವೆ.
ಈ ಪಟ್ಟಿಸೇರ್ಪಡೆಯಿಂದಾಗಿ ಜನರು ಬ್ಯಾಂಕ್‌ಗಳ ಮೇಲೆ ಹೆಚ್ಚಿನ ವಿಶ್ವಾಸ ಇಡಬಹುದು, ಅದೇ ರೀತಿಯಲ್ಲಿ ಬ್ಯಾಂಕ್‌ಗಳು ಮಾರುಕಟ್ಟೆಯಿಂದ ಕಡಿಮೆ ಬಡ್ಡಿದರದಲ್ಲಿ ಬಂಡವಾಳ ಸಂಗ್ರಹಿಸಬಹುದು.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.