
ನವದೆಹಲಿ(ಜೂ.30): ನಾಳೆ (ಜುಲೈ.೧) ಕ್ಕೆ ಜಿಎಸ್ಟಿ ತೆರಿಗೆ ವ್ಯವಸ್ಥೆ ಜಾರಿಗೆ ಬಂದು ಒಂದು ವರ್ಷವಾಗಲಿದ್ದು, ಕೇಂದ್ರ ಸರ್ಕಾರ ನಾಳೆ 'ಜಿಎಸ್ಟಿ ದಿನ' ಆಚರಣೆ ಹಮ್ಮಿಕೊಂಡಿದೆ.
ಭಾರತದ ತೆರಿಗೆ ವ್ಯವಸ್ಥೆಯಲ್ಲಿನ ಸುಧಾರಣೆಯಲ್ಲಿ ಭಾಗಿಯಾಗುವುದಕ್ಕೆ ತೆರಿಗೆದಾರರು ಸಿದ್ಧರಿರುತ್ತಾರೆ ಎಂಬುದನ್ನು ಜಿಎಸ್ಟಿಯ ಮೊದಲ ವರ್ಷ ಉದಾಹರಣೆ ನೀಡಿದೆ ಎಂದು ಹಣಕಾಸು ಇಲಾಖೆ ಹೇಳಿದೆ.
2017 ರ ಜೂ.30-ಜುಲೈ 1 ರಂದು ನವದೆಹಲಿಯ ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಜಿಎಸ್ಟಿ ತೆರಿಗೆ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿತ್ತು.
ಜಿಎಸ್ಟಿ ದಿನಾಚರಣೆ ಕಾರ್ಯಕ್ರಮದಲ್ಲಿ ಹಣಕಾಸು ಸಚಿವ ಪಿಯೂಷ್ ಗೋಯಲ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ಹಣಕಾಸು ಇಲಾಖೆ ರಾಜ್ಯ ಸಚಿವ ಶಿವ ಪ್ರತಾಪ್ ಶುಕ್ಲ ಗೌರವ ಅತಿಥಿಗಳಾಗಿರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಜಿಎಸ್ಟಿ ತೆರಿಗೆಯಿಂದಾಗಿ ದೇಶ ಆರ್ಥಿಕವಾಗಿ ಒಗ್ಗೂಡಿದೆ ಎಂದು ಹಣಕಾಸು ಇಲಾಖೆ ಹೇಳಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.